ಬೀದರ್ | ಕಲುಷಿತ ನೀರು ಕುಡಿದು ಅಸ್ವಸ್ಥರಾಗಿದ್ದವರ ಆರೋಗ್ಯ ವಿಚಾರಿಸಿದ ಸಚಿವ

Date:

ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಕರಕ್ಯಾಳ ಗ್ರಾಮದಲ್ಲಿ ಕಲುಷಿತ ನೀರು ಕುಡಿದು 20ಕ್ಕೂ ಹೆಚ್ಚು ಜನ ಅಸ್ವಸ್ತರಾಗಿದ್ದರು. ಅವರ ಮನೆಗಳಿಗೆ ಭೇಟಿ ನೀಡಿ, ಸಂತ್ರಸ್ತರೊಂದಿಗೆ ಚರ್ಚೆ ನಡೆಸಿದ ಸಚಿವ ಈಶ್ವರ್ ಖಂಡ್ರೆ, ‘ನೀರು ