ಬೀದರ್‌ | ಕರ್ನಾಟಕದಲ್ಲಿ ಕನ್ನಡವೇ ಸಂಭ್ರಮಿಸಲಿ : ಟಿ.ಎ.ನಾರಾಯಣಗೌಡ

Date:

ʼಕರ್ನಾಟಕದಲ್ಲಿ ಕನ್ನಡವೇ ಸಂಭ್ರಮಿಸಬೇಕು. ಬೇರೆ ಭಾಷೆಗಳು ಮೆರೆಯಲು ಅವಕಾಶ ಇಲ್ಲ. ಕನ್ನಡಿಗರು ಪ್ರೀತಿಗೆ ಪ್ರೀತಿ, ನೀರು ಕೇಳಿದರೆ ಅಮೃತ ಕೊಡುವವರು. ಕೆಣಕಿದರೆ ತಕ್ಕ ಉತ್ತರ ಕೊಡುವವರೂ ಆಗಿದ್ದಾರೆ. ಕರ್ನಾಟಕ ಸರ್ಕಾರ ‘ಕನ್ನಡ ಸರ್ಕಾರ’ ಆಗಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಹೇಳಿದರು.

ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಘಟಕದ ವತಿಯಿಂದ ಬೀದರ್‌ ನಗರದ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಶುಕ್ರವಾರ ಆಯೋಜಿಸಿದ್ದ ಕನ್ನಡ ದೀಕ್ಷೆ ಪ್ರತಿಜ್ಞೆ ಸ್ವೀಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ʼಕನ್ನಡಕ್ಕಾಗಿ ಎತ್ತುವ ಕೈಗಳಿಗೆ ಯಾವ ಕಾರಣಕ್ಕೂ ಕೊಳ ಹಾಕಬಾರದು ಎಂದು ಆಗ್ರಹಿಸಿದರು. ಕರ್ನಾಟಕದಲ್ಲಿ ಕನ್ನಡ ನೆಲ, ಜಲ ಉಳಿದಿದ್ದರೆ, ಕನ್ನಡ ಉಸಿರಾಡುತ್ತಿದ್ದರೆ ಅದು ಕನ್ನಡ ಪರ ಹೋರಾಟಗಾರರಿಂದಲೇ ಹೊರತು ಸರ್ಕಾರದಿಂದಲ್ಲ. ಕನ್ನಡ ಹೋರಾಟಗಾರರು ಯಾವುದೇ ಕೊಲೆ, ಸುಲಿಗೆ ಮಾಡಿದವರಲ್ಲ. ಆದರೂ, ಅವರ ಮೇಲೆ ನೂರಾರು ಪ್ರಕರಣಗಳನ್ನು ದಾಖಲಿಸಲಾಗಿದೆʼ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 11 08 at 7.36.51 AM

ʼಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗುವ ಮೊದಲು, ಆದ ನಂತರವೂ ಕನ್ನಡ ಹೋರಾಟಗಾರ ಮೇಲಿನ ಪ್ರಕರಣ ಹಿಂಪಡೆಯುವುದಾಗಿ ಅನೇಕ ಬಾರಿ ಭರವಸೆ ನೀಡಿದ್ದರು. ಆದರೆ, ಈವರೆಗೂ ಅದನ್ನು ಈಡೇರಿಸಿಲ್ಲ. ಮತ್ತಷ್ಟು ಪ್ರಕರಣಗಳನ್ನು ದಾಖಲು ಮಾಡಲಾಗಿದೆ. ಕರ್ನಾಟಕದಲ್ಲಿ ನಾಮಫಲಕಗಳಲ್ಲಿ ಶೇ 60ರಷ್ಟು ಭಾಗದಲ್ಲಿ ಕನ್ನಡ ಬಳಸಬೇಕೆಂಬ ಕಾಯ್ದೆ ರಚನೆಯಾಗಲು ಕಾರಣವಾದದ್ದು ವೇದಿಕೆ ವಿನಃ ಕಾಂಗ್ರೆಸ್, ಬಿಜೆಪಿ ಅಥವಾ ಜೆಡಿಎಸ್ ಸರ್ಕಾರಗಳು ಅಲ್ಲ. ಇದಕ್ಕಾಗಿ ನಡೆಸಿದ ಹೋರಾಟದ ಕಾರಣ ನಾನು 16 ದಿನ ಜೈಲು ವಾಸ ಅನುಭವಿಸಿದೆʼ ಎಂದು ಸ್ಮರಿಸಿದರು.

