ಬೀದರ್‌ | ಲೇಖಕರು ಸೃಜನಶೀಲ ಸಾಹಿತ್ಯ ರಚನೆಗೆ ಮುಂದಾಗಲಿ : ಗುರುಬಸವ ಪಟ್ಟದ್ದೇವರು

Date:

ಯುವ ಲೇಖಕರು ತಮ್ಮ ಪ್ರತಿಭೆ ಬಳಸಿಕೊಂಡು ಆಸಕ್ತಿಯ ಸೃಜನಶೀಲ ಸಾಹಿತ್ಯ ರಚನೆಗೆ ಮುಂದಾಗಬೇಕು ಎಂದು ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಹೇಳಿದರು.

ಕಮಲನಗರ ಪಟ್ಟಣದ ಡಾ.ಚನ್ನಬಸವ ಪಟ್ಟದ್ದೇವರು ಪ್ರೌಢ ಶಾಲೆಯಲ್ಲಿ ಸೋಮವಾರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಆಯೋಜಿಸಿದ್ದ ಸಾಹಿತಿ ಸಂಗಮೇಶ್ವರ ಮುರ್ಕೆ ಬರೆದ ʼಬೀದರ ಜಿಲ್ಲೆಯ ಸಂಸ್ಕೃತಿ ಪರಂಪರೆʼ ಕೃತಿ ಲೋಕಾರ್ಪಣೆ, ಪತ್ರಿಕಾ ಹಾಗೂ ವೈದ್ಯ ದಿನಾಚರಣೆ ಕಾರ್ಯಕ್ರಮದ ಸಾನಿಧ್ಯ ವಹಿಸಿ ಅವರು ಮಾತನಾಡಿದರು.

ʼಯುವ ಸಾಹಿತಿಗಳು ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡರೆ ಸಾಹಿತ್ಯ ಕ್ಷೇತ್ರ ಸಮೃದ್ಧವಾಗಿ ಬೆಳೆಯಲು ಸಾಧ್ಯ. ಬರಹಗಾರರು ಮಾನವೀಯ ಕಳಕಳಿಯೊಂದಿಗೆ ಸೂಕ್ಷ್ಮ ಸಂವೇದನಾಶೀಲರಾಗಿ ಸಾಹಿತ್ಯ ರಚಿಸಿ ವರ್ತಮಾನದ ವಾರಸುದಾರರಿಗೆ ಮಾರ್ಗದರ್ಶನ ಮಾಡುವಂತಾಗಬೇಕು. ಎಲ್ಲ ಕೃತಿಗಳ ಆಶಯ ಸತ್ಯದ ಅನ್ವೇಷಣೆಯಾದರೆ ಮಾತ್ರ ವೈಚಾರಿಕ, ಸಾಮಾಜಿಕ ಮೌಲ್ಯಗಳ ಚಿಂತನೆ ಬೆಳೆಸಲು ಸಾಧ್ಯ. ಉತ್ತಮ ಸಾಹಿತ್ಯ ಕೃತಿ ರಚನೆಗೆ ಅನುಭವ ಬೇಕು. ಲೇಖಕರು ಗಟ್ಟಿ ಸಾಹಿತ್ಯ ರಚನೆಗೆ ಹೆಚ್ಚು ಒತ್ತು ನೀಡಬೇಕುʼ ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಾಲೂಕು ಪಂಚಾಯಿತಿ ಇಒ ಹಣಮಂತರಾಯ ಕೌಟಗೆ ಮಾತನಾಡಿ, ʼಆರೋಗ್ಯಕರ ಪ್ರಜಾಪ್ರಭುತ್ವಕ್ಕೆ ಮಾಧ್ಯಮ ರಂಗ ಅಗತ್ಯ. ಸಮಾಜದ ಪರಿಶುದ್ಧತೆಯಲ್ಲಿ ಮಾಧ್ಯಮ ಕ್ಷೇತ್ರದ ಪಾತ್ರ ಮಹತ್ವದ್ದಾಗಿದೆ. ಸಕರಾತ್ಮಕ ವಿಚಾರಗಳಿಗೆ ಪ್ರಾಮುಖ್ಯ ನೀಡುತ್ತಿರುವ ಪತ್ರಿಕೆಗಳಿಂದ ಸಶಕ್ತ ಭಾರತ ನಿರ್ಮಾಣ ಸಾಧ್ಯʼ ಎಂದರು.

28kmr1
ಕಾರ್ಯಕ್ರಮದಲ್ಲಿ ವೈದರು, ಪತ್ರಕರ್ತರಿಗೆ ವಿಶೇಷವಾಗಿ ಸನ್ಮಾನಿಸಲಾಯಿತು.

ಅಧ್ಯಕ್ಷತೆ ವಹಿಸಿದ್ದ ಕಸಾಪ ಜಿಲ್ಲಾಧ್ಯಕ್ಷ ಸುರೇಶ ಚನಶೆಟ್ಟಿ ಮಾತನಾಡಿ, ʼಗಡಿ ಭಾಗದಲ್ಲಿ ಕನ್ನಡ ನಾಡು-ನುಡಿ ಬೆಳವಣಿಗೆಗೆ
ಪತ್ರಕರ್ತರ ಸೇವೆ ಅನನ್ಯ. ಚನ್ನಬಸವ ಪಟ್ಟದ್ದೇವರು ಜನಿಸಿದ ನೆಲ ಕಮಲನಗರದಲ್ಲಿ ಕಸಾಪ ತಾಲೂಕು ಘಟಕ
ಕೈಗೊಳ್ಳುತ್ತಿರುವ ವಿವಿಧ ರಚನಾತ್ಮಕ ಕಾರ್ಯಗಳು ಇತರರಿಗೆ ಮಾದರಿಯಾಗಿದೆʼ ಎಂದರು.

