ಬೀದರ್‌ | ಕಲಿಕೋತ್ಸವ ಮಕ್ಕಳ ಪ್ರತಿಭೆಗೆ ಸೂಕ್ತ ವೇದಿಕೆ : ಗಣಪತಿ

Date:

ಮಕ್ಕಳಲ್ಲಿ ಅಡಗಿರುವ ಅಗಾಧವಾದ ಪ್ರತಿಭೆ ಗುರುತಿಸಲು ಕಲಿಕೋತ್ಸವ ಕಾರ್ಯಕ್ರಮ ಸೂಕ್ತ ವೇದಿಕೆಯಾಗಿದೆ ಎಂದು ಚಾಂಗಲೇರಾ ಗ್ರಾಮ ಪಂಚಾಯತ್ ಅಧ್ಯಕ್ಷ ಗಣಪತಿ ಹೇಳಿದರು.

ಬೀದರ್‌ ತಾಲ್ಲೂಕಿನ ಚಾಂಗಲೇರಾ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಮತ್ತು ಗ್ರಾಮ ಪಂಚಾಯತ್ ಚಾಂಗಲೇರಾ ಇವರ ಸಹಯೋಗದಲ್ಲಿ ಶಾಲೆಯಲ್ಲಿ ಮಂಗಳವಾರ ಆಯೋಜಿಸಿದ ಶಾಲಾ ವಾರ್ಷಿಕೋತ್ಸವ, ಕಲಿಕೋತ್ಸವ ಹಾಗೂ ಇಕೋ ಕ್ಲಬ್ ಉದ್ಘಾಟನೆ ಹಾಗೂ 8ನೇ ತರಗತಿಯ ಮಕ್ಕಳಿಗೆ ಬೀಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ʼಮಕ್ಕಳ ಪ್ರತಿಭೆ ಹಾಗೂ ಕಲಿಕಾ ಸಾಮರ್ಥ್ಯವನ್ನು ಅನಾವರಣಗೊಳಿಸಿ ಶಿಕ್ಷಕರು ಮಕ್ಕಳ ವಿಭಿನ್ನ ಪ್ರತಿಭೆಯನ್ನು ಕಣ್ಣಾರೆ ನೋಡುವಂತೆ ಮಾಡಿದ್ದಾರೆ. ಮಕ್ಕಳ ಕಲಿಕೆ ಮತ್ತು ಅವರ ಪ್ರತಿಭೆಯನ್ನು ನೋಡಿ ಸಂತೋಷವಾಗಿದೆʼ ಎಂದು ಶ್ಲಾಘಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ರಾಮ ಪಂಚಾಯತ್ ಸದಸ್ಯ ವಿಜಯಕುಮಾರ ವಾಲಿ ಮಾತನಾಡಿ, ʼಮಕ್ಕಳು ಸಿದ್ಧಪಡಿಸಿದ ವಿವಿಧ ಮಾದರಿ ಚಟುವಟಿಕೆ, ಕ್ರಿಯಾಶೀಲತೆ, ದೇಶಭಕ್ತಿ ನೋಡಿ ಹೆಮ್ಮೆ ಎನಿಸಿದೆ. ಇನ್ನೂ ಹೆಚ್ಚಿನ ಜ್ಞಾನವೃದ್ಧಿ ಗಳಿಸಿ ಗ್ರಾಮಕ್ಕೆ ಕೀರ್ತಿ ತರಬೇಕುʼ ಎಂದು ಹಾರೈಸಿದರು.

WhatsApp Image 2025 03 19 at 7.48.33 PM
ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.

