ಬೀದರ್‌ | ಕನ್ನಡಕ್ಕೆ ಜಯದೇವಿ ತಾಯಿ ಲಿಗಾಡೆ ಕೊಡುಗೆ ಅನನ್ಯ : ಡಾ.ರಂಜನಾ ಪಾಟೀಲ್

Date:

ಕಲ್ಯಾಣ ಕರ್ನಾಟಕದ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಹಿತ್ಯ ಪರಂಪರೆಯಲ್ಲಿ ವಿಶಿಷ್ಟ ಸ್ಥಾನವನ್ನು ಹೊಂದಿರುವ ಡಾ.ಜಯದೇವಿ ತಾಯಿ ಲಿಗಾಡೆ ಅವರು ಕನ್ನಡ ನಾಡು, ನುಡಿ, ಸಾಹಿತ್ಯಕ್ಕೆ ಅನನ್ಯ ಕೊಡುಗೆ ನೀಡಿದ್ದಾರೆʼ ಎಂದು ಅಕ್ಕಮಹಾದೇವಿ ಮಹಿಳಾ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ರಂಜನಾ ಪಾಟೀಲ್ ನುಡಿದರು.

ಬೀದರ್ ನಗರದ ಅಕ್ಕಮಹಾದೇವಿ ಮಹಿಳಾ ಮಹಾವಿದ್ಯಾಲಯದಲ್ಲಿ ಭಾಲ್ಕಿಯ ಶಬನಮ್ ಎಜುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಜಯದೇವಿ ತಾಯಿ ಲಿಗಾಡೆ ಅವರ ಬದುಕು-ಬರಹ ಕುರಿತು ಆಯೋಜಿಸಿದ ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ಗಂಗಾಂಬಿಕಾ ಪಾಟೀಲ್ ಅವರು ವಿಶೇಷ ಉಪನ್ಯಾಸ ನೀಡಿ, ʼಕನ್ನಡ ಭಾಷೆಯ ಸಾಹಿತಿ, ಆಧ್ಯಾತ್ಮ ಚಿಂತಕಿ, ಸಮಾಜ ಸೇವಕಿ, ಹಾಗೂ ಕುಟುಂಬವತ್ಸಲೆ ಎಂಬ ತ್ರಿವೇಣಿ ಸಂಗಮವಾಗಿರುವ ಜಯದೇವಿ ತಾಯಿ ಅವರು ಕರ್ನಾಟಕ ಏಕೀಕರಣ ಸೇರಿದಂತೆ ಗಡಿಭಾಗದಲ್ಲಿ ಕನ್ನಡ ಕಟ್ಟುವ ಕೆಲಸ ಮಾಡಿದ್ದಾರೆ. ತಮ್ಮ ಸಾದಾ, ಧವಳವಸ್ತ್ರದ ನಿರಾಡಂಬರ ಜೀವನದಿಂದ ಜನಮನ ಗೆದ್ದಿದ್ದಾರೆ. ತಾಯ್ನುಡಿಯ ಪ್ರೇಮ, ಕನ್ನಡ ಸಂಸ್ಕೃತಿಯ ಪ್ರಚಾರ, ಶರಣ ಸಾಹಿತ್ಯದ ಪ್ರಸಾರ ಎಲ್ಲವೂ ಅವರ ಜೀವನದ ಧ್ಯೇಯವಾಗಿತ್ತುʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಪ್ರೊ.ಸಿ.ಬಿ.ದೇವರಾಜ ಮಾತನಾಡಿ, ʼಎಪ್ಪತ್ತನಾಲ್ಕು ವರ್ಷಗಳ ಕಾಲ ಶರಣರ ಹಾಗೂ ಕನ್ನಡ ನಾಡಿನ ಸೇವೆಗೆ ತಮ್ಮನ್ನು ಮುಡುಪಾಗಿ ಅರ್ಪಿಸಿಕೊಂಡ ಜಯದೇವಿ ತಾಯಿ ಅವರು, ಮಹಿಳಾ ಶಿಕ್ಷಣ, ಸಬಲೀಕರಣ ಸೇರಿದಂತೆ ಸಾಮಾಜಿಕ ಜಾಗೃತಿ ಕ್ಷೇತ್ರಗಳಲ್ಲಿ ಮಹತ್ತರ ಸೇವೆ ಸಲ್ಲಿಸಿದ್ದಾರೆ. ಅವರ ಮಾತು, ವರ್ತನೆ ಮತ್ತು ಜೀವನವೇ ಶರಣ ತತ್ವದ ಬದುಕು ಸಮಾಜಕ್ಕೆ ಪಾಠವಾಗಿತ್ತುʼ ಎಂದು ಹೇಳಿದರು

ಶಬನಮ್ ಎಜುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷೆ ಡಾ.ಮಕ್ತುಂಬಿ ಎಂ ಮಾತನಾಡಿ, ʼ ಲಿಗಾಡೆ ಅವರ ಸೇವಾ ಮನೋಭಾವ ಕೇವಲ ವ್ಯಕ್ತಿಗತ ಗುಣವಲ್ಲ, ಅದು ನಾಡಿನ ಆತ್ಮಸಾಕ್ಷಾತ್ಕಾರ. ಲಿಗಾಡೆ ಅವರ ಜೀವನವೇ ತಾಯ್ನುಡಿಯ ತಪಸ್ಸಿನ ಒಂದು ಯಶೋಗಾಥೆಯಾಗಿದೆʼ ಎಂದರು.

ಇದನ್ನೂ ಓದಿ : ಬೀದರ್‌ | ತಬಲಾ ವಾದಕ ಮಡಿವಾಳಯ್ಯ ಸಾಲಿಗೆ ಒಲಿದ ರಾಜೋತ್ಸವ ಪ್ರಶಸ್ತಿ

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಧ್ಯಾಪಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...