ಬೀದರ್‌ | ಅಂತರ ಕಾಲೇಜು ಪಂದ್ಯಾವಳಿ : ಅಗ್ರಸ್ಥಾನ ಕಾಯ್ದುಕೊಂಡ ವಿಜಯಪುರ ಮಹಿಳಾ ವಿಶ್ವವಿದ್ಯಾಲಯ

Date:

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ವಿಜಯಪುರ ಇವರ ಸಹಯೋಗದಲ್ಲಿ ಬೀದರ್‌ ನಗರದ ಅಕ್ಕ ಮಹಾದೇವಿ ಮಹಿಳಾ ಮಹಾವಿದ್ಯಾಲಯ ಆವರಣದಲ್ಲಿ ಈಚೆಗೆ ಅಂತರ ಕಾಲೇಜು ವಾಲಿಬಾಲ್‌ ಪಂದ್ಯಾವಳಿ ನಡೆಯಿತು.

ಎರಡು ದಿನಗಳ ಕಾಲ ನಡೆದ ಪಂದ್ಯಾವಳಿಯಲ್ಲಿ ಒಟ್ಟು 17 ಮಹಾವಿದ್ಯಾಲಯಗಳ ವಿದ್ಯಾರ್ಥಿಗಳು ಭಾಗವಹಿಸಿದ್ದವು. ವಿಜಯಪುರದ ಕರ್ನಾಟಕ ರಾಜ್ಯ  ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಅಗ್ರಸ್ಥಾನ ಪಡೆದಿದೆ. ಬೈಲುಹೊಂಗಲ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ದ್ವೀತಿಯ ಸ್ಥಾನ ಗಳಿಸಿದರೆ, ತೃತೀಯ ಸ್ಥಾನದಲ್ಲಿ ರಾಣಿಬೆನ್ನೂರಿನ ಕೆ.ಎಲ್.ಇ.ಎಸ್‌ ಮಹಿಳಾ ವಿದ್ಯಾಲಯ ತೃಪ್ತಿಪಟ್ಟಿದೆ.

ಕಾರ್ಯಕ್ರಮ ಉದ್ಘಾಟಿಸಿದ ವಿಜಯಪುರ ಕಾಲೇಜಿನ ದೈಹಿಕ ನಿರ್ದೇಶಕ ಡಾ.ವಿಶ್ವನಾಥ ನಡುಕಟ್ಟಿ, ʼವಿದ್ಯಾರ್ಥಿಗಳು ಪಠ್ಯೆದ ಜೊತೆಗೆ ದೈಹಿಕ, ಮಾನಸಿಕವಾಗಿ ಸದೃಢರಾಗಿರಬೇಕು. ಕ್ರೀಡೆಯಿಂದ ಮಾನಸಿಕ ನೆಮ್ಮದಿ ಸಾಧ್ಯ ಎಂದ ಅವರು ಅಂತರ ಕಾಲೇಜು ಪಂದ್ಯವಾಳಿಯಲ್ಲಿ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೀದರ್‌ ಅಕ್ಕಮಹಾದೇವಿ ಕಾಲೇಜಿನ ಮಕ್ಕಳ ಕ್ಷೇಮಾಭಿವೃದ್ದಿ ಅಧಿಕಾರಿ ಡಾ.ಗಂಗಾಂಬಿಕಾ ಪಾಟೀಲ್‌ ಮಾತನಾಡಿ, ʼವಿದ್ಯಾರ್ಥಿಗಳು ಕ್ರೀಡೆಯಲ್ಲಿ ಹೆಚ್ಚು ತೊಡಗಿಸಿಕೊಳ್ಳಬೇಕು. ಇತ್ತೀಚೆಗೆ ದೇಶದ ಕ್ರೀಡೆಯಲ್ಲಿ ಮಹಿಳೆಯರ ಪಾತ್ರ ಪ್ರಮುಖವಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ದೇಶದ ಮಹಿಳೆಯರು ಸಾಧನೆಗೈಯುತ್ತಿರುವುದು ಅತ್ಯಂತ ಸಂತೋಷದ ಸಂಗತಿ. ಮುಂದಿನ ದಿನಗಳಲ್ಲಿ ರಾಜ್ಯದ ವಿದ್ಯಾರ್ಥಿಗಳು ಹೆಚ್ಚು ಸಾಧನೆಗೆ ಮುಂದಾಗಬೇಕುʼ ಎಂದರು.

ಶಾಂತಿವರ್ಧಕ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಎ.ಡಿ.ಡೋಲೆ ಮಾತನಾಡಿ, ʼಸೋಲು ಗೆಲುವು ಒಂದೇ  ನಾಣ್ಯದ ಎರಡು ಮುಖ ಇದ್ದಂತೆ ಜೀವನದಲ್ಲಿ ಎಲ್ಲವನ್ನು ತೆಗೆದುಕೊಂಡು ಹೋಗಬೇಕು. ಕಾಲೇಜಿನ ವಿದ್ಯಾರ್ಥಿನಿಯರು ಕ್ರೀಡೆಯಲ್ಲಿ ಹೆಚ್ಚು ತೊಡಗಿಸಿಕೊಂಡು ಕಾಲೇಜಿನ ಕೀರ್ತಿ ತರಬೇಕುʼ ಎಂದು ಹುರಿದುಂಬಿಸಿದರು.

ಕಾಲೇಜು ಪ್ರಾಂಶುಪಾಲ ಡಾ.ರಂಜನಾ ಪಾಟೀಲ್‌ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಾಧ್ಯಾಪಕ ಡಾ.ಸುನೀಲ್‌ ನಡುಕಟ್ಟಿ ಮಾತನಾಡಿದರು.

ಇದನ್ನೂ ಓದಿ : ಬೀದರ್‌ | ಶಾಲಾ ಅವ್ಯವಸ್ಥೆ ಸುಧಾರಣೆಗೆ ಮನೆ-ಮನೆಗೆ ಭಿಕ್ಷೆ ಬೇಡಿದ ಕೆಆರ್‌ಎಸ್ ಕಾರ್ಯಕರ್ತರು

ವಿದ್ಯಾರ್ಥಿನಿ ಅಂಜಲಿ ಶಿವಕುಮಾರ ಸ್ವಾಗತಿಸಿದರು. ಪಲ್ಲವಿ ಮತ್ತು ಸಂಗಡಿಗರು ಪ್ರಾರ್ಥನೆ ಗೀತೆ ನಡೆಸಿಕೊಟ್ಟರು. ದೈಹಿಕ ನಿರ್ದೇಶಕರಾದ ಡಾ.ಸುನಂದಾ ಗಂಗೂ ಸ್ವಾಗತಿಸಿದರು.ಪ್ರಾಧ್ಯಾಪಕ ಡಾ.ಶಿವಾನಂದ್‌ ಸಕ್ಪಾಲ್‌ ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಮತ್ತು ಬೋಧಕೇತರ ಹಾಗೂ ಎನ್‌ಎಸ್‌ಎಸ್ ಮತ್ತು ಎನ್‌ಸಿಸಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...