ʼರಾಷ್ಟ್ರಭಾಷೆ ಅಲ್ಲದ ಹಿಂದಿಯನ್ನು ಕನ್ನಡಿಗರ ಮೇಲೆ ಬಲವಂತವಾಗಿ ಹೇರಲಾಗುತ್ತಿದೆ. ಅದರಿಂದ ಕನ್ನಡಿಗರಿಗೆ ಏನೂ ಉಪಯೋಗ ಇಲ್ಲ. ಕನ್ನಡ-ಇಂಗ್ಲಿಷ್ ಅಷ್ಟೇ ಸಾಕು. ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲು ಕಲ್ಪಿಸುವ ಡಾ. ಸರೋಜಿನಿ ಮಹಿಷಿ ವರದಿ ಇನ್ನೂ ಜಾರಿಯಾಗಿಲ್ಲ. ವೇದಿಕೆ ಹೋರಾಟದ ಪರಿಣಾಮ ವರದಿ ಜಾರಿಗೆ ಮುಂದಾಗಿದ್ದ ಸರ್ಕಾರ ಕೆಲ ಐಟಿ ಕಂಪನಿಗಳ ವಿರೋಧದಿಂದ ಹಿಂದಡಿ ಇಟ್ಟಿತ್ತುʼ ಎಂದು ಅಸಮಾಧಾನ ಹೊರ ಹಾಕಿದರು.

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಮಾತನಾಡಿ, ಮುಖ್ಯಮಂತ್ರಿ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ. ಕಾನೂನು ತೊಡಕುಗಳಿಂದ ಕನ್ನಡ ಹೋರಾಟಗಾರರ ಮೇಲಿನ ಪ್ರಕರಣ ಹಿಂಪಡೆಯಲು ವಿಳಂಬ ಆಗಿದೆ. ರಾಜ್ಯ ಸರ್ಕಾರ ಪ್ರಕರಣಗಳನ್ನು ಹಿಂತೆಗೆದುಕೊಳ್ಳುವುದು ನಿಶ್ಚಿತ. ಕರ್ನಾಟಕದ ನೆಲ, ಜಲ, ಭಾಷೆ ಹಾಗೂ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಬದ್ಧವಾಗಿದೆ’ ಎಂದು ತಿಳಿಸಿದರು.

ಅನ್ಯಭಾಷೆ ನಾಮಫಲಕ ತೆರವಿಗೆ ಗಡವು:

ನ.20ರ ನಂತರ ಜಿಲ್ಲೆಯಲ್ಲಿ ನಿಯಮಾನುಸಾರ ಶೇ 60ರಷ್ಟು ಭಾಗದಲ್ಲಿ ಕನ್ನಡ ಬಳಸದ ಅನ್ಯ ಭಾಷೆ ನಾಮಫಲಕಗಳನ್ನು ಪುಡಿಗೊಳಿಸಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಸೋಮನಾಥ ಮುಧೋಳ ಎಚ್ಚರಿಕೆ ನೀಡಿದರು.

ಕನ್ನಡ ದೀಕ್ಷೆ ಪ್ರತಿಜ್ಞೆ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ʼವೇದಿಕೆಯ ಕಾರ್ಯಕರ್ತರು ಇದನ್ನು ನಿರ್ಧರಿಸಿಯಾಗಿದೆ. ಎಷ್ಟೇ ಪ್ರಕರಣ ದಾಖಲಿಸಿದರೂ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಜಿಲ್ಲೆಯಲ್ಲಿ ನಾಮಫಲಕ ವಿಷಯದಲ್ಲಿ ಆಡಳಿತ ನಿಷ್ಕಾಳಜಿ ತೋರುತ್ತಿದೆ. ವೇದಿಕೆ ಕನ್ನಡ ರಕ್ಷಣೆಗೆ ಹೋರಾಟ ನಡೆಸಲಿದೆʼ ಎಂದರು.

