ಬೀದರ್‌ | ಅಕ್ರಮ ಆಸ್ತಿ ಗಳಿಕೆ ಆರೋಪ : ಆರೋಗ್ಯ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್‌ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

Date:

ಅಕ್ರಮ ಆಸ್ತಿ ಗಳಿಸಿರುವ ಆರೋಪದ ಮೇರೆಗೆ ಕಲಬುರಗಿ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಂಜಿನಿಯರಿಂಗ್ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಸುನೀಲಕುಮಾರ್ ಚಂದ್ರಪ್ರಕಾಶ್‌ ಪ್ರಭಾ ಎಂಬುವರ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಬುಧವಾರ ದಾಳಿ ನಡೆಸಿದ್ದಾರೆ.

ಬೀದರ್ ಜಿಲ್ಲೆ ಹುಮನಾಬಾದ್ ತಾಲ್ಲೂಕಿನ ಹಳ್ಳಿಖೇಡ್ (ಬಿ) ಗ್ರಾಮದ ನಿವಾಸಿಯಾಗಿರುವ ಸುನೀಲಕುಮಾರ್ ಸದ್ಯ ಕಲಬುರಗಿಯಲ್ಲಿ ಕೆಲಸ‌ ನಿರ್ವಹಿಸುತ್ತಿದ್ದಾರೆ.

ಬೀದರ್ ನಗರದ ಜೈಲ್ ಕಾಲೊನಿಯ ಎಸ್.ಬಿ.ಪಿ. ನಗರದ ನಿವಾಸ ಹಾಗೂ ಕಲಬುರಗಿಯಲ್ಲಿ ಅವರು ಕೆಲಸ ನಿರ್ವಹಿಸುತ್ತಿರುವ ಕಚೇರಿ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲೋಕಾಯುಕ್ತ‌ ಎಸ್ಪಿ ಸಿದ್ದರಾಜು ಮಾರ್ಗದರ್ಶನ ಹಾಗೂ ಡಿವೈಎಸ್ಪಿ ಹನುಮಂತರಾಯ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮನೆ ಮೇಲೆ ದಾಳಿ :

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಜನಿ ಷಣ್ಮುಖ ಗೌಡ ಅವರ ಮನೆ ಮೇಲೆ ಬುಧವಾರ ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಕೊಪ್ಪಳ | 102 ಕೆಜಿ ತೂಕದ ಜೋಳದ ಮೂಟೆ ಹೊತ್ತು ಅಂಜನಾದ್ರಿ ಬೆಟ್ಟ ಹತ್ತಿದ 61 ವರ್ಷದ ವ್ಯಕ್ತಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...