ಬೀದರ್‌ | ವಕೀಲರ ಅವಹೇಳನ : ಸಿಪಿಐ ವಿರುದ್ಧ ಕ್ರಮಕ್ಕೆ ಆಗ್ರಹ

Date:

ವಕೀಲರ ಅವಹೇಳನ ಮಾಡಿರುವ ಗಾಂಧಿಗಂಜ್ ಠಾಣೆ ಸಿಪಿಐ ಆನಂದರಾವ್ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ವಕೀಲರ ಸಂಘ ಆಗ್ರಹಿಸಿದೆ.

ವಕೀಲರ ಸಂಘದ ಪದಾಧಿಕಾರಿಗಳು ನಗರದಲ್ಲಿ ಗುರುವಾರ ನಿಯೋಗದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರನ್ನು ಭೇಟಿ ಮಾಡಿ ಈ ಕುರಿತು ಮನವಿ ಪತ್ರ ಸಲ್ಲಿಸಿದರು.

ʼಸಿವಿಲ್ ದಾವೆಗೆ ಸಂಬಂಧಿಸಿದಂತೆ ತಮ್ಮನ್ನು ಭೇಟಿ ಮಾಡಿದ ವಕೀಲ ಸುಂದರರಾಜ ಬಿ. ಫಿರಂಗೆ ಅವರೊಂದಿಗೆ ಸಿಪಿಐ ಅವರು ಅನುಚಿತವಾಗಿ ನಡೆದುಕೊಂಡಿದ್ದಾರೆ.ಏಕ ವಚನ ಬಳಸಿದ್ದಾರೆ. ವಕೀಲರು, ನ್ಯಾಯಾಲಯ, ನ್ಯಾಯವನ್ನು ಹೀಯ್ಯಾಳಿಸಿದ್ದಾರೆ. ವಕೀಲರ ಘನತೆ, ಗೌರವಕ್ಕೆ ಧಕ್ಕೆ ಉಂಟು ಮಾಡಿದ್ದಾರೆ. ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆʼ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಸಿಪಿಐ ಅವರ ವಿರುದ್ಧ ಇಲಾಖಾ ವಿಚಾರಣೆ ನಡೆಸಿ, ಅವರನ್ನು ಸೇವೆಯಿಂದ ಅಮಾನತುಗೊಳಿಸಬೇಕು. ಅಹಿತಕರ ಘಟನೆ ಹಾಗೂ ಸಿವಿಲ್ ಪ್ರಕರಣದಲ್ಲಿ ಪೊಲೀಸ್ ಹಸ್ತಕ್ಷೇಪ ಮರುಕಳಿಸದಂತೆ ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳಿಗೆ ಆದೇಶಿಸಬೇಕುʼ ಎಂದು ಒತ್ತಾಯಿಸಿದರು.

ಇದನ್ನೂ ಓದಿ : ಯುಗಧರ್ಮ | ಸಮಾಜವಾದಿ ಚಳವಳಿಯ ನೈತಿಕ ಮತ್ತು ಸೃಜನಶೀಲ ಪರಂಪರೆ

ಸಂಘದ ಅಧ್ಯಕ್ಷ ಸನ್ಮುಖಯ್ಯ ಸ್ವಾಮಿ, ಉಪಾಧ್ಯಕ್ಷ ಶಿವಕುಮಾರ ವಿ. ಮಾಲಿಪಾಟೀಲ, ಪ್ರಧಾನ ಕಾರ್ಯದರ್ಶಿ ಧನರಾಜ ಎಸ್. ಬಿರಾದಾರ, ಜಂಟಿ ಕಾರ್ಯದರ್ಶಿ ಬಜರಂಗ ಪಿ. ಕಾಶೆಂಪುರ, ಖಜಾಂಚಿ ಜಯಶ್ರೀ ಡಿ. ಪಾಟೀಲ, ಮಾಜಿ ಅಧ್ಯಕ್ಷ ಶಿವಶರಣಪ್ಪ(ಪುಟ್ಟು) ಪಾಟೀಲ, ವಕೀಲ ಗುರುದಾಸ್ ಅಮದಲಪಡ್, ಸಂಘದ ಸದಸ್ಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...