ಬೀದರ್‌ | ಚೆಂಡು ಹೂವು ತೋಟದಲ್ಲಿ ಬೆಳೆದ ₹15 ಲಕ್ಷ ಮೌಲ್ಯದ ಗಾಂಜಾ ಜಪ್ತಿ; ಆರೋಪಿ ಬಂಧನ

Date:

ಕಮಲನಗರ ತಾಲ್ಲೂಕಿನ ಸಾವಳಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಚೆಂಡು ಹೂವು ಬೆಳೆ ಮಧ್ಯೆ ಬೆಳೆದಿದ್ದ ₹12 ಲಕ್ಷ ಮೌಲ್ಯದ ಗಾಂಜಾವನ್ನು ಕಮಲನಗರ ಠಾಣೆಯ ಪೊಲೀಸರು ಸೋಮವಾರ ಪತ್ತೆ ಹಚ್ಚಿದ್ದಾರೆ.

ಹೂವು ಬೆಳೆ ನಡುವೆ ಗಾಂಜಾ‌ ಸಸಿ ನಾಟಿ‌ ಮಾಡಿ ಬೆಳೆದರೆ ಯಾರಿಗೂ ಗೊತ್ತಾಗುವುದಿಲ್ಲ. ಕದ್ದು ಮುಚ್ಚಿ ಮಾರಾಟ ಮಾಡಬಹುದು ಎಂಬ ಉದ್ದೇಶದಿಂದ ಸಂತೋಷ ಬಾಗದೆ ಎಂಬುವವರು ಅಕ್ರಮವಾಗಿ 51 ಗಾಂಜಾ ಗಿಡಗಳನ್ನು ಬೆಳೆದಿದ್ದರು.

ಖಚಿತ ಮಾಹಿತಿ ಮೇರೆಗೆ ಭಾಲ್ಕಿ ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟಿ, ಸಿಪಿಐ ಶ್ರೀಕಾಂತ ಅಲ್ಲಾಪುರೆ, ಪಿಎಸ್‌ಐ ಆಶಾ ಅವರ ನೇತ್ರತ್ವದಲ್ಲಿ ಸೋಮವಾರ ದಾಳಿ ನಡೆಸಿ, ₹15 ಲಕ್ಷ ಮೌಲ್ಯದ 15.100 ಕೆಜಿ ಗಾಂಜಾದ 51 ಗಿಡಗಳನ್ನು ಜಪ್ತಿ ಮಾಡಿದ್ದಾರೆ. ಆರೋಪಿತನ ವಿರುದ್ಧ ಕಮಲನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 10 06 at 10.36.39 PM

ಕಾರ್ಯಾಚರಣೆಯಲ್ಲಿ ಕಮಲನಗರ ತಹಸೀಲ್ದಾರ್‌ ಅಮೀತ್‌ ಕುಲಕರ್ಣಿ, ಆರ್‌ಐ ಪ್ರವೀಣ ಬಿರಾದರ್‌, ಗ್ರಾಮ ಲೆಕ್ಕಾಧಿಕಾರಿ ರಮೇಶ ಶರಣಪ್ಪಾ, ಠಾಣೆಯ ಸಿಬ್ಬಂದಿಗಳಾದ ಲೋಕೇಶ, ಇಮ್ರಾನ್‌, ನವನಾಥ, ವೈಜಿನಾಥ, ಸಿದ್ದಲಿಂಗ, ನರೇಶ, ಮಲ್ಲಿಕಾರ್ಜುನ, ವಸಂತ, ನಾಗನಾಥ, ಅಂಕುಶ, ಮಹಾದೇವ ಮತ್ತಿತರರು ಭಾಗವಹಿಸಿದ್ದರು.

ಇದನ್ನೂ ಓದಿ : ಬೀದರ್‌ | ಎಂಎಸ್‌ಎಸ್‌ಕೆ 8 ಸ್ಥಾನಗಳಿಗೆ ಚುನಾವಣೆ; 3,106 ಮತದಾನ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...