WhatsApp Image 2025 11 08 at 7.35.24 AM

‘ಕನ್ನಡ ನಾಮಫಲಕಕ್ಕಾಗಿ ಟಿ.ಎ.ನಾರಾಯಣಗೌಡರು ಸೆರೆವಾಸ ಅನುಭವಿಸಿದ್ದನ್ನು ಕನ್ನಡಿಗರು ಮರೆಯಲು ಸಾಧ್ಯವಿಲ್ಲ.
ಮುಂದಿನ ವರ್ಷದ ನವೆಂಬರ್ ಒಳಗೆ ಜಿಲ್ಲೆಯ ಪ್ರತಿ ಗ್ರಾಮಗಳಲ್ಲಿ ವೇದಿಕೆಯ ಗ್ರಾಮ ಘಟಕ ರಚಿಸಿ, ನಾರಾಯಣಗೌಡರ ಅಧ್ಯಕ್ಷತೆಯಲ್ಲಿ ಬೀದರ್‌ನಲ್ಲಿ ಗಡಿ ಕನ್ನಡಿಗರ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗುವುದು’ ಎಂದು ಹೇಳಿದರು.

ಸಮಾರಂಭದಲ್ಲಿ ಜಿಲ್ಲೆಯ ಯುವಕರು ಅಪಾರ ಸಂಖ್ಯೆಯಲ್ಲಿ ಕನ್ನಡ ದೀಕ್ಷೆ ಪಡೆದರು. ವೇದಿಕೆಯ ರಾಜ್ಯ ಅಧ್ಯಕ್ಷ ಟಿ.ಎ. ನಾರಾಯಣಗೌಡರು ಪ್ರತಿಜ್ಞೆ ವಿಧಿ ಬೋಧಿಸಿದರು. ಕನ್ನಡ ತಾಯಿ ಭುವನೇಶ್ವರಿಗೆ ಜಯವಾಗಲಿ ಎಂಬ ಘೋಷಣೆ ಮೊಳಗಿದವು.

ಅದ್ಧೂರಿ ಮೆರವಣಿಗೆ :

ನಗರದ ಅಂಬೇಡ್ಕರ್ ವೃತ್ತದಿಂದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದ ವರೆಗೆ ಅಲಂಕೃತ ತೆರೆದ ವಾಹನದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಅಧ್ಯಕ್ಷ ಟಿ.ಎ. ನಾರಾಯಣಗೌಡರ ಮೆರವಣಿಗೆ ನಡೆಯಿತು.

ಮೆರವಣಿಗೆ ಮುಂಭಾಗದಲ್ಲಿ ಕನ್ನಡ ರಥ, ತೆರೆದ ವಾಹನದಲ್ಲಿ ನಾರಾಯಣಗೌಡ, ಸೋಮನಾಥ ಮುಧೋಳ, ಖಾದರ್ ಪಾಶ ಇದ್ದರು. ಕಾರ್ಯಕರ್ತರು ಕೈಯಲ್ಲಿ ಬೃಹತ್ ಕನ್ನಡ ಧ್ವಜಗಳನ್ನು ಹಿಡಿದು ಸಾಗಿದರು. ಕನ್ನಡ ತಾಯಿ ಭುವನೇಶ್ವರಿಗೆ ಜಯವಾಗಲಿ ಎಂಬ ಘೋಷಣೆ ಹಾಕಿದರು.

WhatsApp Image 2025 11 08 at 7.28.55 AM

ಡೊಳ್ಳು ಕುಣಿತ, ಮುಧೋಳದ ಕಾಶಿ ವಿಶ್ವನಾಥ ಮಹಿಳಾ ಕಲಾ ತಂಡ, ರಾಮ-ಲಕ್ಷö್ಮಣ ತಂಡದ ಕೋಲಾಟ, ಲಂಬಾಣಿ ನೃತ್ಯ ಮೆರವಣಿಗೆಗೆ ವಿಶೇಷ ಕಳೆ ನೀಡಿದವು. ಡಿಜೆದಲ್ಲಿ ಮೊಳಗಿದ ಕ.ರ.ವೇ. ರಾಜ್ಯ ಅಧ್ಯಕ್ಷ ಟಿ.ಎ. ನಾರಾಯಣಗೌಡರು ರಚಿಸಿದ ‘ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ…’, ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು…’, ‘ಅವ್ವ ಕಣೋ ಕನ್ನಡ…’ ಮೊದಲಾದ ಗೀತೆಗಳ ತಾಳಕ್ಕೆ ತಕ್ಕಂತೆ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಹಾಗೂ ಕನ್ನಡಾಭಿಮಾನಿಗಳು ಹೆಜ್ಜೆ ಹಾಕಿ ಸಂಭ್ರಮಿಸಿದರು.

