ಬೀದರ್‌ | ಕ್ಷಯ ರೋಗ ಮುಕ್ತ ಭಾರತಕ್ಕೆ ಕೈಜೋಡಿಸಿ : ಸಿಇಒ ಡಾ. ಗಿರೀಶ್ ಬದೋಲೆ

Date:

ಭಾರತವನ್ನು ಕ್ಷಯ ರೋಗ ಮುಕ್ತಗೊಳಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗಿರೀಶ್ ಬದೋಲೆ ಹೇಳಿದರು.

ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಗರದ ಬ್ರಿಮ್ಸ್‌ನಲ್ಲಿ ಸೋಮವಾರ ಆಯೋಜಿಸಿದ್ದ ವಿಶ್ವ ಕ್ಷಯ ರೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ʼಕೇಂದ್ರ ಸರ್ಕಾರ 2025 ರಲ್ಲಿ ದೇಶವನ್ನು ಸಂಪೂರ್ಣ ಕ್ಷಯ ರೋಗ ಮುಕ್ತವಾಗಿಸುವ ಘೋಷಣೆ ಮಾಡಿದೆ. ಈ ದಿಸೆಯಲ್ಲಿ ಕಾರ್ಯ ಚಟುವಟಿಕೆಗಳೂ ನಡೆದಿವೆ. ಕ್ಷಯ ರೋಗ ನಿರ್ಮೂಲನೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜತೆಗೆ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಹಾಗೂ ಸಿಬ್ಬಂದಿಯ ಪಾತ್ರವೂ ಬಹಳ ಮುಖ್ಯವಾಗಿದೆʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಧ್ಯಾನೇಶ್ವರ ನೀರಗುಡೆ ಮಾತನಾಡಿ, ʼಪ್ರಸಕ್ತ ವರ್ಷ ಕ್ಷಯ ರೋಗ ನಿಯಂತ್ರಣದಲ್ಲಿ ಜಿಲ್ಲೆ ಗಣನೀಯ ಪ್ರಗತಿ ಸಾಧಿಸಿದೆ. ಈಗ ಹ್ಯಾಂಡ್ ಹೆಲ್ಡ್ ಕ್ಷ ಕಿರಣ ಯಂತ್ರದೊಂದಿಗೆ ರೋಗಿಗಳು ಇರುವ ಗ್ರಾಮ, ಸಂತೆ, ಜಾತ್ರೆ, ಉತ್ಸವ ಮೊದಲಾದ ಕಡೆಗೆ ಹೋಗಿ ಕ್ಷಯ ರೋಗ ತಪಾಸಣೆ ಮಾಡಲಾಗುತ್ತಿದೆ. ರೋಗ ಕಂಡು ಬಂದಲ್ಲಿ ತಕ್ಷಣ ಚಿಕಿತ್ಸೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಪೌಷ್ಟಿಕ ಆಹಾರಕ್ಕಾಗಿ ಕಡು ಬಡ ರೋಗಿಗಳ ಖಾತೆಗೆ ಹಣ ಸಹ ಜಮೆ ಮಾಡಲಾಗುತ್ತಿದೆʼ ಎಂದು ತಿಳಿಸಿದರು.

WhatsApp Image 2025 03 25 at 6.54.25 AM
ಕಾರ್ಯಕ್ರಮಕ್ಕೆ ಮುನ್ನ ನಗರದಲ್ಲಿ ಕ್ಷಯ ರೋಗ ಜಾಗೃತಿ ಜಾಥಾ ನಡೆಯಿತು.

ಜಿಲ್ಲಾ ಕ್ಷಯ ರೋಗ ಅಧಿಕಾರಿ ಡಾ. ಅನಿಲಕುಮಾರ ಚಿಂತಾಮಣಿ ಮಾತನಾಡಿ, ʼಜಿಲ್ಲೆಯಲ್ಲಿ ಈ ವರ್ಷ 47,979 ಸಂಭಾವ್ಯ ಕ್ಷಯ ರೋಗಿಗಳ ಪರೀಕ್ಷೆ ಮಾಡಲಾಗಿದೆ. ಅದರಲ್ಲಿ 2,563 ಮಂದಿಗೆ ಕ್ಷಯ ರೋಗ ಇರುವುದು ದೃಢಪಟ್ಟಿದೆ. 71 ಜನರಲ್ಲಿ ಎಚ್‍ಐವಿ ಜತೆಗೆ ಕ್ಷಯರೋಗ ಪತ್ತೆಯಾಗಿದೆ. 2022ರಲ್ಲಿ ಜಿಲ್ಲೆಯಲ್ಲಿ 2,824 ಹಾಗೂ 2023 ರಲ್ಲಿ 2,826 ಕ್ಷಯ ರೋಗಿಗಳು ಪತ್ತೆಯಾಗಿದ್ದರು. ಈ ವರ್ಷ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿದೆʼ ಎಂದು ತಿಳಿಸಿದರು.

ಕ್ಷಯ ರೋಗ ಮುಕ್ತ ಗ್ರಾಮ ಪಂಚಾಯಿತಿ ಯೋಜನೆಯಡಿ ಹೆಡಗಾಪುರ, ಹಾರಕೂಡ, ಬ್ಯಾಲಹಳ್ಳಿ, ನಿಟ್ಟೂರ (ಬಿ), ಬೇನಚಿಂಚೋಳಿ, ಏಕಲೂರು, ಕೋಹಿನೂರು, ಲಾಡವಂತಿ, ಮುಡಬಿ, ಉಜಳಂಬ, ಡಾಕುಳಗಿ, ಮದರಗಾಂವ್, ಚಟ್ನಳ್ಳಿ, ಮಾಳೆಗಾಂವ್, ಖೇಣಿ ರಂಜೋಳ್, ರೇಕುಳಗಿ, ಬೆಳಕೇರಾ, ಮೀನಕೇರಾ ಗ್ರಾಮ ಪಂಚಾಯಿತಿಗಳನ್ನು ಕ್ಷಯ ರೋಗ ಮುಕ್ತ ಗ್ರಾಮ ಪಂಚಾಯಿತಿಗಳೆಂದು ಘೋಷಿಸಲಾಗಿದೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಹುಲಸೂರ ಬಂದ್‌ ಭಾಗಶಃ ಯಶಸ್ವಿ : ಬೇಡಿಕೆ ಈಡೇರಿಸದಿದ್ದರೆ ಹೋರಾಟ ತೀವ್ರ

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಅಹೆಮದ್, ಜಿಲ್ಲಾ ಆರೋಗ್ಯ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳಾದ ಡಾ. ಕಿರಣ ಪಾಟೀಲ, ಡಾ. ರಾಜಶೇಖರ ಪಾಟೀಲ, ಡಾ. ಶಂಕರೆಪ್ಪ ಬೊಮ್ಮಾ, ಡಾ. ದಿಲೀಪ್ ಡೊಂಗರೆ ಇದ್ದರು. ಟಿ.ಎಂ. ಮಚ್ಚೆ ನಿರೂಪಿಸಿದರು. ಸಂಜುಕುಮಾರ ನಾಗೂರೆ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...