ಬೀದರ್‌ | ಮಾದಕ ದ್ರವ್ಯ ಸೇವನೆ ಮುಕ್ತ ಜಿಲ್ಲೆಯನ್ನಾಗಿಸಲು ಕೈಜೋಡಿಸಿ : ಎಸ್ಪಿ ಪ್ರದೀಪ ಗುಂಟಿ

Date:

ಬೀದರ ಜಿಲ್ಲೆಯನ್ನು ಮಾದಕ ದ್ರವ್ಯ ಸೇವನೆ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ತಿಳಿಸಿದರು.

ಮಂಗಳವಾರ ಬೀದರ ಪೊಲೀಸ್ ಉಪವಿಭಾಗದ ವತಿಯಿಂದ ನಗರದ ಕರ್ನಾಟಕ ಪದವಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಮಾದಕ ದ್ರವ್ಯ ಸೇವನೆ ಮತ್ತು ಸಾಗಾಣಿಕೆ ವಿರೋಧಿ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ʼಮಾದಕ ದ್ರವ್ಯ ಸೇವನೆಯಿಂದ ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಇದರಿಂದಾಗಿ ವ್ಯಕ್ತಿ ತಾನು ಏನು ಮಾಡುತ್ತಿದ್ದಾನೆ ಎಂಬುವುದರ ಅರಿವು ಕೂಡ ಇರುವುದಿಲ್ಲ. ನಶೆಯಲ್ಲಿ ಇರುವರು ಕಳ್ಳತನ, ಕೊಲೆ, ದರೋಡೆ, ಲೈಂಗಿಕ ಕಿರುಕುಳ ಅಂತಹ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಮಾದಕ ದ್ರವ್ಯ ಸೇವನೆ ತೊರೆದು ಉತ್ತಮ ಜೀವನ ಕಟ್ಟಿಕೊಳ್ಳಬೇಕುʼ ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼನಶೆಯ ಜಗತ್ತನ್ನು ಬಿಟ್ಟು ಒಬ್ಬ ಉತ್ತಮ ನಾಗರಿಕರನ್ನಾಗಿ ಬಾಳಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಅವರನ್ನು ಉನ್ನತವಾದ ಹುದ್ದೆಗಳನ್ನು ಅಲಂಕರಿಸುವಂತೆ ಮಾಡಬೇಕು. ಪೊಲೀಸ್ ಇಲಾಖೆ ಯಾವಾಗಲೂ ಜನರ ಸೇವೆಯಲ್ಲಿದ್ದು, ಎಲ್ಲರಿಗೂ ರಕ್ಷಣೆ ನೀಡುವುದು ನಮ್ಮ ಕರ್ತವ್ಯʼ ಎಂದರು.

WhatsApp Image 2025 06 24 at 3.45.51 PM

ಬೀದರ ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್ ಮಾತನಾಡಿ, ʼನಮ್ಮ ಮಕ್ಕಳ ಭವಿಷ್ಯದ ಕುರಿತು ಯೋಚಿಸಬೇಕು. ಯಾವುದೇ ಮಾದಕ ದ್ರವ್ಯ ಸೇವನೆ ವ್ಯಸನಿಯಾಗದಂತೆ ಎಚ್ಚರವಹಿಸಬೇಕು. ಸಂವಿಧಾನ ನೀಡಿದ ಮೂಲಭೂತ ಹಕ್ಕುಗಳಂತೆ ಶಿಕ್ಷಣ ಮತ್ತು ಜೀವಿಸುವ ಹಕ್ಕು ಕೂಡ ಇದೆ. ನಶೆಯ ಜಗತ್ತಿನಿಂದ ಹೊರಬಂದು ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಳ್ಳಬೇಕು. ಅಂತಹವರಿಗೆ ಬ್ಯಾಂಕ್‌ಗಳಿಂದ ಸಾಲ ಸೌಲಭ್ಯ ಒದಗಿಸಲು ಬ್ಯಾಂಕ್ ಅಧಿಕಾರಿಗಳಿಗೆ ಮಾತನಾಡುವೆʼ ಎಂದು ತಿಳಿಸಿದರು.

ಇದನ್ನೂ ಓದಿ : ಬೀದರ್‌ | ಆರೋಗ್ಯ ಕೇಂದ್ರಕ್ಕಿಲ್ಲ ಸ್ವಂತ ಕಟ್ಟಡ : ಸರ್ಕಾರಿ ಶಾಲಾ ಕೋಣೆಯಲ್ಲೇ ಆರೋಗ್ಯ ಸೇವೆ!

ಡಿವೈಎಸ್‌ಪಿ ಶಿವನಗೌಡ ಪಾಟೀಲ, ಎಸ್‌ಬಿಐ ಪ್ರಾದೇಶಿಕ ವ್ಯವಸ್ಥಾಪಕ ಜೈಕುಮಾರ್, ಹೆಚ್ಚುವರಿ ಡ್ರಗ್ಸ್ ಕಂಟ್ರೋಲರ್ ಧನಂಜಯ, ಮನೋರೋಗ ತಜ್ಞ ರಾಘವೇಂದ್ರ ವಾಗ್ಮಾರೆ, ರೈಲ್ವೆ ಪೊಲೀಸ್ ಠಾಣೆ ಅಧಿಕಾರಿ ಪಾಷಾ, ಎಎಸ್‌ಐಆರ್‌ಪಿಎಫ್ ಸಿ.ಎಚ್. ಶ್ರೀನಿವಾಸ, ವಕೀಲರು ಮತ್ತು ಮಾಂಗರವಾಡಿ ಸಂಘದ ರಾಜ್ಯಾಧ್ಯಕ್ಷ ಅನೀಲಕುಮಾರ ಕಾಂಬಳೆ ಸೇರಿದಂತೆ ವಿವಿಧ ಪೊಲೀಸ್ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...