ಬೀದರ್‌ | ಡಿ.19 ರಂದು ಜಗನ್ಮಾತೆ ಅಕ್ಕಮಹಾದೇವಿ ಚಲನಚಿತ್ರ ಬಿಡುಗಡೆ

Date:

ರಾಜ್ಯದಾದ್ಯಂತ ಡಿ.19ರಂದು ಜಗನ್ಮಾತೆ ಅಕ್ಕಮಹಾದೇವಿ ಚಲನಚಿತ್ರ ಬೆಳ್ಳಿ ಪರದೆ ಮೇಲೆ ತೆರೆ ಕಾಣಲಿದೆ ಎಂದು ಚಲನಚಿತ್ರ ನಟ, ನಿರ್ಮಾಪಕ, ನಿರ್ದೇಶಕ ವಿಷ್ಣುಕಾಂತ ಬಿ.ಜೆ. ಹೇಳಿದರು.

ಭಾಲ್ಕಿ ಪಟ್ಟಣದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ʼಭರತ್ ಸಿನಿ ಕ್ರಿಯೇಷನ್ಸ್ ಬ್ಯಾನರ್‌ನಡಿ ನಿರ್ಮಾಣಗೊಂಡಿರುವ ಭಕ್ತಿ ಪ್ರಧಾನವಾಗಿರುವ ಜಗನ್ಮಾತೆ ಅಕ್ಕಮಹಾದೇವಿ ಚಿತ್ರ ಬಿಡುಗಡೆಗೆ ಸಿದ್ಧಗೊಂಡಿದೆ’ ಎಂದರು.

ʼರಾಜ್ಯದ 100ಕ್ಕೂ ಅಧಿಕ ಚಿತ್ರ ಮಂದಿರ ಸೇರಿ ನೆರೆಯ ತೆಲಂಗಾಣ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಏಕಕಾಲಕ್ಕೆ ಈ ಚಿತ್ರ ಬಿಡುಗಡೆಗೊಳ್ಳಲಿದೆ. ಅಮೆರಿಕ, ಇಂಗ್ಲೆಂಡ್ ಇನ್ನೂ ಕೆಲ ಹೊರ ದೇಶಗಳಲ್ಲಿ ಚಿತ್ರ ಬಿಡುಗಡೆಗೆ ಯೋಜನೆ ಹಾಕಿಕೊಳ್ಳಲಾಗಿದೆ. ಬೀದರ್ ಜಿಲ್ಲೆ ಸೇರಿ ಶ್ರೀಶೈಲಂನಲ್ಲಿ ಸುಮಾರು 6 ತಿಂಗಳಕಾಲ ನಿರಂತರವಾಗಿ ಚಿತ್ರ ಚಿತ್ರೀಕರಣಗೊಂಡಿದ್ದು, 45 ಕಲಾವಿದರು ಚಿತ್ರದಲ್ಲಿ ನಟಿಸಿದ್ದಾರೆ. ನಾನು ಬೀದರ್ ಜಿಲ್ಲೆಯವನು ಆಗಿರುವ ಕಾರಣಕ್ಕೆ ಈ ಚಿತ್ರದಲ್ಲಿ ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡಿ ಪ್ರೋತ್ಸಾಹಿಸುವ ಕೆಲಸ ಮಾಡಿದ್ದೇನೆʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಚಿತ್ರದ ಮುಖ್ಯ ಪಾತ್ರದಲ್ಲಿ ಹೆಸರಾಂತ ನಟರಾದ ಸುಚೀಂದ್ರ ಪ್ರಸಾದ ಕಾಣಸಿಕೊಳ್ಳಲಿದ್ದಾರೆ. ಹಾಸ್ಯ ಪಾತ್ರದಲ್ಲಿ ವೈಜಿನಾಥ ಬಿರಾದಾರ್ ಮಿಂಚಲಿದ್ದಾರೆ. ಸ್ಥಳೀಯ ಕಲಾವಿದೆ ಬೀದರ್‌ನ ಸುಲೇಕ್ಷಾ ಕೈರಾ ಅಕ್ಕಮಹಾದೇವಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರ ಅತ್ಯುತ್ತಮವಾಗಿ ಮೂಡಿಬಂದಿದ್ದು ಜಿಲ್ಲೆಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಜಗನ್ಮಾತೆ ಅಕ್ಕಮಹಾದೇವಿ ಚಿತ್ರ ವೀಕ್ಷಿಸಿ ಶುಭ ಹಾರೈಸಿ ಸ್ಥಳೀಯ ಕಲಾವಿದರಿಗೆ ಪ್ರೋತ್ಸಾಹ ತುಂಬಬೇಕುʼ ಎಂದು ತಿಳಿಸಿದರು.  

