ಬೀದರ್‌ | ಕೋಮು ಸೌಹಾರ್ದತೆ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ : ಮಮತಾಜ್‌ ಅಲಿ

Date:

ಸಮಾಜದಲ್ಲಿ ಕೋಮು ಸೌರ್ಹಾದತೆಯ ಅರಿವು ಮೂಡಿಸಲು ಪ್ರತಿಯೊಬ್ಬರೂ ಕೈಜೋಡಿಸುವ ಅಗತ್ಯವಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಮುಖ್ಯಸ್ಥೆ ಮಮತಾಜ್ ಬೇಗಂ ಹೇಳಿದರು.

ಭಾಲ್ಕಿ ತಾಲೂಕಿನ ನಿಟ್ಟೂರ(ಬಿ) ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಸಹಾರಾ ಗ್ರಾಮೀಣ ಅಭಿವೃದ್ಧಿ ಮತ್ತು ಶೈಕ್ಷಣಿಕ ಸಂಘದ ಆಶ್ರಯದಲ್ಲಿ ಹಮ್ಮಿಕೊಂಡ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಹಿಡಿಯುವಲ್ಲಿ ಕೋಮು ಸೌಹಾರ್ದತೆ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ʼಗ್ರಾಮೀಣ ಭಾಗದಲ್ಲಿ ಕೋಮು ಸೌಹಾರ್ದತೆ ಕಾಪಾಡಿಕೊಂಡು ಹೋಗಲು ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ. ಸಾರ್ವಜನಿಕರು ಎಲ್ಲರೂ ಒಂದೇ ಎನ್ನುವ ಭಾವದಿಂದ ಜೀವಿಸಿದರೆ ಯಾವುದೇ ಕಾನೂನಿನ ಅವಶ್ಯಕತೆ ಇರುವುದಿಲ್ಲ. ಹೀಗಾಗಿ ಎಲ್ಲ ಕೋಮಿನವರು ಭಾತೃತ್ವದಿಂದ ಬದುಕಬೇಕುʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಧನ್ನೂರ್‌ ಠಾಣೆ ಎಎಸ್‌ಐ ಬಾಪುರಾವ್‌ ಮಾತನಾಡಿ, ʼಇಡೀ ಮಾನವ ಜನಾಂಗಕ್ಕಾಗಿ ಹೋರಾಡಿದ ಡಾ.ಅಂಬೇಡ್ಕರ್‌ ಅವರ ಆದರ್ಶಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು. ಅದರಲ್ಲೂ ವಿಶೇಷವಾಗಿ ವಿದ್ಯಾರ್ಥಿಗಳು ಅಂಬೇಡ್ಕರ್‌ ಅವರ ಬದುಕು-ಹೋರಾಟದ ಆಶಯದಂತೆ ಮುನ್ನಡೆದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯʼ ಎಂದು ನುಡಿದರು.

ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ ಸಹಾರಾ ಸಂಸ್ಥೆಯ ಅಧ್ಯಕ್ಷೆ ಕವಿತಾ ಓಂಕಾರ ಮಜಕೂರೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ಪ್ರಭು ಕಾಂಬಳೆ ಮತ್ತು ತಂಡದವರು ಸುಗಮ ಸಂಗೀತ ನಡೆಸಿಕೊಟ್ಟರು. ಶಾಂತಮ್ಮ ಡೊಣಗಾಪುರ ಮತ್ತು ಕಲಾ ತಂಡದವರು ವಚನ ಗಾಯನ ನಡೆಸಿ, ಜಾನಪದ ಗೀತೆಗಳ ಮೂಲಕ ಕೋಮು ಸೌಹಾರ್ದತೆಯ ಜಾಗೃತಿ ಮೂಡಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ತುಕ್ಕು ಹಿಡಿಯುತ್ತಿವೆ ಕೃಷಿ ಉತ್ಪನ್ನ ಮಾರುಕಟ್ಟೆ ಸ್ಥಾಪಿಸಿದ ಶುದ್ಧ ನೀರಿನ ಘಟಕ!

ಗ್ರಾಪಂ ಅಧ್ಯಕ್ಷೆ ಜ್ಯೋತಿ ಷಣ್ಮುಖ, ಉಪಾಧ್ಯಕ್ಷ ರಾಜಕುಮಾರ ಪಾಟೀಲ್‌, ಸದಸ್ಯರಾದ ಶಾಮ ಪಾಟೀಲ್‌ ಹಾಗೂ ಓಂಕಾರ ಮಜಕೂರೆ, ರಾಜಕುಮಾರ ಪಾಟೀಲ, ಸಲೀಮ ಬಾಗವಾನ್, ಶಿಕ್ಷಕಿ ಸಾರಿಕಾ, ಸತ್ಯಕಲಾ, ಅಂಬುಜಾ, ಛಾಯಾ ಪ್ರಮುಖರಾದ ಶರಣಪ್ಪ, ರವೀಂದ್ರ ಕರಂಜೆ, ಸರೋಜಿನಿ ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...