ಸಾನಿಧ್ಯ ವಹಿಸಿದ್ದ ಬಸವಕಲ್ಯಾಣದ ಅನುಭವ ಮಂಟಪದ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು, ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಧನ್ನೂರ, ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಸೋಮನಾಥ ಮುಧೋಳ ಮಾತನಾಡಿದರು.

ಇದನ್ನೂ ಓದಿ : ಬೀದರ್‌ | ಪಿಡಿಒ ಹುದ್ದೆಗೆ ಪ್ರೊಬೇಷನರಿ ಐಎಎಸ್‌ ಅಧಿಕಾರಿ ರಮ್ಯಾ ನಿಯೋಜನೆ

ಏಕತಾ ಫೌಂಡೇಷನ್ ಅಧ್ಯಕ್ಷ ರವೀಂದ್ರ ಸ್ವಾಮಿ, ವೇದಿಕೆಯ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯ ಪ್ರಧಾನ ಸಂಚಾಲಕ ಸಚಿನ್ ಗಾಣಗೇರ್, ರಾಜ್ಯ ಘಟಕದ ವೀರಭದ್ರಪ್ಪ, ವಿನೋದ್, ಸಹನಾ ಶೇಖರ್, ಜಿಲ್ಲಾ ಘಟಕದ ಗೌರವಾಧ್ಯಕ್ಷ ಖಾದರ್ ಪಾಷಾ, ಉಪಾಧ್ಯಕ್ಷ ಸೋಮಶೇಖರ ಸಜ್ಜನ್, ಸಂಘಟನಾ ಕಾರ್ಯದರ್ಶಿ ವಿನಾಯಕ ರೆಡ್ಡಿ, ಬೀದರ್ ತಾಲ್ಲೂಕು ಘಟಕದ ಅಧ್ಯಕ್ಷ ವೀರಶೆಟ್ಟಿ ಗೌಸಪುರ, ಔರಾದ್ ತಾಲ್ಲೂಕು ಘಟಕದ ಅಧ್ಯಕ್ಷ ಅನಿಲ್ ಹೇಡೆ, ಕಮಲನಗರ ತಾಲ್ಲೂಕು ಘಟಕದ ಅಧ್ಯಕ್ಷ ಮಂಜುನಾಥ ಸ್ವಾಮಿ, ಭಾಲ್ಕಿ ತಾಲ್ಲೂಕು ಘಟಕದ ಅಧ್ಯಕ್ಷ ಬಂಡೆಪ್ಪ ಕರಸಣ್ಣ, ಹುಮನಾಬಾದ್ ತಾಲ್ಲೂಕು ಘಟಕದ ಅಧ್ಯಕ್ಷ ವೀರೇಶ ರೆಡ್ಡಿ ಬೋತಗಿಕರ್, ಬಸವಕಲ್ಯಾಣ ತಾಲ್ಲೂಕು ಘಟಕದ ಅಧ್ಯಕ್ಷ ಗಣೇಶ ಸತಾಣೆ, ಪ್ರಮುಖರಾದ ಮಲ್ಲಿಕಾರ್ಜುನ ಸಿಕೇನಪುರೆ, ಶಿವರುದ್ರ ತೀರ್ಥ, ಮಹೇಶ ಕಾಪಸೆ, ತುಕಾರಾಮ ಜೈರಾಮ ಮತ್ತಿತರರು ಇದ್ದರು. ವೇದಿಕೆಯ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ವಿಶ್ವನಾಥ ಗೌಡ ಸ್ವಾಗತಿಸಿದರು. ವೇದಿಕೆ ಕಾರ್ಯಕರ್ತರು ಹಾಗೂ ಕನ್ನಡಿಗರು ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...