ಬೀದರ್‌ | ಬಾಲ್ಯ ವಿವಾಹ ಕಂಡು ಬಂದರೆ ಪ್ರಕರಣ ದಾಖಲಿಸಿ : ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

Date:

2024ರ ಏಪ್ರಿಲ್ ದಿಂದ 2025ರ ಮಾರ್ಚ್‌ವರೆಗೆ ಜಿಲ್ಲೆಯಲ್ಲಿ ಒಟ್ಟು 58 ಬಾಲ್ಯ ವಿವಾಹ ಪ್ರಕರಣಗಳಲ್ಲಿ 55 ಬಾಲ್ಯ ವಿವಾಹ ತಡೆಯಯಲಾಗಿದ್ದು, 3 ಬಾಲ್ಯ ವಿವಾಹ ಜರುಗಿವೆ. ಅವುಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. 2025ರ ಏಪ್ರಿಲ್-ಮೇ ತಿಂಗಳಲ್ಲಿ ಒಟ್ಟು 31 ಬಾಲ್ಯ ವಿವಾಹವನ್ನು ತಡೆಯಲಾಗಿದ್ದು, ಯಾವುದೇ ಬಾಲ್ಯ ವಿವಾಹ ಜರುಗಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.

ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಬಾಲ್ಯ ವಿವಾಹ ತಡೆಗಟ್ಟುವ ಸಮನ್ವಯ ಮತ್ತು ಪರಿಶೀಲನಾ ಸಮಿತಿ ಮತ್ತು ಜಿಲ್ಲಾ ಮಕ್ಕಳ ಕಲ್ಯಾಣ ಮತ್ತು ರಕ್ಷಣಾ ಸಮಿತಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ʼಬೀದರ ಜಿಲ್ಲೆಯಲ್ಲಿ ಎಲ್ಲೇ ಬಾಲ್ಯ ವಿವಾಹ ಕಂಡು ಬಂದಲ್ಲಿ ಕೂಡಲೇ ಪ್ರಕರಣ ದಾಖಲಿಸಿʼ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ʼಜಿಲ್ಲೆಯಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಿದ್ದು, ಅವುಗಳನ್ನು ತಡೆಯುವ ಕೆಲಸ ಸಂಬಂಧಪಟ್ಟ ಅಧಿಕಾರಿಗಳು ಮಾಡಬೇಕು. ಬಾಲ್ಯ ವಿವಾಹ ಮಾಡುತ್ತಿರುವ ಪೋಷಕರು, ಪೂಜಾರಿಗಳು, ಕಲ್ಯಾಣ ಮಂಟಪ ಮಾಲಿಕರು ಮತ್ತು ಆಮಂತ್ರಣ ಪತ್ರಿಕೆ ಅಂಗಡಿಯ ಮಾಲಿಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕುʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಮದುವೆ ವಯಸ್ಸಿಗೆ ಸಂಬಂಧಿಸಿದ ಜನನ ಪ್ರಮಾಣ ಪತ್ರ, ಎಸ್‌ಎಸ್‌ಎಲ್‌ಸಿ ಅಂಕ ಪಟ್ಟಿ ಅಥವಾ ವೈದ್ಯಕೀಯ ವಯಸ್ಸು ಪರೀಕ್ಷೆ ಪ್ರಮಾಣ ಪತ್ರ ಮಾತ್ರ ಪರಿಗಣಿಸಬೇಕು. ಶಾಲೆ ಬಿಟ್ಟ ಬಾಲಕಿಯರ ವಿವರವನ್ನು ಶಾಲಾ ಶಿಕ್ಷಣ ಇಲಾಖೆ ನೀಡಬೇಕು. ಶಾಲೆ ಬಿಡಲು ಕಾರಣವೇನು ಎಂದು ತಿಳಿದುಕೊಳ್ಳಬೇಕು. ಗ್ರಾಮ ಪಂಚಾಯಿತಿಯ ಕಾವಲು ಸಮಿತಿಯು ಕೂಡ ಗ್ರಾಮಗಳಲ್ಲಿ ಬಾಲ್ಯ ವಿವಾಹ ಕಂಡು ಬಂದಲ್ಲಿ ತಕ್ಷಣ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಬೇಕುʼ ಎಂದು ತಿಳಿಸಿದರು.

WhatsApp Image 2025 06 20 at 3.32.12 PM 1
ಸಭೆಯಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

ʼಜಿಲ್ಲೆಯಲ್ಲಿ 2024-2025ನೇ ಸಾಲಿನಲ್ಲಿ ಆರ್‌ಸಿಎಚ್ ಪೋರ್ಟಲ್‌ನಲ್ಲಿ ನೋಂದಣಿಯಾದ ಬಾಲ ಗರ್ಭಿಣಿಯರ ಸಂಖ್ಯೆ 75 ಇದ್ದು, ಇದನ್ನು ನಾವು ಗಂಭೀರವಾಗಿ ಪರಿಗಣಿಸಿ ಮುಂದಿನ ದಿನಗಳಲ್ಲಿ ಈ ರೀತಿಯ ಪ್ರಕರಣಗಳು ಆಗದಂತೆ ಎಚ್ಚರವಹಿಸಬೇಕುʼ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ʼಜಿಲ್ಲೆಯಲ್ಲಿ 2024-25ನೇ ಸಾಲಿನಲ್ಲಿ 37 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿವೆ, ಹಾಗಾಗಿ ಜನರಿಗೆ ಪೋಕ್ಸೋ ಕಾಯ್ದೆ ಬಗ್ಗೆ ಅರಿವು ಮೂಡಿಸುವ ಅಗತ್ಯವಿದೆ. ಪೋಕ್ಸೋ ಪ್ರಕರಣದ ಹೆಣ್ಣು ಮಕ್ಕಳನ್ನು ಸಖಿ ಒನ್ ಸೆಂಟರ್ ಮೂಲಕ ಕೌನ್ಸಿಲಿಂಗ್ ಮಾಡಿ ಒಂದೇ ಸೂರಿನಡಿ ಸಹಾಯ ಮಾಡಲಾಗುವುದುʼ ಎಂದರು.

ʼಜಿಲ್ಲೆಯಲ್ಲಿ ಚಿಂದೋಡಿ ಆಯುವ ಮತ್ತು ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳನ್ನು ಕಾಪಾಡಿ ಅವರಿಗೆ ಶಾಲೆಗೆ ದಾಖಲಿಸಬೇಕುʼ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನೂ ಓದಿ : ಬೀದರ್‌ | ಕಲಾ ಗ್ರಾಮ ನಿರ್ಮಾಣಕ್ಕೆ ಶೀಘ್ರವೇ ಸ್ಥಳ ಅಂತಿಮ : ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಪ್ರೊಬೇಷನರಿ ಐಎಎಸ್ ಅಧಿಕಾರಿ ರಮ್ಯಾ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶ್ರೀಧರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಗುರುರಾಜ, ಡಿವೈಎಸ್‌ಪಿ ಶಿವನಗೌಡ ಪಾಟೀಲ್ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...