ಬೀದರ್‌ | ರೈತರಿಗೆ ರಸಗೊಬ್ಬರ ಕೊರತೆ : ಜು.30ರಂದು ಜಿಲ್ಲಾದ್ಯಂತ ಬಿಜೆಪಿ ಪ್ರತಿಭಟನೆ

Date:

ಕೇಂದ್ರ ಸರ್ಕಾರವು ರಾಜ್ಯದ ರೈತರ ಅವಶ್ಯಕತೆಗಿಂತ ಹೆಚ್ಚಿನ ಯುರಿಯಾ, ಡಿಎಪಿ ಶೇಖರಣೆ ಮತ್ತು ಕಾಂಪ್ಲೇಕ್ಸ್ ರಸಗೊಬ್ಬರಗಳನ್ನು ಸರಬರಾಜು ಮಾಡಿದ್ದರು ಕೂಡ ರಾಜ್ಯ ಸರ್ಕಾರದ ಅವೈಜ್ಞಾನಿಕ ದಾಸ್ತಾನು ಹಾಗೂ ಕಾಳಸಂತೆಗೆ ಉತ್ತೇಜನ ನೀಡುವ ಉದ್ದೇಶದಿಂದ ರೈತರಿಗೆ ಅಭಾವ ಸೃಷ್ಟಿಸಿರುವುದನ್ನು ಖಂಡಿಸಿ ಬುಧವಾರ (ಜು.30) ರಂದು ಜಿಲ್ಲೆಯಾದ್ಯಂತ ಬಿಜೆಪಿಯಿಂದ ರೈತರೊಂದಿಗೆ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್‌ ತಿಳಿಸಿದ್ದಾರೆ.

ʼರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಕೃಷಿ ಸಚಿವ ಚೆಲುವರಾಯಸ್ವಾಮಿ ಹಾಗೂ ಎಪಿಎಮ್‌ಸಿ ಸಚಿವ ಶಿವಾನಂದ ಪಾಟೀಲ್‌ ಅವರು ಮಾಧ್ಯಮಗಳಲ್ಲಿ ಒಬ್ಬರಿಗೊಬ್ಬರು ತಾಳಮೇಳವಿಲ್ಲದಂತೆ ವಿಭಿನ್ನ ಹೇಳಿಕೆಗಳನ್ನು ನೀಡಿ ರೈತರಿಗೆ ಗೊಂದಲ ಮುಡಿಸಿ ಕಾಳಸಂತಕೊರರಿಗೆ ಕಡಿವಾಣ ಹಾಕುವಬದಲು ಪ್ರೊತ್ಸಾಹಿಸುವ ರೈತ ವಿರೋಧಿಗಳಾಗಿದ್ದಾರೆʼ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರದ ನಡೆ ಖಂಡಿಸಿ ಜುಲೈ 30ರಂದು 10 ಗಂಟೆಗೆ ಬಸವಕಲ್ಯಾಣ ಕ್ಷೇತ್ರದ ಹುಲಸೂರಿನ ಮುಖ್ಯ ರಸ್ತೆ, ಔರಾದ ಪಟ್ಟಣದ ಎಪಿಎಂಸಿ ವೃತ್ತ, ಬೀದರ ಕ್ಷೇತ್ರದ ಜನವಾಡಾ ಗ್ರಾಮದ ಮುಖ್ಯ ರಸ್ತೆ, ಬೀದರ ದಕ್ಷಿಣ ಕ್ಷೇತ್ರದ ಮನ್ನಾಎಖ್ಖೆಳ್ಳಿಯ ಬಸವೇಶ್ವರ ವೃತ್ತ ಹುಮನಾಬಾದ ಕ್ಷೇತ್ರದ ಚಿಟಗುಪ್ಪಾ ಪಟ್ಟಣದ ಬಸವರಾಜ ವೃತ್ತ ಹಾಗೂ ಮಧ್ಯಾಹ್ನ 2 ಗಂಟೆಗೆ ಭಾಲ್ಕಿಯ ಅಂಬೇಡ್ಕರ ವೃತ್ತದಲ್ಲಿ ರಸ್ತೆ ತಡೆ ಮುಖಾಂತರ ಪ್ರತಿಭಟನೆ ನಡೆಸಲಾಗುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ರೈತರು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕೆಂದು ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ ಅವರು ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ಒಂದೇ ಹೆಸರಿನ ಮೂವರು ಸಹೋದರರು; ಹೆಸರಿನ ಹಿಂದಿನ ಗುಟ್ಟೇನು ಗೊತ್ತಾ!

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...