ʼಸರ್ಕಾರ ಹಾಗೂ ಸಮಾಜದ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಜನರ ಧ್ವನಿಯನ್ನು ಆಡಳಿತ ವರ್ಗಕ್ಕೆ ಹಾಗೂ ಜನಪ್ರತಿನಿಧಿಗಳ ಕಿವಿಗೆ ತಲುಪಿಸುವ ಸಂದೇಶ ವಾಹಕ ಕೆಲಸ ಮಾಡುತ್ತಿದೆ. ಕೋವಿಡ್ ಸಂದಿಗ್ಧ ಸ್ಥಿತಿಯಲ್ಲಿ ಪತ್ರಕರ್ತರು ಹಾಗೂ ವೈದ್ಯರು, ಪೊಲೀಸರ ಜತೆಗೆ ಕೋವಿಡ್ ವಾರಿಯರ್ಸ್‌ ಗಳಾಗಿ ಪ್ರಾಣದ ಹಂಗು ತೊರೆದು ಕಾರ್ಯನಿರ್ವಹಿಸಿದ್ದು ಮರೆಯಲಾಗದುʼ ಎಂದು ತಿಳಿಸಿದರು.

ಹಿರಿಯ ಪತ್ರಕರ್ತರ ಡಾ.ಎಸ್.ಎಸ್.ಮೈನಾಳೆ ಕೃತಿ ಪರಿಚಯ ಮಾಡಿಕೊಟ್ಟರು. ಸಿಪಿಐ ಶ್ರೀಕಾಂತ ಅಲ್ಲಾಪುರ, ಸಾಹಿತಿ ಸಂಗಮೇಶ್ವರ ಮುರ್ಕೆ ಮಾತನಾಡಿದರು. ಮಹಾಲಿಂಗ ಸ್ವಾಮೀಜಿ ನೇತೃತ್ವ ವಹಿಸಿದ್ದರು. ತಹಸೀಲ್ದಾರ್ ಅಮಿತಕುಮಾರ ಕುಲಕರ್ಣಿ ಕಾರ್ಯಕ್ರಮ ಉದ್ಘಾಟಿಸಿದರು.

ಇದೇ ಸಂದರ್ಭದಲ್ಲಿ ಕಮಲನಗರ ತಾಲೂಕಿನ ಪತ್ರಕರ್ತರು ಹಾಗೂ ವೈದ್ಯರನ್ನು ವಿಶೇಷವಾಗಿ ಸನ್ಮಾನಿಸಲಾಯಿತು.

ಇದನ್ನೂ ಓದಿ : ಬೀದರ್ | ಮಕ್ಕಳ ನಾಪತ್ತೆ, ಅಪಹರಣ ಪ್ರಕರಣಗಳನ್ನು ನಿರ್ಲಕ್ಷಿಸಬೇಡಿ: ಎಸ್ಪಿ ಪ್ರದೀಪ ಗುಂಟಿ

ಗ್ರಾಪಂ ಅಧ್ಯಕ್ಷೆ ಸುಶೀಲಾ ಸಜ್ಜನ್, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಸುನೀಲ ಕಸ್ತೂರೆ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಬಸವರಾಜ ಪಾಟೀಲ್, ಆಡಳಿತ ವೈದ್ಯಾಧಿಕಾರಿ ಡಾ.ಶ್ರೀಮಂತ ಮಡಿವಾಳ ಸೇರಿದಂತೆ ಪ್ರಮುಖರಾದ ಶಿವಶಂಕರ ಟೋಕರೆ, ಪಂಡರಿ ಆಡೆ, ಡಾ.ಅಶೋಕುಮಾರ ಮಳಗೆ, ಚನ್ನಬಸವ ಘಾಳೆ, ಸತೀಶ ಜೀರ್ಗೆ, ಧನರಾಜ ಸೊಲ್ಲಾಪುರೆ, ನಾಗಯ್ಯ ಸ್ವಾಮಿ, ಶಿವಾನಂದ ವಡ್ಡೆ, ಅನೀಲಕುಮಾರ ದೇಶಮುಖ, ಜಗನ್ನಾಥ ಜೀರ್ಗೆ, ಧನರಾಜ ಭವರಾ, ಉಮೇಶ ಜೀರ್ಗೆ, ಸಂತೋಷ ಸುಲಾಕೆ, ಅವಿನಾಶ ಶಿವಣಕರ, ರಾಜಕುಮಾರ ಬಿರಾದಾರ, ಬಾಲಾಜಿ ಬಿರಾದಾರ ಇತರರಿದ್ದರು. ಕಸಾಪ ತಾಲೂಕು ಅಧ್ಯಕ್ಷ ಪ್ರಶಾಂತ ಮಠಪತಿ ಸ್ವಾಗತಿಸಿದರು. ಹಾವಗಿರಾವ ಮಠಪತಿ ನಿರೂಪಣೆ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...