ಬೀದರ್‌ | ಪತ್ರಕರ್ತನ ಮೇಲೆ ಹಲ್ಲೆ ಪ್ರಕರಣ : ಅರಣ್ಯ ಪಾಲಕ ದಸ್ತಗಿರಿಸಾಬ ಅಮಾನತು

Date:

ಸಾರ್ವಜನಿಕರೊಂದಿಗೆ ಸೌಜನ್ಯಯುತವಾದ ಸ್ವಂದನಾಶೀಲ ವರ್ತನೆಯನ್ನು ತೋರಿಸದೇ ಕರ್ತವ್ಯದಲ್ಲಿ ಅಶಿಸ್ತು ತೋರಿರುವುದರಿಂದ ಬೀದರ್‌ ಪ್ರಾದೇಶಿಕ ಅರಣ್ಯ ವಲಯದ ಹೊನ್ನಿಕೇರಿ ಗಸ್ತು ಅರಣ್ಯ ಪಾಲಕ ದಸ್ತಗಿರಿಸಾಬ ಅವರನ್ನು ಅಮಾನತುಪಡಿಸಿ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು (ಪ್ರಾದೇಶಿಕ ವಿಭಾಗ) ಆದೇಶಿಸಿದ್ದಾರೆ.

ʼಬೀದರ ನಗರದ ಏರ್‌ಪೊರ್ಟ್ ರಸ್ತೆಯಲ್ಲಿ ಏ.15 ರಂದು ರಾತ್ರಿ 9 ಗಂಟೆ ಸುಮಾರಿಗೆ ನೆಡುತೋಪು ನಿರ್ಮಾಣ ಮಾಡುವ ಕಾಮಗಾರಿ ಸಿದ್ಧತೆ ಮಾಡಿಕೊಳ್ಳುವ ವೇಳೆ ಸ್ಥಳೀಯ ದಿನಪತ್ರಿಕೆಯ ವರದಿಗಾರ ರವಿ ಭೂಸುಂಡೆ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳ ಮಧ್ಯ ವಾಗ್ವಾದ ಮತ್ತು ತಂಟೆ ತಕರಾರು ನಡೆದಿತ್ತು. ಈ ಸಂಬಂಧ ಬೀದರ್ ನಗರದ ಗಾಂಧಿ ಗಂಜ ಪೊಲೀಸ್‌ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿದ್ದವು.

ಈ ಘಟನೆಯ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜಿಲ್ಲೆಯ ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾದ ವರದಿ ಆಧರಿಸಿ ಗಸ್ತು ಅರಣ್ಯ ಪಾಲಕ ದಸ್ತಗಿರಿಸಾಬ ಅವರು ಸಾರ್ವಜನಿಕರೊಂದಿಗೆ ವಿನಯದಿಂದ ವರ್ತಿಸದೇ ಇರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕ ನಾಗರೀಕ ಸೇವಾ ನಡತೆ ನಿಯಮಗಳು 2021ರ ನಿಯಮ (3) ನ್ನು ಉಲ್ಲಂಘಿಸಿ ಕರ್ತವ್ಯದಲ್ಲಿ ಅಶಿಸ್ತು ತೋರಿರುವುದು ಹಾಗೂ ಈ ಘಟನೆಯ ಬಗ್ಗೆ ಕುಲಂಕುಶವಾಗಿ ತನಿಖೆಯಾಗಿ ಪ್ರಕರಣ ಸತ್ಯಾಸತ್ಯತೆಯು ತಿಳಿಯಬೇಕಾಗಿರುವುದರಿಂದ ಸದರಿ ಅಧಿಕಾರಿಯನ್ನು ಅದೇ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸಲು ಅವಕಾಶ ಮಾಡಿಕೊಟ್ಟರೆ ನಿಷ್ಪಕ್ಷಪಾತ ತನಿಖೆಗೆ ಅಡ್ಡಿಯಾಗುವ ಸಂಭವ ಹಿನ್ನೆಲೆ ದಸ್ತಗಿರಿಸಾಬ ಅವರನ್ನು ಕರ್ನಾಟಕ ಸಿವಿಲ್ ಸೇವಾ ( ವರ್ಗೀಕರಣ ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು 1957ರ ನಿಯಮ 10(1) (ಡಿ) ಅನ್ವಯ ವಿಚಾರಣೆ ಕಾಯ್ದಿರಿಸಿ, ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಇಲಾಖೆ ಆದೇಶದಲ್ಲಿ ತಿಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಪತ್ರಕರ್ತನ ಮೇಲೆ ಹಲ್ಲೆ : ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಅರಣ್ಯ ಇಲಾಖೆ ಸಿಬ್ಬಂದಿಗಳು ಪತ್ರಕರ್ತ ರವಿ ಭೂಸುಂಡೆ ಮೇಲೆ ನಡೆಸಿರುವ ಹಲ್ಲೆಯನ್ನು ಜಿಲ್ಲಾ ಹಾಗೂ ತಾಲ್ಲೂಕಿನ ಪತ್ರಕರ್ತರ ಸಂಘದ ಪದಾಧಿಕಾರಿಗಳು ತೀವ್ರವಾಗಿ ಖಂಡಿಸಿ, ಅಧಿಕಾರಿಗಳ ಅಮಾನತಿಗೆ ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂಬಂಧ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಗುರುವಾರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಟಿಪ್ಪಣಿ ಹೊರಡಿಸಿ ʼಪತ್ರಕರ್ತರೊಬ್ಬರ ಮೇಲೆ ಕೈಮಾಡಿರುವ ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಕೂಡಲೇ ನಿಯಮಾನುಸಾರ ಶಿಸ್ತುಕ್ರಮ ಜರುಗಿಸಿ ವರದಿ ನೀಡುವಂತೆʼ ಸೂಚಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...