ಬೀದರ್‌ | ಪಡಿತರದಲ್ಲಿ ಅಕ್ರಮ; 22 ನ್ಯಾಯಬೆಲೆ ಅಂಗಡಿಗಳ ಅಮಾನತು

Date:

ಪಡಿತರ ಮಾರಾಟದಲ್ಲಿ ನಿಗದಿತ ಬೆಲೆಗಿಂತ ಹೆಚ್ಚು ದರ ವಿಧಿಸುವುದು, ಇಲ್ಲವೇ ಬಯೋಮೆಟ್ರಿಕ್‌ ಪಡೆಯಲು ಹಣ ಪಡೆದರೆ ಪಡಿತರ ಅಂಗಡಿಗಳ ಮಾನ್ಯತೆಯನ್ನು ರದ್ದುಪಡಿಸುವ ಸಾಧ್ಯತೆ ಇದೆ.

ಪಡಿತರ ಮಾರಾಟದಲ್ಲಿ ಅಕ್ರಮ ಕಂಡುಬಂದಿರುವ ಕುರಿತು ಬೀದರ್‌ ಜಿಲ್ಲಾಡಳಿತ ಪಡಿತರ ಅಂಗಡಿಗಳ ಮೇಲೆ ದಾಳಿ ಮಾಡಿದ್ದು, ಮಾನ್ಯತೆ ರದ್ದು ಮಾಡಿದೆ. ಅಕ್ರಮದಲ್ಲಿ ನಿರತರಾದವರ ಮೇಲೆ ಚಾಟಿ ಬೀಸಿದ್ದು, ಪೊಲೀಸ್‌ ಠಾಣೆಗಳಲ್ಲಿ ದೂರು ದಾಖಲಿಸಿದೆ.

“ಸರ್ಕಾರದ ನಿಯಮ ಉಲ್ಲಂಘಿಸಿದ ಜಿಲ್ಲೆಯ 22 ನ್ಯಾಯಬೆಲೆ ಅಂಗಡಿಗಳನ್ನು ಅಮಾನತುಗೊಳಿಸಿ ಅವುಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ” ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬೀದರ್‌ ನಗರದ 11 ನ್ಯಾಯಬೆಲೆ ಅಂಗಡಿ, ಬೀದರ್‌ ಗ್ರಾಮೀಣ ಭಾಗದ 4, ಹುಮನಾಬಾದ್‌ ತಾಲೂಕಿನ 4, ಭಾಲ್ಕಿ ತಾಲೂಕಿನ 2 ಅಂಗಡಿಗಳು ಸೇರಿದಂತೆ ಒಟ್ಟು 22 ನ್ಯಾಯಬೆಲೆ ಅಂಗಡಿಗಳನ್ನು ಅಮಾನತುಗೊಳಿಸಿ ಅವುಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗಿದೆ” ಎಂದು ತಿಳಿಸಿದ್ದಾರೆ.

“ಪಡಿತರ ಚೀಟಿದಾರರಿಗೆ ನಿಗದಿಗಿಂತ ಕಡಿಮೆ ಪ್ರಮಾಣದಲ್ಲಿ ಅಕ್ಕಿ ವಿತರಣೆ ಮಾಡಿರುವುದು, ಪಡಿತರ ಚೀಟಿದಾರರಿಂದ ಬಯೋಮೆಟ್ರಿಕ್‌ ಪಡೆಯಲು ತಲಾ 10 ರೂ. ಪಡೆದಿರುವುದು ಮತ್ತು ಬಿಲ್‌ ಪುಸ್ತಕ, ಮಾರಾಟ ಪುಸ್ತಕ, ದಾಸ್ತಾನು ಫಲಕ ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡುವಲ್ಲಿ ನಿರ್ಲಕ್ಷ್ಯ ತೋರಿದ ಹಿನ್ನೆಲೆಯಲ್ಲಿ ಈ ಕಠಿಣ ಕ್ರಮಕೈಗೊಳ್ಳಲಾಗಿದೆ” ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

“ಅಕ್ರಮ ಎಸಗಿರುವ 22 ನ್ಯಾಯ ಬೆಲೆ ಅಂಗಡಿಗಳಿಂದ 53.54 ಲಕ್ಷ ರೂ.ಮೌಲ್ಯದ 1793.46 ಕ್ವಿಂಟಲ್‌ ಅಕ್ಕಿ ಜಪ್ತಿ ಮಾಡಿದ್ದು, 32 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಜಿಲ್ಲೆಯ 6 ಕಡೆ ದಾಳಿ ನಡೆಸಿ ಅನಧಿಕೃತವಾಗಿ ಸಂಗ್ರಹಿಸಿದ್ದ ಹೆಚ್ಚುವರಿ ಬೆಲೆಗೆ ಮಾರಾಟ ಮಾಡುತ್ತಿದ್ದ 228 ಸಿಲಿಂಡರ್‌ಗಳನ್ನು ಜಪ್ತಿ ಮಾಡಲಾಗಿದೆ” ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಹಾರ ಅದಾಲತ್‌ಗೆ ಗ್ರಾಹಕರ ಆಗ್ರಹ

“ಬೀದರ್‌ ಜಿಲ್ಲೆಯ ಹಲವು ಭಾಗದಲ್ಲಿ ಪಡಿತರದಾರರೊಂದಿಗೆ ಸರಿಯಾಗಿ ನಡೆದುಕೊಳ್ಳದೇ ಅಕ್ರಮದಲ್ಲಿ ಭಾಗಿಯಾಗಿರುವ ದೂರುಗಳು ಕೇಳಿ ಬರುತ್ತಲೇ ಇವೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯವರಿಗೆ ದೂರು ನೀಡಿದರೆ ಅವರು ಎಚ್ಚರಿಕೆ ನೀಡುತ್ತಿದ್ದರು. ಈಗ ಬಿಗಿ ಕ್ರಮ ಕೈಗೊಂಡಿರುವುದು ಸೂಕ್ತವಾಗಿದೆ” ಎಂದು ಜಿಲ್ಲೆಯ ಹಲವು ಪಡಿತರಚೀಟಿ ಹೊಂದಿರುವ ಗ್ರಾಹಕರು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಅಲೆಮಾರಿ ಶಿಳ್ಳೆಕ್ಯಾತ ಕುಟುಂಬಗಳಿಗೆ ಶಾಶ್ವತ ಸೂರು ಕಲ್ಪಿಸಲು ಡಿವೈಎಫ್ಐ ಒತ್ತಾಯ

“ಆಹಾರ ಇಲಾಖೆ ಅವ್ಯವಸ್ಥೆ, ಪಡಿತರ ಮೋಸ, ಜನರಿಗೆ ಆಗುತ್ತಿರುವ ಅಡಚಣೆ ತಪ್ಪಿಸಲು ಹೀಗೆ ನಿಯಮಿತವಾಗಿ ಕ್ರಮ ಆಗಬೇಕು. ಈ ಮೊದಲು ಇದ್ದ ಹಾಗೆ ತಿಂಗಳಿಗೆ ಒಂದು ಬಾರಿಯಾದರೂ ʼಆಹಾರ ಅದಾಲತ್‌ʼ ಆಯೋಜಿಸಬೇಕು” ಎಂದು ಗ್ರಾಹಕರು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...