ಬೀದರ್ | ಶ್ರೀ ಕುಮಾರಸ್ವಾಮಿ ಪತ್ರಿಕಾ ಭೂಷಣ ಪ್ರಶಸ್ತಿಗೆ ಪತ್ರಕರ್ತ ಶಶಿಕಾಂತ ಶೆಂಬೆಳ್ಳಿ ಆಯ್ಕೆ

Date:

ಬೀದರ್ ಜಿಲ್ಲೆಯ ಪ್ರಜಾವಾಣಿಯ ಹಿರಿಯ ವರದಿಗಾರ ಶಶಿಕಾಂತ ಶೆಂಬೆಳ್ಳಿ ಅವರು ಮಹಾತಪಸ್ವಿ ಶ್ರೀ ಕುಮಾರಸ್ವಾಮಿ ಪತ್ರಿಕಾ ಭೂಷಣ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಗಬ್ಬೂರಿನ ಮಹಾಶೈವ ಧರ್ಮಪೀಠದ ಪೀಠಾಧ್ಯಕ್ಷ ಮುಕ್ಕಣ್ಣ ಕರಿಗಾರ ಅವರ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಮಹಾಶೈವ ಧರ್ಮಪೀಠದ ಸಾಂಸ್ಕೃತಿಕ ಸಮಿತಿ ಆಯ್ಕೆ ಮಾಡಿದೆ.

ಮಹಾಶೈವ ಧರ್ಮಪೀಠವು ಪ್ರತಿವರ್ಷ ಪೀಠಾಧ್ಯಕ್ಷ ಮುಕ್ಕಣ್ಣ ಕರಿಗಾರ ಅವರ ಗುರು ಧಾರವಾಡದ ತಪೋವನದ ಮಹಾತಪಸ್ವಿ ಕುಮಾರಸ್ವಾಮಿ ಅವರ ಜನ್ಮದಿನೋತ್ಸವದ ನೂಲಹುಣ್ಣಿಮೆಯ ದಿನದಂದು ಮಹಾಶೈವ ಗುರುಪೂರ್ಣಿಮೆ ಆಚರಣೆ ಹಾಗೂ ಪತ್ರಿಕಾ ಕ್ಷೇತ್ರದಲ್ಲಿ ಗಮನಾರ್ಹ ಸೇವೆಗೈದ ಮಹನೀಯರನ್ನು ಗುರುತಿಸಿ ರಾಜ್ಯ ಮಟ್ಟದ ಪ್ರಶಸ್ತಿ ನೀಡಿ ಗೌರವಿಸುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೂಲತಃ ಬೀದರ್ ಜಿಲ್ಲೆಯವರಾದ ಶಶಿಕಾಂತ ಶೆಂಬೆಳ್ಳಿ ಅವರು ಪ್ರಜಾವಾಣಿ ಪತ್ರಿಕೆಯ ವರದಿಗಾರರಾಗಿ ಬೆಂಗಳೂರು ಮುಖ್ಯ ಕಚೇರಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸೇವೆ ಸಲ್ಲಿಸಿ ಜನಪರ ಕಾಳಜಿಯೊಂದಿಗೆ ವಸ್ತುನಿಷ್ಠ ವರದಿಗಳ ಮುಖಾಂತರ ಪತ್ರಿಕಾ ಕ್ಷೇತ್ರದಲ್ಲಿ ಛಾಪು ಮೂಡಿಸಿದ್ದಾರೆ.

ಪ್ರಶಸ್ತಿಯು ₹51 ಸಾವಿರ ರೂಪಾಯಿ ನಗದು ಬಹುಮಾನ, ಸ್ಮರಣಿಕೆ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿದೆ. ಅಗಸ್ಟ್ 9ರಂದು ಮಹಾಶೈವ ಧರ್ಮಪೀಠದ ಮಹಾತಪಸ್ವಿ ಶ್ರೀ ಕುಮಾರಸ್ವಾಮಿ ಸಭಾಭವನದಲ್ಲಿ ನಡೆಯುವ ‘ಮಹಾಶೈವ ಗುರುಪೂರ್ಣಿಮೆ’ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

