ಬೀದರ್‌ | ಲೋಕಾಯುಕ್ತ ದಾಳಿ; ಭೂಮಾಪನ ಅಧಿಕಾರಿ ಸೆರೆ

Date:

ಎರಡು ಎಕರೆ ಜಮೀನು ಪೋಡಿ ಮಾಡಿ ವರ್ಗಾವಣೆ ಮಾಡಿಕೊಡಲು 10 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟು 6 ಸಾವಿರ ರೂ. ಹಣವನ್ನು ಪಡೆಯುತ್ತಿದ್ದ ಭೂಮಾಪನ ಅಧಿಕಾರಿಯನ್ನು ಬೀದರ್‌ ಲೋಕಾಯುಕ್ತ ಪೊಲೀಸರು ಸಾಕ್ಷಿಸಹಿತ​ ಹಿಡಿದಿದ್ದಾರೆ.

ಬೀದರ್‌ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಮುಡಬಿ ಗ್ರಾಮ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಾರ್ಯಾಲಯದಲ್ಲಿ ಭೂಮಾಪನ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಸಿದ್ಧಾರ್ಥ(28) ಎಂಬುವವರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವುದು ತಿಳಿದುಬಂದಿದೆ.

ಬೀದರ್‌ ತಾಲೂಕಿನ ಹಿಪ್ಪಳಗಾಂವ ಗ್ರಾಮದ ನಿವಾಸಿ ವೆಂಕಟರಾವ ತಂದೆ ಮುಕುಂದರಾವ ಶೇರಿಕರ ಎಂಬುವವರು ದೂರುದಾರನಾಗಿದ್ದು, ಇವರು 4 ಎಕರೆ ಜಮೀನಿನಲ್ಲಿ 2 ಎಕರೆ ಜಮೀನನ್ನು ತಮ್ಮ ಕಿರಿಯ ಸೊಸೆ ಸೀಮಾಳ ಹೆಸರಿಗೆ ಪೋಡಿ ಮಾಡಿ ವರ್ಗಾವಣೆ ಮಾಡಲು ಭೂಮಾಪಕ ಅಧಿಕಾರಿ ಸಿದ್ಧಾರ್ಥ ಅವರು 10 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇದರಲ್ಲಿ 2,500 ರೂಪಾಯಿ ವೆಂಕಟರಾವ ಮುಂಗಡವಾಗಿ ನೀಡಿದ್ದು, ಇನ್ನುಳಿದ ಹಣ 7,500 ಕೊಡುವಂತೆ ಬೇಡಿಕೆ ಇಟ್ಟಿದ್ದರಿಂದ ಏನಾದರೂ ಕಡಿಮೆ ಮಾಡಿ ಎಂದಾಗ ಆರೋಪಿ ಸಿದ್ಧಾರ್ಥ 6 ಸಾವಿರ ರೂ. ನೀಡುವಂತೆ ಹೇಳಿದ್ದಾನೆ. ಈ ಕುರಿತು ವೆಂಕಟರಾವ ಬೀದರ್‌ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕಲಬುರಗಿ | ರೈತರಿಗೆ ಬರ ಪರಿಹಾರ ನೀಡುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ಮಾಜಿ ಪ್ರಧಾನಿಗೆ ಮನವಿ

ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ಕಲಬುರಗಿ ಲೋಕಾಯುಕ್ತ ಎಸ್‌ಪಿ ಎ ಆರ್ ಕರ್ನೂಲ್‌ ಅವರ ಮಾರ್ಗದರ್ಶನದಲ್ಲಿ ಪೊಲೀಸ್‌ ಉಪಾಧೀಕ್ಷಕ ಎನ್ ಎಂ ಓಲೇಕಾರ ಅವರ ನೇತೃತ್ವದಲ್ಲಿ ಪಿಐಗಳಾದ ಸಂತೋಷ ರಾಠೋಡ, ಪ್ರದೀಪ ಕೊಳ್ಳಾ, ಬಾಬಾಸಾಹೇಬ ಪಾಟೀಲ್‌, ವಾಹೀದ್‌ ಹುಸೇನ್‌ ಕೋತ್ವಾಳ ಹಾಗೂ ಸಿಬ್ಬಂದಿಗಳು ಭೂಮಾಪಕ ಸಿದ್ಧಾರ್ಥ ಲಂಚದ ಹಣ 6 ಸಾವಿರ ರೂ. ದೂರುದಾರನಿಂದ ಪಡೆಯುತ್ತಿದ್ದಾಗ ಏಕಾಏಕಿ ದಾಳಿ ನಡೆಸಿ ಲಂಚದ ಹಣದೊಂದಿಗೆ ಸಾಕ್ಷಿಸಹಿತ ಸಿದ್ಧಾರ್ಥನನ್ನು ಬಂಧಿಸಿ ಆತನಿಂದ ಹಣ ಜಪ್ತಿ ಮಾಡಿಕೊಂಡಿದ್ದಾರೆ.

ಈ ಕುರಿತು ಬೀದರ್ ಲೋಕಾಯುಕ್ತ ಪೊಲೀಸ್‌ ಠಾಣೆಯಲ್ಲಿ‌ ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...