ಬೀದರ್‌ | ವಚನಕಾರರ ಬದುಕು-ಬರಹ ಆದರ್ಶ : ಕಾವ್ಯಶ್ರೀ ಮಹಾಗಾಂವಕರ್

Date:

ಸಮಾಜಕ್ಕೆ ವಚನಕಾರರ ಬದುಕು-ಬರಹ ಆದರ್ಶವಾಗಿದೆ. ವಚನಗಳ ಮೂಲಕ ಲೋಕಕ್ಕೆ ಕರ್ಪೂರದ ಸುಂಗಧ ದ್ರವ್ಯ ಬೀರಿ ಮರೆಯಾದರು ಎಂದು ಡಾ.ಕಾವ್ಯಶ್ರೀ ಮಹಾಗಾಂವಕರ ನುಡಿದರು.

ವಚನಾಮೃತ ಕನ್ನಡ ಸಂಘ ಹಾಗೂ ಪ್ರೊ.ಬಿ.ಜಿ.ಮೂಲಿಮನಿ ಫೌಂಡೇಶನ್ ಸಹಯೋಗದಲ್ಲಿ ಗುರುವಾರ ಸಂಜೆ ಆಯೋಜಿಸಿದ ಶಿವಶರಣೆಯರಾದ ಅಕ್ಕಾನಾಗಮ್ಮ ಹಾಗೂ ಮುಕ್ತಾಯಕ್ಕ ಕುರಿತ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಾಹಿತಿ ಡಾ.ರಾಮಚಂದ್ರ ಗಣಾಪೂರ ಅವರು ಶರಣೆ ಅಕ್ಕನಾಗಮ್ಮನವರ ಕುರಿತು ಉಪನ್ಯಾಸ ನೀಡಿ, ʼಬಸವಣ್ಣವರ ಹಿರಿಯ ಸಹೋದರಿ ಅಕ್ಕನಾಗಮ್ಮ ಅವರು ಬರೆದ ಮೌಲಿಕವಾದ 15 ವಚನಗಳು ಲಭ್ಯವಾಗಿವೆ. ʼಬಸವಣ್ಣಪ್ರಿಯ ಚೆನ್ನಸಂಗಯ್ಯʼ ಎಂಬ ಕಾವ್ಯನಾಮದಿಂದ ಬರೆದ ವಚನಗಳು ವೈಚಾರಿಕ ಪ್ರಜ್ಞೆಗೆ ಸಾಕ್ಷಿಯಾಗಿವೆ. ಚೆನ್ನಬಸವಣ್ಣನವರಂತಹ ಮಗನನ್ನು ಹೆತ್ತ ಈ ತಾಯಿ ಮಗನಿಗೆ ಒಳ್ಳೆಯ ಸಂಸ್ಕಾರ ನೀಡಿ ಜ್ಞಾನದ ಖಣಿಯಾಗಿ ಬೆಳೆಸಿದರುʼ ಎಂದು ನುಡಿದರು.

ಶಿವಶರಣೆ ಮುಕ್ತಾಯಕ್ಕ ಕುರಿತು ಉಪನ್ಯಾಸ ನೀಡಿದ ಸೂರ್ಯಕಲಾ ಹೊಡಮನಿ ಮಾತನಾಡಿ, ʼಮುಕ್ತಾಯಕ್ಕ ಅವರು ʼಅಜಗಣ್ಣ ತಂದೆʼ ವಚನಾಂಕಿತ ಇಟ್ಟುಕೊಂಡು 36 ವಚನಗಳನ್ನು ರಚಿಸಿದ್ದಾರೆ. ಮುಕ್ತಾಯಕ್ಕ ಅವರು ʼಸುಮ್ಮನೇಕೆ ದಿನಕಳೆವಿರಿ, ಸುಮ್ಮನೇಕೆ ಹೊತ್ತುಗಳೆವಿರಿ? ಎಂಬ ವಚನದಲ್ಲಿ ʼಕಾಯಕ ತತ್ವʼ ಕುರಿತು ತಿಳಿಸಿದ್ದಾರೆʼ ಎಂದರು.

WhatsApp Image 2025 04 12 at 8.44.11 AM
ಸಾಹಿತಿ ಡಾ.ರಾಮಚಂದ್ರ ಗಣಾಪೂರ ಅವರು ಶರಣೆ ಅಕ್ಕನಾಗಮ್ಮನವರ ಕುರಿತು ಉಪನ್ಯಾಸ ನೀಡಿದರು.

ದಕ್ಷಿಣ ಕರಾವಳಿ ಕನ್ನಡ ಸಂಘದ ಅಧ್ಯಕ್ಷ ಕೆ.ಸತ್ಯಮೂರ್ತಿ ಮಾತನಾಡಿ, ʼಕನ್ನಡ ಭಾಷೆ, ಕನ್ನಡ ಸಾಹಿತ್ಯ, ವಚನ ಸಾಹಿತ್ಯ ಬೆಳವಣಿಗೆಗೆ ನಾವೆಲ್ಲರೂ ಇನ್ನೂ ಬಹಳಷ್ಟು ಕಾಳಜಿಯಿಂದ ಕೆಲಸ ಮಾಡಬೇಕಾಗಿದೆʼ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರೊ.ಸಿದ್ರಾಮಪ್ಪ ಮಾಸಿಮಾಡೆ ಮಾತನಾಡಿ, ʼಹನ್ನೆರಡನೇ ಶತಮಾನದಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ವಚನ ಚಳವಳಿ ನಡೆಸಿದ ವಚನಕಾರರ ಬದುಕು-ಬರಹ ಕುರಿತು ನಾವೆಲ್ಲರೂ ತಿಳಿದುಕೊಳ್ಳುವುದು ತುಂಬಾ ಅವಶ್ಯಕತೆ ಇದೆʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿವಲಿಂಗಪ್ಪ ಜಲಾದೆ ಅವರು ಮೂಲಿಮನಿ ಫೌಂಡೇಶನ್ ಸ್ಥಾಪನೆ ಉದ್ದೇಶ ಕುರಿತು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸಂವಿಧಾನ ಮೇಲೆ ಬೆಳಕು ಚೆಲ್ಲುವ ʼಭಾಗ್ಯವಿದಾತʼ ಕೃತಿ : ಧನರಾಜ ತುಡಮೆ

ಪ್ರವೀಣ ಮ್ಯೂಜಿಕ್ ಅಕಾಡೆಮಿಯ ಮಕ್ಕಳು ನಾಡಗೀತೆ ಹಾಡಿದರು.‌ ಹಿರಿಯ ಕಲಾವಿದ ಶಂಭುಲಿಂಗ ವಾಲದೊಡ್ಡಿ ಹಾಗೂ ಶ್ರೀಕಾಂತ ಬಿರಾದಾರ ಅವರು ವಚನ ಗಾಯನ ನಡೆಸಿಕೊಟ್ಟರು. ಬಸವರಾಜ ಮೂಲಗೆ ನಿರೂಪಿಸಿದರು, ಬಸವರಾಜ ಬಿರಾದಾರ ಸ್ವಾಗತಿಸಿದರು. ಸಂತೋಷ ಮಂಗಳೂರೆ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...