ಪೀಠಾಧ್ಯಕ್ಷರಾದ ಮುಕ್ಕಣ್ಣ ಕರಿಗಾರ ಅವರ ಅಧ್ಯಕ್ಷತೆಯಲ್ಲಿ ನಡೆದ ಪ್ರಶಸ್ತಿ ಪುರಸ್ಕೃತರ ಆಯ್ಕೆ ಸಭೆಯಲ್ಲಿ ಮಹಾಶೈವ ಧರ್ಮಪೀಠ ಆಡಳಿತಾಧಿಕಾರಿ ತ್ರಯಂಬಕೇಶ, ಮಹಾಶೈವ ಧರ್ಮಪೀಠದ ಸಾಂಸ್ಕೃತಿಕ ಸಮಿತಿಯ ಕಾರ್ಯದರ್ಶಿ ಬಸವರಾಜ ಸಿನ್ನೂರು, ವಾರ್ತಾಧಿಕಾರಿ ಬಸವರಾಜ ಕರೆಗಾರ, ಸದಸ್ಯರುಗಳಾದ ಶರಣಪ್ಪ ಬೂದಿನಾಳ, ಬಾಬುಗೌಡ ಯಾದವ ಸುಲ್ತಾನಪುರ, ಷಣ್ಮುಖ ಹೂಗಾರ, ಪ್ರಕಾಶ ಪಾಟೀಲ್ ಶಾವಂತಗೇರಾ, ಮೃತ್ಯುಂಜಯ ಯಾದವ ಪಾಲ್ಗೊಂಡಿದ್ದರು.

ಕೆಯುಡಬ್ಲ್ಯುಜೆ ಸಂತಸ :

ಪ್ರಶಸ್ತಿಗೆ ಭಾಜನರಾದ ಶಶಿಕಾಂತ ಶೆಂಬೆಳ್ಳಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಅಭಿನಂದಿಸಿದೆ.

ಶಶಿಕಾಂತ ಶೆಂಬೆಳ್ಳಿ ಅವರು ಎರಡು ದಶಕಗಳಿಗೂ ಅಧಿಕ‌ ವರ್ಷಗಳಿಂದ ನಿರ್ಭಿಡೆ ಹಾಗೂ ನಿಷ್ಪಕ್ಷಪಾತದಿಂದ ಮಾಡುತ್ತಿರುವ ಅವರ ಮಾಧ್ಯಮ ಸೇವೆ ಸರ್ಕಾರ ಹಾಗೂ ವಿವಿಧ ಸಂಘ, ಸಂಸ್ಥೆಗಳು ಗುರುತಿಸಿ ಪ್ರಶಸ್ತಿ ನೀಡುತ್ತಿರುವುದು ಬಹಳ ಸಂತೋಷದ ವಿಷಯ.

ಶಶಿಕಾಂತ ಅವರಿಗೆ ಪ್ರಶಸ್ತಿ ಬಂದಿರುವುದು ಅವರ ಕುಟುಂಬಕಷ್ಟೆ ಅಲ್ಲದೆ ಇಡೀ ಪತ್ರಿಕಾ ಸಮೂಹಕ್ಕೆ ಹೆಮ್ಮೆಯ ಸಂಗತಿ. ಈ ಪ್ರಶಸ್ತಿ ಜಿಲ್ಲೆಯ ಕೀರ್ತಿ ಹೆಚ್ಚಾಗಲು ಪ್ರಮುಖ‌ ಕಾರಣವಾಗಿದೆ.

ಇದನ್ನೂ ಓದಿ : ಬೀದರ್ | ಮಹಿಳೆಯೊಂದಿಗೆ ಮಗು ಭಿಕ್ಷಾಟನೆ : ಮಗು ರಕ್ಷಿಸಿದ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಪ್ರಶಸ್ತಿಗೆ ಆಯ್ಕೆ ಮಾಡಿದ ಗಬ್ಬೂರಿನ ಮಹಾಶೈವ ಧರ್ಮಪೀಠದ ಪೀಠಾಧ್ಯಕ್ಷ ಮುಕ್ಕಣ್ಣ ಕರಿಗಾರ ಹಾಗೂ ಆಯ್ಕೆ ಸಮಿತಿಗೆ ಪತ್ರಕರ್ತರ ಸಂಘ ಕೃತಜ್ಞತೆ ಸಲ್ಲಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...