ಬೀದರ್‌ | ಕನ್ನಡಕ್ಕೆ ಜಯದೇವಿ ತಾಯಿ ಲಿಗಾಡೆ ಕೊಡುಗೆ ಅನನ್ಯ : ಜಗನ್ನಾಥ ಮೂಲಗೆ

Date:

ಕರ್ನಾಟಕ ಏಕೀಕರಣ ಚಳುವಳಿಗೆ ಮಹತ್ವದ ಕೊಡುಗೆ ನೀಡಿದ ಜಯದೇವಿ ತಾಯಿ ಲಿಗಾಡೆ ಅವರು ಕನ್ನಡ ಭಾಷೆ ಮತ್ತು ಸಂಸ್ಕೃತಿ ಬಲವರ್ಧನೆಗೂ ಅಮೋಘ ಕಾಣಿಕೆ ನೀಡಿದ್ದಾರೆ ಎಂದು ಬಸವ ಕೇಂದ್ರದ ತಾಲೂಕು ಅಧ್ಯಕ್ಷ ಜಗನ್ನಾಥ ಮೂಲಗೆ ಅಭಿಪ್ರಾಯಪಟ್ಟರು.

ಔರಾದ್‌ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಮಂಗಳವಾರ ಪಟ್ಟಣದ ಕಸ್ತೂರ ಬಾ ಗಾಂಧಿ ವಸತಿ ಶಾಲೆಯಲ್ಲಿ ಡಾ.ಜಯದೇವಿತಾಯಿ ಲಿಗಾಡೆ ಹಾಗೂ ಫ.ಗು.ಹಳಕಟ್ಟಿ ಅವರ ಜಯಂತಿ ನಿಮಿತ್ತ ಕನ್ನಡ-ವಚನ ಸಂಸ್ಕೃತಿ ಕುರಿತು ಆಯೋಜಿಸಿದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ʼಲಿಗಾಡೆಯವರು ಸೋಲಾಪುರ ಕರ್ನಾಟಕಕ್ಕೆ ಸೇರಿಸಲು ಎಲ್ಲ ಪ್ರಯತ್ನಗಳು ಮಾಡಿದ್ದು, ಸ್ಥಳೀಯರ ಹಾಗೂ ಜನಪ್ರತಿನಿಧಿಗಳ ಬೆಂಬಲ ನಿರೀಕ್ಷಿತ ಪ್ರಮಾಣದಲ್ಲಿ ದೊರೆಯದ ಹಿನ್ನೆಲೆ ಇಂದು ಅಪ್ಪಟ ಕನ್ನಡ ಪ್ರದೇಶವಾದ ಸೋಲಾಪುರ್ ನೆರೆ ರಾಜ್ಯದಲ್ಲಿದೆ. ಅವರು ಕನ್ನಡ ಮತ್ತು ಮರಾಠಿ ಭಾಷೆಯಲ್ಲಿ ಸಾಹಿತ್ಯ ರಚಿಸಿ ಭಾಷಾ ಸಾಮರಸ್ಯದ ಕೊಂಡಿಯಾಗಿ ಕೆಲಸ ಮಾಡಿದರುʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಸಾಪ ಗೌರವ ಕಾರ್ಯದರ್ಶಿ ಜಗನ್ನಾಥ ದೇಶಮುಖ ಮಾತನಾಡಿ, ʼಫ.ಗು.ಹಳಕಟ್ಟಿ ಅವರು ವಚನ ಸಾಹಿತ್ಯ ಸಂರಕ್ಷರಾಗಿ ಕೆಲಸ ಮಾಡಿದ್ದಾರೆ. ಅವರ ಸರಳ ಬದುಕು ನಮ್ಮೆಲ್ಲರಿಗೂ ಸದಾ ಪ್ರೇರಣೆಯಾಗಲಿದೆ ಎಂದು ನಿದರ್ಶನಗಳ ಮೂಲಕ ವಿವರಿಸಿದರು.

WhatsApp Image 2025 07 09 at 10.00.43 PM

ಕಸಾಪ ಅಧ್ಯಕ್ಷ ಬಿ.ಎಂ ಅಮರವಾಡಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಮಾರಂಭವನ್ನು ಹಿರಿಯರಾದ ಸುಭಾಷ್ ಪಾರಾ ಉದ್ಘಾಟಿಸಿದರು.

ಇದನ್ನೂ ಓದಿ : ಬೀದರ್‌ | ʼಈದಿನʼ ಫಲಶೃತಿ : ಹಾಲಹಳ್ಳಿ(ಕೆ) ಪ್ರೌಢ ಶಾಲೆಗೆ ಬಿಇಒ ಭೇಟಿ; ಶಾಲೆ ಸ್ಥಳಾಂತರ

ಪ್ರಮುಖರಾದ ವಿರೇಶ ಅಲಮಾಜೆ, ಸಂದೀಪ ಪಾಟೀಲ್, ಕಾವ್ಯ ಅಲಮಾಜೆ, ಸಂಗೀತಾ ರೆಡ್ಡಿ, ಕಾವೇರಿ ಸ್ವಾಮಿ, ಲತಾದೇವಿ ಕೋಕನೆ, ಡಾ. ಮನ್ಮತ ಡೋಳೆ, ಶಿವರಾಜ ಶಟಕಾರ, ಅಶೋಕರೆಡ್ಡಿ ಪಿಟ್ಲೆ ಸೇರಿದಂತೆ ಇನ್ನಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...