ಬೀದರ್‌ | ದ್ವೇಷ, ಅಹಂಕಾರ ಮುಕ್ತ ಸಮಾಜ ನಿರ್ಮಿಸೋಣ : ಶರಣಬಸಪ್ಪ ಫುಲೆ

Date:

‘ದ್ವೇಷ ಮತ್ತು ಅಹಂಕಾರ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಪ್ರತಿಯೊಬ್ಬರೂ ಶ್ರಮ ವಹಿಸಬೇಕು ಎಂದು ಸಾಹಿತಿ ಶರಣಬಸಪ್ಪ ಫುಲೆ ಹೇಳಿದರು.

ಬೀದರ ನಗರದ ನೌಬಾದ್‌ನ ಶ್ರೀ ರಾಘವೇಂದ್ರ ಕಾಲೋನಿಯ ನಿವೇದಿತಾ ಹೂಗಾರ ಟ್ರೈನರ್ ಅಕಾಡೆಮಿ ಸಭಾಂಗಣದಲ್ಲಿ ಮಹಾತ್ಮ ಜ್ಯೋತಿಭಾ ಫುಲೆ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘ ಸಂಸ್ಥೆ ವತಿಯಿಂದ ಆಯೋಜಿಸಿದ ಧ್ಯಾನ ಹಾಗೂ ‘ಬುದ್ಧ ಮತ್ತು ಧಮ್ಮ’ ಕುರಿತ ವಿಚಾರ ಸಂಕಿರಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ʼಇಂದಿನ ಯುಗದಲ್ಲಿ ಜನರು ಸುಖ, ಶಾಂತಿ, ನೆಮ್ಮದಿ ಮತ್ತು ಆರೋಗ್ಯ ಕಳೆದುಕೊಂಡಿದ್ದಾರೆ. ಧ್ಯಾನ ಮತ್ತು ಧಮ್ಮದ ಮಾರ್ಗದಿಂದ ಇವುಗಳನ್ನು ಮರಳಿ ಪಡೆಯಬಹುದುʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾಹಿತಿ ಡಾ.ಕಾಶೀನಾಥ ಚಲ್ವಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ʼಬುದ್ಧ ಮತ್ತು ಆತನ ಧಮ್ಮʼ ಗ್ರಂಥದ ಮಹತ್ವವನ್ನು ಸಂಕ್ಷಿಪ್ತವಾಗಿ ವಿವರಿಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಹುಲಸೂರು ತಹಸೀಲ್ದಾರ್ ಶಿವಾನಂದ ಮೇತ್ರೆ, ಮಾಸ್ಟರ್ ಮೈಂಡ್ ಟ್ರೈನರ್ ಶ್ರೀದೇವಿ ಹೂಗಾರ ಅವರು ಮಾತನಾಡಿದರು.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಭಂತೆ ಜೀ ಅವರ ನೇತೃತ್ವದಲ್ಲಿ ನೆರವೇರಿಸಲಾಯಿತು. ಬಸವಕಲ್ಯಾಣದ ಶಿಕ್ಷಕಿ ಉಷಾ ಯಾದುರಾವ್ ಗಾಯಕವಾಡ್ ಹಾಗೂ ಕಲ್ಲಪ್ಪ ಕೈವಾರೆ ಅವರು ಉಪಸ್ಥಿತರಿದ್ದರು.

ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಭರತ್ ಕಾಂಬಳೆ, ಧನರಾಜ್ ಮುಸ್ತಪುರೆ, ಶಕ್ತಿಕಾಂತ್ ಭಾವಿದೊಡ್ಡಿ, ನಾಗಪ್ಪ ನಿಣ್ಣೆ, ಪ್ರದೀಪ ನಾಟೇಕರ್, ಪ್ರಕಾಶ್ ರಾವಣ, ಶಂಭುಲಿಂಗ ವಾಲ್ದೊಡ್ಡಿ, ರಾಜಕುಮಾರ ಜಾಂತಿಕರ ಹಾಗೂ ಪ್ರತಿಭಾ ಪುರಸ್ಕಾರವಾಗಿ ಪ್ರಸನ್ನ ಕುಮಾರಿ, ಪ್ರಕೃತಿ, ಅಶ್ವಿನಿ ಮತ್ತಿತರರ ವಿದ್ಯಾರ್ಥಿಗಳಿಗೆ ಗೌರವಿಸಲಾಯಿತು.

ಇದನ್ನೂ ಓದಿ : ಬೀದರ್‌ | 151 ಜೋಡಿಗಳ ಸರಳ ಸಾಮೂಹಿಕ ವಿವಾಹ

ಸಾಂಸ್ಕೃತಿಕ ಕಾರ್ಯಕ್ರಮವನ್ನು ಕಲಾವಿದರಾದ ಪ್ರೇಮಲತಾ ದೊಡ್ಡಿ ಹಾಗೂ ಜಗದೇವಿ ಫುಲೆ ನಡೆಸಿಕೊಟ್ಟರು. ರಾಜಕುಮಾರ ಕರುಣಾಸಾಗರ್ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...