ಬೀದರ್ | ಆಧುನಿಕತೆ ಸೃಷ್ಟಿಸಿದ ಮೌಢ್ಯಗಳಿಗೆ ಯುವ ಸಮೂಹ ಬಲಿಯಾಗದಿರಲಿ : ಭೀಮಾಶಂಕರ ಬಿರಾದರ್

Date:

ಮೊಬೈಲ್ ಗೇಮಿಂಗ್‌ನಂಥ ಆಧುನಿಕತೆ ಸೃಷ್ಟಿಸಿದ ಮೌಢ್ಯಗಳಿಗೆ ಯುವ ಸಮೂಹ ಬಲಿಯಾಗದಿರಲಿ. ನಮ್ಮ ಓದು ಅಧ್ಯಯನಗಳು ನಮ್ಮೊಳಗೆ ಸೂಕ್ಷ್ಮತೆ ಬೆಳೆಸುತ್ತವೆ. ಆತ್ಮವಿಶ್ವಾಸ ಮೂಡಿಸುತ್ತವೆ. ಸ್ವವಿಮರ್ಶೆ ಹಾಗೂ ಲೋಕ ವಿಮರ್ಶೆಯ ಗುಣ ಸೃಷ್ಟಿಸುತ್ತವೆ ಎಂದು ಶ್ರೀ ಬಸವೇಶ್ವರ ಪದವಿ ಕಾಲೇಜು ಅಧ್ಯಾಪಕ ಡಾ.ಭೀಮಾಶಂಕರ ಬಿರಾದಾರ್ ಹೇಳಿದರು.

ಬೀದರ್ ವಿಶ್ವವಿದ್ಯಾಲಯದ ಸಹಯೋಗದಲ್ಲಿ ದೊಡ್ಡಪ್ಪ ಅಪ್ಪ ಬಿಸಿಎ ಕಾಲೇಜು ವತಿಯಿಂದ ಎಸ್ಎಸ್‌ಕೆಬಿ ಕಾಲೇಜಿನಲ್ಲಿ ಸೋಮವಾರ ನಡೆದ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರದಲ್ಲಿ ಭಾರತ ನಿರ್ಮಾಣದಲ್ಲಿ ಯುವಕರ ಪಾತ್ರ ಕುರಿತು ಮಾತನಾಡಿದರು .

‘ಸಾಮಾಜಿಕ ಜಾಲತಾಣ ಗೀಳು ರೋಗ, ಖಿನ್ನತೆ ಉಂಟುಮಾಡಿ ಆತ್ಮಹತ್ಯೆಗೆ ಕಾರಣವಾಗಿವೆ. ಯುವ ಸಮೂಹ ನಿತ್ಯ ಕ್ರೀಯಾಶೀಲರಾಗಿರುವ ದಾರಿ ಕಂಡುಕೊಳ್ಳಬೇಕು. ಲೋಕದ ಕ್ರೀಯಾಶೀಲತೆ ಸೃಜನಶೀಲ ಕೆಲಸಗಳ ಕಟ್ಟುವಿಕೆಯಲ್ಲಿ ಅಡಗಿದೆ. ಏಕಾಂತವೂ ಲೋಕಾಂತದ ಅರಿವಿಗೆ ದಾರಿಯಾಗಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಬುದ್ಧ, ವಚನಕಾರರು, ಸಾಹಿತಿಗಳು ಈ ದೇಶವನ್ನು ವೈಚಾರಿಕವಾಗಿ ಕಟ್ಟಿದ್ದಾರೆ. ಗಾಂಧಿ, ವಿವೇಕಾನಂದರು, ಅಂಬೇಡ್ಕರ್, ಲೋಹಿಯಾ ಮೊದಲಾದವರು ಜಾತ್ಯತೀತ ಮತ್ತು ಪ್ರಜಾಪ್ರಭುತ್ವದ ನಾಡು ಕಟ್ಟಿದ್ದಾರೆ. ಹಲವಾರು ವಿಜ್ಞಾನಿಗಳು ವೈಜ್ಞಾನಿಕವಾಗಿ ವಿಶ್ವವನ್ನು ಕಟ್ಟಿಕೊಟ್ಟಿದ್ದಾರೆ. ಈ ಎಲ್ಲವನ್ನೂ ಅರಿಯುವ ವ್ಯವಧಾನ ಮತ್ತು ಸಹನೆ ಯುವಶಕ್ತಿಯಲ್ಲಿ ಇರಬೇಕು’ ಎಂದರು.

ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಕೊರಾಳೆ ಮಾತನಾಡಿ, ‘ಆಡಳಿತಾತ್ಮಕ ಹಾಗೂ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಯುವ ಸಮುದಾಯ ಸಿದ್ಧತೆ ನಡೆಸಬೇಕು. ಯುಪಿಎಸ್ಸಿ ಹಾಗೂ ಕೆಎಎಸ್ ಪರೀಕ್ಷೆ ಹೆಚ್ಚಾಗಿ ಬರೆಯುವುದು ಬಿಎ, ಬಿಎಸ್ಸಿ, ಬಿಕಾಂ ಪದವಿ ವಿದ್ಯಾರ್ಥಿಗಳು. ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಕೀಳರಿಮೆ ಬಿಟ್ಟರೆ ಯಶಸ್ಸು ಸಾಧ್ಯ’ ಎಂದರು.

ಅಧ್ಯಕ್ಷತೆ ವಹಿಸಿದ್ದ ಕಲ್ಯಾಣಪ್ಪಾ ನಾವದಗಿ ಮಾತನಾಡಿ, ‘ತಂತ್ರಜ್ಞಾನದ ದುರುಪಯೋಗ ದೇಶಕ್ಕೆ ಅಪಾಯ ತರುತ್ತದೆ. ಅದರ ಸದ್ಬಳಕೆಗೆ ಯುವ ಸಮುದಾಯ ಕಾಳಜಿ ತೋರಬೇಕು. ಸಮಾಜಕ್ಕೆ ಒಳ್ಳೆಯದನ್ನು ಮಾಡುವ ಮೂಲಕ ಯುವಕರು ದೇಶದ ಭವಿಷ್ಯ ರೂಪಿಸಬೇಕು’ ಎಂದರು.

ಎಸ್ಎಸ್ ಕೆಬಿ ಕಾಲೇಜು ಪ್ರಾಚಾರ್ಯ ಡಾ. ಬಸವರಾಜ ಎವಲೆ, ದೊಡ್ಡಪ್ಪ ಅಪ್ಪ ಬಿಸಿಎ ಕಾಲೇಜು ಪ್ರಾಚಾರ್ಯ ಲೋಕೇಶ ಮನ್ನಾಳೆ
ಎನ್ನೆಸ್ಸೆಸ್ ಅಧಿಕಾರಿಗಳಾದ ಡಾ.ಸುರೇಶ ಎಚ್. ಆರ್, ಮಹಾದೇವ ದೇಗಾಂವ್, ಶಾಂತಕುಮಾರ ಭೂರೆ, ಪ್ರಾಧ್ಯಾಪಕರಾದ ಪ್ರೊ. ವಿಠೋಬಾ ಡೊಣ್ಣೇಗೌಡರು, ಡಾ.ರಮೇಶ ಕೆ. ಬಿ, ಭೀಮಾಶಂಕರ ಪೂಜಾರಿ, ವಿನಾಯಕ ಮುಳ್ಳೂರು, ಶಿಲ್ಪಾರಾಣಿ ಮಠಪತಿ ಸೇರಿದಂತೆ ಹಲವರಿದ್ದರು.‌

ಈ ಸುದ್ದಿ ಓದಿದ್ದೀರಾ? ಬೀದರ್‌ | ಸ್ವಾವಲಂಬಿ ಬದುಕಿಗೆ ಮನರೇಗಾ ಬಲ: ಬ್ಯಾಂಕ್ ಮ್ಯಾನೇಜರ್ ಹುದ್ದೆ ತೊರೆದು ಕುರಿ ಸಾಕಾಣಿಕೆಯತ್ತ ಪದವೀಧರ

ಅಶ್ವಿನಿ ನಾಗರಾಳೆ ಅತಿಥಿ ಪರಿಚಯಿಸಿದರು. ಪ್ರೀತಿ ಪವಾರ್ ಸ್ವಾಗತಿಸಿದರು. ಜ್ಯೋತಿ ಪೂಜಾರಿ ನಿರೂಪಿಸಿದರು. ರಾಮಲಿಂಗ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...