ಬೀದರ್‌ | ಪತ್ರಕರ್ತನ ಮೇಲೆ ಹಲ್ಲೆ; ಅರಣ್ಯಾಧಿಕಾರಿ ಅಮಾನತಿಗೆ ಆಗ್ರಹ

Date:

‌ಬೀದರ್‌ನ ಪತ್ರಕರ್ತ ರವಿ ಭೂಸಂಡೆ ಮೇಲೆ ಹಲ್ಲೆ ನಡೆಸಿದ ಅರಣ್ಯಾಧಿಕಾರಿಯನ್ನು ಸೇವೆಯಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಭೀಮ್‌ ಆರ್ಮಿ, ವೀರ ಕನ್ನಡಿಗರ ಸೇನೆ, ಕನ್ನಡಿಗರ ರಕ್ಷಣಾ ವೇದಿಕೆ, ಕರವೇ ಕಾವಲು ಪಡೆ ಸಂಘಟನೆಗಳ ನೇತೃತ್ವದಲ್ಲಿ ಬೀದರ್‌ನಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.

ನಗರದ ಡಾ.ಅಂಬೇಡ್ಕರ್‌ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಡಳಿತದ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.

ʼಏ.15ರಂದು ಅರಣ್ಯ ಅಧಿಕಾರಿ ರಾತ್ರಿ ವೇಳೆ ಬೀದರ್‌ ಏರ್‌ಪೋರ್ಟ್ ರಸ್ತೆ ಬದಿಗೆ ಸಸಿಗಳನ್ನು ಹಚ್ಚುವ ಕೆಲಸವನ್ನು ಮಾಡುತ್ತಿದ್ದರು. ಅರಣ್ಯ ಅಧಿಕಾರಿಗಳು ಮಾಡುವ ಕೆಲಸದ ಸ್ಥಳಕ್ಕೆ ಹೋಗಿ ಸಸಿಗಳನ್ನು ಹಚ್ಚುತ್ತಿರುವ ಫೋಟೊ ಮತ್ತು ವಿಡಿಯೊ ಮಾಡಿಕೊಂಡು ವರದಿ ಮಾಡಲು ಬಂದಿರುವ ರವಿ ಭೋಸಂಡೆ ಅವರ ಮೇಲೆ ಹಲ್ಲೆ ಮಾಡಿದ್ದಾರೆʼ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಇಡೀ ರಾತ್ರಿ ಖಾಸಗಿ ವಾಹನದಲ್ಲಿ ಅಲೆದಾಡಿಸಿ ಅವಾಚ್ಛ ಶಬ್ದಗಳಿಂದ ನಿಂದನೆ ಮಾಡಿದ್ದಾರೆ. ನಂತರ ಗಾಂಧಿಗಂಜ್ ಪೊಲೀಸ್ ಠಾಣೆಯಲ್ಲಿ ಬಿಟ್ಟು ಹೋಗಿದ್ದಾರೆ. ಆ ನಂತರ ಹಲ್ಲೆಗೊಳಗಾಗಿರುವ ರವಿ ಅವರು ಬ್ರಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದುಕೊಂಡಿದ್ದಾರೆ. ಪರಿಶಿಷ್ಟ ಜಾತಿಗೆ ಸೇರಿದ ರವಿ ಭೋಸಂಡೆ ಅವರಿಗೆ ಜಾತಿ ನಿಂದನೆ ಮಾಡಿದ್ದಾರೆ’ ಎಂದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಪಿಯುಸಿ ಪರೀಕ್ಷೆ ಫಲಿತಾಂಶ : ಜಿಲ್ಲೆಯ 13 ಪಿಯು ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ

ಭೀಮ್ ಆರ್ಮಿ ಜಿಲ್ಲಾ ಗೌರವ ಅಧ್ಯಕ್ಷ ಘಾಳಪ್ಪ ಲಾದಕರ್, ಜಿಲ್ಲಾಧ್ಯಕ್ಷ ಅಂಬರೀಶ್‌ ಕುದರೆ, ರಾಜ್ಯ ಸಮಿತಿ ಪ್ರತಿನಿಧಿ ಆಕಾಶ ವಿ ಆರ್ ಕೆ, ವೀರ ಕನ್ನಡಿಗರ ಸೇನೆ ರಾಜ್ಯ ಸಂಚಾಲಕ ಡಾ. ಸುಬ್ಬಣ್ಣ ಕರಕನಳ್ಳಿ, ಕನ್ನಡಿಗರ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಶ್ರೀಕಾಂತ ಭವಾನಿ, ಕರವೇ ಕಾವಲು ಪಡೆ ಜಿಲ್ಲಾಧ್ಯಕ್ಷ ಅವಿನಾಶ ಬುದೇರಾಕರ್, ಅಂಬಾದಾಸ ಸೈನೆ, ಕರ್ನಾಟಕ ಭೀಮ ಸೈನೆ ರಾಜ್ಯ ಕಾರ್ಯದರ್ಶಿ ವಿಷ್ಣುವರ್ಧನ ವಾಲದೊಡ್ಡಿ, ಕರ್ನಾಟಕ ಪ್ರಜಾಶಕ್ತಿ ಸಮಿತಿ ಜಿಲ್ಲಾಧ್ಯಕ್ಷ ಸಾಯಿ ಸಿಂಧೆ, ಮಾರುತಿ ಕಂಠಿ ಕಪಿಲ ಗೋಡಬಲೆ, ಹರ್ಷಿತ್ ವಾಡೆಕರ ಅಮೃತ ಮುಂತ್ತಂಗಿಕರ ರಾಜಕುಮಾರ ಡೋಗ್ರೇರೆ, ವಿನಿತ ಗೀರಿ ಸೇರಿದಂತೆ ಮತ್ತಿತರರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...