ʼಕಳೆದ ನಾಲ್ಕೈದು ದಶಕಗಳಿಂದ ನಾನು ಕನ್ನಡ ಚಿತ್ರರಂಗದಲ್ಲಿ ಸೇವೆ ಸಲ್ಲಿಸುತ್ತಿದ್ದೇನೆ. ಯಾವತ್ತು ಕೂಡ ಲಾಭ ನಷ್ಟದ ಬಗ್ಗೆ ವಿಚಾರ ಮಾಡಿಲ್ಲ. ಜನರಿಗೆ ಭಕ್ತಿ ಪ್ರಧಾನ ಚಿತ್ರ ನೀಡುವುದು ನನ್ನ ಮೂಲ ಧ್ಯೇಯ, ಈ ನಿಟ್ಟಿನಲ್ಲಿ ಬೆಳ್ಳಿ ಪರದೆ ಮೇಲೆ ಬರುತ್ತಿರುವ ಜಗನ್ಮಾತೆ ಅಕ್ಕಮಹಾದೇವಿ ಚಿತ್ರವನ್ನು ಎಲ್ಲರೂ ವೀಕ್ಷಿಸಿ ನಮಗೆ ಶಕ್ತಿ ತುಂಬಬೇಕುʼ ಎಂದು ಹೇಳಿದರು.

ನಟಿ ಸುಲೇಕ್ಷಾ ಕೈರಾ ಅವರು ಮಾತನಾಡಿ, ʼಅಕ್ಕಮಹಾದೇವಿ ಮಹಿಳಾ ಕುಲಕ್ಕೆ ಕಳಶಪ್ರಾಯರಾಗಿದ್ದಾರೆ. ಅಂತಹ ಮಹಾತ್ಮರ ಜೀವನ ಸಾಧನೆ ಕುರಿತು ತೆರೆ ಕಾಣುತ್ತಿರುವ ಜಗನ್ಮಾತೆ ಅಕ್ಕಮಹಾದೇವಿ ಚಿತ್ರದಲ್ಲಿ ನಾನು ಅಕ್ಕಮಹಾದೇವಿ ಪಾತ್ರದಲ್ಲಿ ನಟಿಸಿದ್ದು ಅತ್ಯಂತ ಖುಷಿ ತಂದು ಕೊಟ್ಟಿದೆ. ಜಿಲ್ಲೆಯ ಜನರು ಈ ಚಿತ್ರ ವೀಕ್ಷಿಸಿ ಪ್ರೋತ್ಸಾಹಿಸಬೇಕುʼ ಎಂದರು.

ಇದನ್ನೂ ಓದಿ : ಬೀದರ್‌ | ನಮ್ಮ ಕರ್ನಾಟಕ ಸೇನೆ ವಾರ್ಷಿಕೋತ್ಸವ: ಭಿತ್ತಿ ಪತ್ರ ಬಿಡುಗಡೆ

ಸುದ್ದಿಗೋಷ್ಠಿಯಲ್ಲಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಜಯರಾಜ ದಾಬಶೆಟ್ಟೆ, ಪ್ರಧಾನ ಕಾರ್ಯದರ್ಶಿ ಗಣಪತಿ ಬೋಚರೆ, ನಟಿ ಶ್ರೀಗೌರಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...