ಬೀದರ್ | ಕಾನೂನು ಬಾಹಿರ ಚಟುವಟಿಕೆ : ಏಪ್ರಿಲ್ ತಿಂಗಳಲ್ಲಿ 184 ಪ್ರಕರಣ; ₹30.32 ಲಕ್ಷ ಮೌಲ್ಯದ ವಸ್ತು ಜಪ್ತಿ

Date:

ಏಪ್ರಿಲ್ ತಿಂಗಳಲ್ಲಿ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ‌ ಕಾನೂನು ಬಾಹಿರವಾಗಿ ನಡೆದ ಜೂಜಾಟ, ಮಟ್ಕಾ, ಕ್ರಿಕೆಟ್ ಬೆಟ್ಟಿಂಗ್, ಗಾಂಜಾ, ಪಡಿತರ ಅಕ್ಕಿ ಅಕ್ರಮ ಸಂಗ್ರಹ, ಅಕ್ರಮ ಮದ್ಯ ಮಾರಾಟ, ನಕಲಿ ನೋಟು ಸಂಬಂಧ 184 ಪ್ರಕರಣಗಳನ್ನು ದಾಖಲಿಸಿ ಒಟ್ಟು 355 ಜನ ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ತಿಳಿಸಿದ್ದಾರೆ.

ಬಂಧಿತರಿಂದ ₹30.32 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿಕೊಂಡು ಆರೋಪಿತರನ್ನು ನ್ಯಾಯಾಲಯದ ವಶಕ್ಕೆ ಒಪ್ಪಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಕರಣಗಳ ವಿವರ ಹೀಗಿದೆ:

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

26 ಜೂಜಾಟ ಪ್ರಕರಣಗಳಲ್ಲಿ 156 ಆರೋಪಿತರಿಂದ ₹1.24 ಲಕ್ಷ, 20 ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಗಳಲ್ಲಿ 34 ಆರೋಪಿಗಳ ಬಳಿಯಿಂದ ₹67,350 ಸಾವಿರ, 48 ಮಟ್ಕಾ ಪ್ರಕರಣಗಳಲ್ಲಿ 56 ಆರೋಪಿತರಿಂದ ₹58,356, ಪಡಿತರ ಅಕ್ಕಿ ಅಕ್ರಮ ಸಂಗ್ರಹ 2 ಪ್ರಕರಣಗಳಲ್ಲಿ 3 ಆರೋಪಿತರಿಂದ ₹26,800 , ಡ್ರಗ್ಸ್ 2 ಪ್ರಕರಣಗಳಲ್ಲಿ 5 ಆರೋಪಿತರಿಂದ 26.30 ಲಕ್ಷ, ಹಾಗೂ 85 ಅಬಕಾರಿ ಪ್ರಕರಣಗಳಲ್ಲಿ 97 ಆರೋಪಿಗಳ ಬಳಿಯಿಂದ ₹1.11 ಲಕ್ಷ ಹಾಗೂ 1 ನಕಲಿ ನೋಟು ಪ್ರಕರಣದಲ್ಲಿ 4 ಆರೋಪಿಗಳ ಬಳಿ 14,700ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.

‘ಆರೋಪಿಗಳು ಪದೇ ಪದೇ ಕಾನೂನು ವಿರುದ್ದ ಚಟುವಟಿಕೆಗಳಲ್ಲಿ ತೊಡಗಿದರೆ ಅಂತಹ ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಿ ಗಡಿಪಾರು ಮಾಡಲಾಗುವುದುʼ ಎಂದು ಎಸ್ಪಿ ಪ್ರದೀಪ ಗುಂಟಿ ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...