ಬೀದರ್‌ | ಸಮಾಜ ವಿರೋಧಿ ಪ್ರಕರಣಗಳಲ್ಲಿ ಭಾಗಿ : 6 ತಿಂಗಳು ಗಡಿಪಾರು

Date:

ಸಮಾಜ ವಿರೋಧಿ ಹಾಗೂ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ತಾಲ್ಲೂಕಿನ ಖಟಕಚಿಂಚೋಳಿ ವ್ಯಾಪ್ತಿಯ ಮಾವಿನಹಳ್ಳಿ ಗ್ರಾಮದ ಪರಮೇಶ್ವರ (ಪಮ್ಯಾ) ಬಿರಾದಾರ್‌ (30) ಗಡಿಪಾರು ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಈತನು ಸುಮಾರು 6 ವರ್ಷದಿಂದ ಸಮಾಜ ವಿರೋಧಿ, ಕಾನೂನು ಬಾಹಿರ ಚಟುವಟಿಕೆಯಲ್ಲಿ ಭಾಗಿಯಾಗಿ ಸಾರ್ವಜನಿಕರ ಶಾಂತಿ, ನೆಮ್ಮದಿ ಹಾಳುಮಾಡುತ್ತಿದ್ದನು. ಈತನ ವಿರುದ್ದ ಖಟಕಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಕೊಲೆ, ಮಾರಣಾಂತಿಕ ಹಲ್ಲೆ, ಬೆದರಿಕೆ ಸೇರಿದಂತೆ 4 ಪ್ರಕರಣಗಳು ವರದಿಯಾಗಿದ್ದರೂ ತನ್ನ ಪ್ರವೃತ್ತಿ ಮುಂದುವರಿಸಿಕೊಂಡು ಬಂದಿದ್ದನು. ಹಾಗಾಗಿ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಈತನನ್ನು ಸುಮಾರು 6 ತಿಂಗಳು ಚಾಮರಾಜನಗರ ಜಿಲ್ಲೆಯ ಗುಂಡ್ಲಪೇಟೆ ಪೊಲೀಸ್ ಠಾಣೆ ವ್ಯಾಪ್ತಿಗೆ ಸ್ಥಳಾಂತರಿಸಲು ಗಡಿಪಾರು ಮಾಡಿ ಆದೇಶಿಸಿದ್ದಾರೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ : ಬೀದರ್ | ಮೇ 26ರಿಂದ ಬಿತ್ತನೆ ಬೀಜ ವಿತರಣೆ: ಕೊರತೆ ಆಗದಂತೆ ಕ್ರಮವಹಿಸಿ: ಡಿಸಿ ಶಿಲ್ಪಾ ಶರ್ಮಾ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...