ಬೀದರ್‌ | ಮನೆ-ಮನೆಗೆ ಅಂಬೇಡ್ಕರ್ ಅಭಿಯಾನ ವೈಚಾರಿಕ ಪ್ರಜ್ಞೆ ಮೂಡಿಸಲಿ : ಭಂತೆ ವರಜ್ಯೋತಿ

Date:

ಬೀದರ್ ನಗರದ ಡಾ.ಅಂಬೇಡ್ಕರ್ ವೃತ್ತದಲ್ಲಿ ನಡೆದ ಬಾಬಾ ಸಾಹೇಬ್ ಅಂಬೇಡ್ಕರ್‌ ‌ಅವರ ಪರಿನಿಬ್ಬಾಣ ದಿನದಂದು ಬುದ್ಧ ಬೆಳಕು ಸಾಮಾಜಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಆಯೋಜಿಸಿದ ಮನೆ-ಮನೆಗೆ ಅಂಬೇಡ್ಕರ್ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ಭಂತೆ ವರಜ್ಯೋತಿ ಅವರು ಮಾತನಾಡಿ, ʼಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಪರಿನಿರ್ವಾಣ ದಿನದಿಂದ ಎಪ್ರಿಲ್‌ 14ರವರೆಗೆ ನಡೆಯುವ ಮನೆ-ಮನೆಗೆ ಅಂಬೇಡ್ಕರ್‌ ಅಭಿಯಾನ ನಡೆಯಲಿದೆ. ಈ ಅಭಿಯಾನವು ಜನರಿಗೆ ರಾಜಕೀಯ, ಸಾಮಾಜಿಕ, ಶೈಕ್ಷಣಿಕ ಹಾಗೂ ವೈಚಾರಿಕ ಪ್ರಜ್ಞೆ ಮೂಡಿಸಲಿ. ಬುದ್ಧ ಭಾರತ ಸಮೃದ್ಧ ಭಾರತ ಇಂದು ಮನುವಾದಿಗಳಿಂದ ದ್ವೇಷ ಅಸೂಯೆ, ಅಂಧಕಾರ, ಅವೈಜ್ಞಾನಿಕತೆಯಿಂದ ನಾಶವಾಗುತ್ತಿದೆʼ ಎಂದು ಕಳವಳ ವ್ಯಕ್ತಪಡಿಸಿದರು.

ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಅಳಿದು ಹೋಗಿದ 2,500 ವರ್ಷಗಳ ಬುದ್ಧ ತತ್ವದ ಗತವೈಭವ ಅಧ್ಯಯನ ನಡೆಸಿ ಸಂವಿಧಾನದ ಮೂಲಕ ಮರಳಿ ತಂದಿದ್ದಾರೆ. ಎಲ್ಲ ಜಾತಿ-ಧರ್ಮದವರಿಗೂ ಸಂವಿಧಾನದ ಮೂಲಕ ಸಮಾನ ಅವಕಾಶಗಳನ್ನು ನೀಡಲಾಗಿದೆ. ದೇಶದ ಪ್ರತಿಯೊಬ್ಬರೂ ಶೈಕ್ಷಣಿಕವಾಗಿ, ಧಾರ್ಮಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಅಭಿವೃದ್ಧಿ ಹೊಂದುತ್ತಿದ್ದಾರೆ. ಇದನ್ನು ಸಹಿಸದವರು ಅಂಬೇಡ್ಕರ್ ಹಾಗೂ ಸಂವಿಧಾನದ ಬಗ್ಗೆ ಅಪಮಾನಕಾರಿಯಾದ ಮಾತನಾಡುತ್ತಿದ್ದಾರೆ. ಮನೆ-ಮನೆಗೆ ಅಂಬೇಡ್ಕರ್ ಅಭಿಯಾನವು ಜನರಿಗೆ ಸಂವಿಧಾನ ಜಾಗೃತಿ ಜೊತೆಗೆ ಬಾಬಾ ಸಾಹೇಬರ ಆದರ್ಶಗಳನ್ನು ಮುಟ್ಟಿಸುವ ಕೆಲಸ ಆಗಲಿʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮನೆ-ಮನೆಗೆ ಅಂಬೇಡ್ಕರ್ ಅಭಿಯಾನ ಅನುಷ್ಠಾನ ಸಮಿತಿ ಅಧ್ಯಕ್ಷ ಡಾ.ಕಾಶಿನಾಥ ಚೆಲ್ವಾ ಮಾತನಾಡಿ, ʼ ಇಂದು ಯುವ ಜನಾಂಗ ದುಶ್ಚಟಕ್ಕೆ ಬಲಿಯಾಗುತ್ತಿದೆ. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ, ಆರೋಗ್ಯ, ಶಿಕ್ಷಣದ ಮಹತ್ವ ಕುರಿತು ಜಾಗೃತಿ ಮಾಡುವುದು ತುಂಬಾ ಅವಶ್ಯಕತೆವಿದೆ. ಹಳ್ಳಿಯಲ್ಲಿರುವ ಅಂಬೇಡ್ಕರ್ ಭವನಗಳನ್ನು ಗ್ರಂಥಾಲಯಗಳಾಗಿ ಪರಿವರ್ತಿಸುವ ಮಹತ್ವದ ಜವಾಬ್ದಾರಿ ಈ ಅಭಿಯಾನ ಹೊಂದಿದೆ. ಅಭಿಯಾನಕ್ಕೆ ಎಲ್ಲಾ ಸಂಘಟನೆಗಳು, ಬುದ್ಧ, ಬಸವ, ಅಂಬೇಡ್ಕರ್ ಅವರ ಅನುಯಾಯಿಗಳು, ಬೆಂಬಲಿಸಿ ಸಹಕರಿಸಬೇಕುʼ ಎಂದು ಕೋರಿದರು.

ಇದನ್ನೂ ಓದಿ : ತೆಲಂಗಾಣ | ದೇವರ ಹೆಸರಲ್ಲಿ ನಡೆಯುವ ಪ್ರಾಣಿ ಬಲಿ ನಿಲ್ಲಲಿ : ಶಾಂತಮಯ ಸ್ವಾಮೀಜಿ

ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಅಮೃತರಾವ ಚಿಮಕೋಡೆ, ಅಭಿಯಾನದ ಸಂಚಾಲಕ ಮಹೇಶ ಗೋರನಾಳಕರ್ ಸೇರಿದಂತೆ ಪ್ರಮುಖರಾದ ರಮೇಶ ಡಾಕುಳಗಿ, ಅನೀಲಕುಮಾರ ಬೆಲ್ದಾರ್, ಬಾಬುರಾವ ಪಾಸ್ವಾನ್, ದಶರಥ ಗುರು,‌ ಶ್ರೀಪತರಾವ ದೀನೆ, ಶಿವಕುಮಾರ ನೀಲಿಕಟ್ಟಿ, ರಮೇಶ ಸಾಗರ, ಶರಣು ಫುಲೆ, ಪ್ರಕಾಶ ರಾವಣ, ಹರ್ಷಿತ ದಾಂಡೆಕರ್, ಅಂಬಾದಾಸ ಗಾಯಕವಾಡ, ಉಲಾಸಿನಿ ಮುದಾಳೆ, ಲುಂಬಿಣಿ ಪರಂಜಪೆ, ಸಂಗೀತಾ ಕಾಂಬಳೆ, ಪ್ರದೀಪ್ ನಾಟೆಕರ್, ಸಂದೀಪ್ ಕಾಂಟೆ, ಸುನೀಲ್ ಸಂಗಮ, ರಮೇಶ ಪಾಸ್ವಾನ್‌ ಮತ್ತಿತರರಿ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...