ಶಾಲೆಯ ಮುಖ್ಯಗುರು ಧರ್ಮಪ್ರಕಾಶ ಅಧ್ಯಕ್ಷತೆ ವಹಿಸಿದ್ದರು. ಗ್ರಾ.ಪಂ. ಸದಸ್ಯರಾದ ಅಶೋಕ, ಶ್ರೀಮತಿ ಯಶೋಧಾ, ಕಂಟೆಪ್ಪಾ ಚಾಂಗಲೇರಾ, ಸೊಸೈಟಿ ಅಧ್ಯಕ್ಷರಾದ ಪರಮೇಶ್ವರ ಸ್ವಾಮಿ, ಎಪಿಎಂಸಿ ಸದಸ್ಯ ದೇವಿಂದ್ರ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಾಜಶೇಖರ ಉಪ್ಪಿನ್, ಶಿಕ್ಷಕರ ಸಂಘದ ಅಧ್ಯಕ್ಷ ರಾಜಪ್ಪ ಜಮಾದಾರ, ಖಜಾಂಚಿ ರಮೇಶ ಕ್ಯಾತಾ, ಸಾವಿತ್ರಿಬಾಯಿ ಫುಲೆ ಸಂಘದ ಅಧ್ಯಕ್ಷೆ ಪ್ರೇಮಿಲಾಬಾಯಿ ರೆಡ್ಡಿ, ನಿರ್ದೇಶಕ ಮೋಜೆಷ್, ಸಿಆರ್‌ಪಿ ಶಿವಕುಮಾರ ರಾಠೋಡ್, ಮಲ್ಲಯ್ಯ ಸ್ವಾಮಿ, ಮುಖ್ಯಗುರುಗಳ ಸಂಘದ ಅಧ್ಯಕ್ಷ ಮಾರುತಿ ಜಟಗೊಂಡ, ನಿರ್ದೇಶಕ ಶ್ರೀಮತಿ ಕಸ್ತೂರಿ ಉಪಸ್ಥಿತರಿದ್ದರು.

ಚಾಂಗಲೇರಾ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಣ ಪಡೆದು ವಿವಿಧ ಸರಕಾರಿ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿರುವ ರವೀಂದ್ರ ಫಾರೆಲ್, ವಿಜಯಕುಮಾರ, ಜ್ಯೋತಿ, ರಾಜಶೇಖರ ಮಳ್ಳಿ, ಶಿವಕುಮಾರ ಸಾಲಿ, ನಾರಾಯಣ ಮಡಿವಾಳ, ಸಾವಿತ್ರಿಬಾಯಿ, ಸುಧಾರಾಣಿ ಶರ್ಮಾ, ನಿರಂಜನ್, ಶಿವಕುಮಾರ ತೊಂಟೆ, ಗೌತಮ್ ರಾಹುಲ್, ಪ್ರಕಾಶ ರಾಹುಲ್, ಶಿವರಾಜ್, ಸುಜಾತಾ, ರಮೇಶ ರೆಡ್ಡಿ, ಅವರನ್ನು ವಿಶೇಷವಾಗಿ ಗೌರವಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಬೀದರ್ | ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕೆಎಸ್‌ಆರ್‌ಟಿಸಿ ಬಸ್; ಪ್ರಯಾಣಿಕರು ಪಾರು

ಬಳಿಕ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು. ಶಿಕ್ಷಕಿ ಜೈಶ್ರೀ ಸ್ವಾಗತ ಗೀತೆ ನಡೆಸಿಕೊಟ್ಟರು. ರಾಜಪ್ಪ ಸಾಗರ್ ಸ್ವಾಗತಿಸಿದರು. ಪ್ರಭು ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯಗುರುಗಳು ವರದಿ ವಾಚನ ಮಾಡಿದರು. ಎಂ.ಎಸ್.ಮನೋಹರ ನಿರೂಪಿಸಿದರು. ಶಿವಕುಮಾರ ಹೂಗಾರ್ ವಂದಿಸಿದರು. ಶಿಕ್ಷಕರಾದ ಮಸ್ತಾನ್, ಶಿಕ್ಷಕಿಯರಾದ ಗಾಯತ್ರಿ, ಪ್ರತಿಭಾ, ಭುವನೇಶ್ವರಿ, ರೇಣುಕಾ, ಕವಿತಾ ಸೇರಿದಂತೆ ವಿದ್ಯಾರ್ಥಿ, ಸಿಬ್ಬಂದಿ ಹಾಗೂ ಪಾಲಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...