ಬೀದರ್‌ | ರಸ್ತೆ ಗುಂಡಿಗಳಿಗೆ ಹೂವು ಸುರಿಸಿ ವಿನೂತನ ಪ್ರತಿಭಟನೆ ನಡೆಸಿದ ಕೆಆರ್‌ಎಸ್‌ ಪಕ್ಷ

Date:

ಬೀದರ್‌ ನಗರದಲ್ಲಿ ಹೆಚ್ಚುತ್ತಿರುವ ರಸ್ತೆಗುಂಡಿ ಸಮಸ್ಯೆಗೆ ಪರಿಹಾರ ನೀಡುವಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳು ಪದೇ ಪದೇ ವಿಫಲವಾಗುತ್ತಿರುವುದನ್ನು ವಿರೋಧಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಜಿಲ್ಲಾ ಘಟಕದ ಪದಾಧಿಕಾರಿಗಳು ರಸ್ತೆ ಗುಂಡಿಗಳಿಗೆ ಹೂವು ಸುರಿಸಿ, ಅಗರಬತ್ತಿ ಹಚ್ಚಿ ಪೂಜೆ ಸಲ್ಲಿಸಿ ವಿನೂತನ ಪ್ರತಿಭಟನೆ ನಡೆಸಿದ್ದಾರೆ.

ಕೆಆರ್‌ಎಸ್ ಪಕ್ಷದ ಜಿಲ್ಲಾಧ್ಯಕ್ಷ ಹಣಮಂತ ಮಟ್ಟೆ ನೇತ್ರತ್ವದಲ್ಲಿ ಭಾನುವಾರ ಬೀದರ್-ನೌಬಾದ್‌ ರಸ್ತೆಯಲ್ಲಿನ ಗುಂಡಿಗಳಿಗೆ ಹೂವು ಸುರಿಸಿ ಅಧಿಕಾರಿಗಳ ಹಾಗೂ ಚುನಾಯಿತ ಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬೀದರ್‌-ನೌಬಾದ್‌ ರಸ್ತೆ ಸೇರಿದಂತೆ ನಗರದ ವಿವಿಧ ಮುಖ್ಯರಸ್ತೆಯಲ್ಲಿ ಭಾರಿ ಮಳೆಯಿಂದ ರಸ್ತೆ ಗುಂಡಿ ಬಿದ್ದು ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ಈ ಬಗ್ಗೆ ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದರೂ ಕ್ಯಾರೆ ಎನ್ನುತ್ತಿಲ್ಲ. ತೆರಿಗೆ ಹಣದಲ್ಲಿ ಸಂಬಳ ಪಡೆಯುವ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ರಸ್ತೆ ಗುಂಡಿ ಸಮಸ್ಯೆ ಕಾಣುತ್ತಿಲ್ಲವೇ? ಇದು ಕಳಪೆ ಗುಣಮಟ್ಟದ ಕೆಲಸವನ್ನು ಎತ್ತಿ ತೋರಿಸುತ್ತದೆʼ ಎಂದು ಜಿಲ್ಲಾಧ್ಯಕ್ಷ ಹಣಮಂತ ಮಟ್ಟೆ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಸ್ತೆ ಗುಂಡಿಗಳ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾದರೆ ಮತ್ತು ಸಾರ್ವಜನಿಕ ಟೀಕೆಗಳು ಬಂದಾಗ ಮಾತ್ರ ದುರಸ್ತಿಗೆ ಮುಂದಾಗುತ್ತದೆಯೇ ಹೊರತು ಆಡಳಿತವು ತನ್ನದೇ ಆದ ಉಪಕ್ರಮದಲ್ಲಿ ದುರಸ್ತಿ ಕಾರ್ಯ ಮಾಡುತ್ತಿಲ್ಲ. ಈಗಲಾದರೂ ಎಚ್ಚೆತ್ತು ಶೀಘ್ರದಲ್ಲಿ ಅಪಘಾತಕ್ಕೆ ಆಹ್ವಾನ ನೀಡುತ್ತಿರುವ ರಸ್ತೆ ಗುಂಡಿ ಮುಚ್ಚಬೇಕು. ಇಲ್ಲದಿದ್ದರೆ ಲೋಕೋಪಯೋಗಿ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.‌

ಇದನ್ನೂ ಓದಿ : ಬೀದರ್‌ | ಬಾವಿಗೆ ಬಿದ್ದು ಮಹಿಳೆ ಆತ್ಮಹತ್ಯೆ

ಈ ಸಂದರ್ಭದಲ್ಲಿ ಕೆಆರ್‌ಎಸ್ ಪಕ್ಷದ ಉಪಾಧ್ಯಕ್ಷ ಶಿವರಾಜ ಶ್ರೀಮಂಗಲೆ, ವೀರಭದ್ರ ಸ್ವಾಮಿ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...