ಬೀದರ್‌ | ಜು.9ರಂದು ಕಾರ್ಮಿಕ ಸಂಘಟನೆಗಳ ಮುಷ್ಕರ

Date:

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜುಲೈ 9 ರಂದು ಕಾರ್ಮಿಕ ಸಂಘಗಳು ಮತ್ತು ಸಂಯುಕ್ತ ಕಿಸಾನ್ ಮೋರ್ಚಾ ಜಿಲ್ಲಾ ಬೀದರ ಘಟಕಗಳು ಜಂಟಿಯಾಗಿ ಬೀದರನಲ್ಲಿ ಸಾರ್ವತ್ರಿಕ ಮುಷ್ಕರ ನಡೆಸಲು ತೀರ್ಮಾನಿಸಿದೆ.

ಈ ಸಂಬಂಧ ಜಂಟಿ ಸಂಘಟನೆಗಳ ಮುಖಂಡರು ಬೀದರ್ ನಗರದ ಸ್ಟಾರ್ ಲಾಡ್ಜ್ ಸಭಾಂಗಣದಲ್ಲಿ ನಡೆಸಲಾದ ಸಭೆಯಲ್ಲಿ ನಿರ್ಧರಿಸಲಾಗಿದೆ.

ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆ (ಬಿಎಸ್‌ಎಸ್‌ಕೆ) ಹಳ್ಳಿಖೇಡ್ ಕಾರ್ಮಿಕರು, ಬಗರ್ ಹುಕುಂ ಸಾಗುವಳಿದಾರರು, ರೈತರು, ಕಾರ್ಮಿಕರು, ಅಂಗನವಾಡಿ, ಬಿಸಿಯೂಟ, ಆಶಾ ಕಾರ್ಯಕರ್ತೆರರು ಅಂದು ಮಧ್ಯಾಹ್ನ 12 ಗಂಟೆಗೆ ನಗರದ ಅಂಬೇಡ್ಕರ್ ವೃತ್ತದಲ್ಲಿ ಸೇರಬೇಕೆಂದು ಸಂಘಟನೆಗಳ ಮುಖಂಡರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು, ಸ್ವಾಮಿನಾಥನ್ ಆಯೋಗ ಶಿಫಾರಸ್ಸಿನಂತೆ ಎಂಎಸ್‌ಪಿ (ಕನಿಷ್ಟ ಬೆಂಬಲ ಬೆಲೆ) ಕುರಿತು ಪಾರ್ಲಿಮೆಂಟ್‌ನಲ್ಲಿ ಕಾಯ್ದೆ ಅಂಗೀಕರಿಸಬೇಕು. ಬೀದರ ಜಿಲ್ಲೆ ಬರಪೀಡಿತ ಜಿಲ್ಲೆಯನ್ನಾಗಿ ಘೋಷಿಸಬೇಕು. ಬಗರ್ ಹುಕುಂ ಸಾಗುವಳಿಯನ್ನು ಸಕ್ರಿಯಗೊಳಿಸಬೇಕು. ಬಿಎಸ್‌ಎಸ್‌ಕೆ ಹಳ್ಳಖೇಡ್ (ಬಿ) ಸಕ್ಕರೆ ಕಾರ್ಖಾನೆ ಪುನಾರಂಭಿಸಿ ಕಾರ್ಖಾನೆ ನೌಕರರಿಗೆ ಕೊಡಬೇಕಾದ 35 ಕೋಟಿ ರೂ. ಸಂಬಳವಾಗಿ ಇನ್ನಿತರ ಹಣ ಸಂದಾಯ ಮಾಡಬೇಕೆಂದು ಮುಷ್ಕರದ ಬೇಡಿಕೆಗಳಾಗಿವೆ ಎಂದು ಹೇಳಿದರು.

ಅಂಗನವಾಡಿ, ಬಿಸಿಯೂಟ ಮತ್ತು ಆಶಾ ಕಾರ್ಯಕರ್ತೆಯರನ್ನು ಸರಕಾರಿ ನೌಕರರೆಂದು ಪರಿಗಣಿಸಿ ಕನಿಷ್ಠ ಸಂಬಳ 25ಸಾವಿರ ವೇತನ ನೀಡಬೇಕು. ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರಿಗೆ ನಿವೃತ್ತಿ ವೇತನ ಬಿಡುಗಡೆ ಮಾಡಬೇಕು. ಕಟ್ಟಡ ಕಾರ್ಮಿಕರ ಸೌಲಭ್ಯಗಳನ್ನು ಬಿಡುಗಡೆ ಮಾಡುವುದು ಸೇರಿದಂತೆ ಇತರ ಬೇಡಿಕೆಗಳ ಈಡೇರಿಕೆಗೆ ಸಭೆಯಲ್ಲಿ ನಿರ್ಧರಿಸಲಾಗಿದೆ.

ಇದನ್ನೂ ಓದಿ : ಬೀದರ್‌ | ದ್ವಿಭಾಷಾ ಶಿಕ್ಷಣ ನೀತಿ ಜಾರಿಗೆ ಆಗ್ರಹಿಸಿ ಕರವೇ ಪ್ರತಿಭಟನೆ

ಜೆಸಿಟಿಯು ಸಂಘಟನೆಯ ಸಂಚಾಲಕ ಬಾಬುರಾವ ಹೊನ್ನಾ, ಸಂಯುಕ್ತ ಕಿಸಾನ್ ಮೋರ್ಚಾ ಸಂಚಾಲಕ ನಜೀರ ಅಹ್ಮದ್, ಕಟ್ಟಡ ಕಾರ್ಮಿಕ ಸಂಘ (ಎಐಟಿಯುಸಿ) ಅಧ್ಯಕ್ಷ ಎಂ.ಡಿ. ಶಫಾಯತ್‌ಅಲಿ, ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ಅಧ್ಯಕ್ಷೆ ಚಂದ್ರಕಲಾ ಕಮಠಾಣಕರ್, ಭಾರತೀಯ ಮಹಿಳಾ ಒಕ್ಕೂಟದ ಅಧ್ಯಕ್ಷೆ ಶೀಲಾ ಸಾಗರ, ಆರ್.ಪಿ. ರಾಜಾ, ಮಹೇಶ ನಾಡಗೌಡಾ, ಬಿಎಸ್‌ಎಸ್‌ಕೆ ಹಳ್ಳಿಖೇಡ್(ಬಿ) ನಿವೃತ್ತ ನೌಕರರು ಸಿದ್ರಾಮಪ್ಪಾ ಸೇರಿದಂತೆ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...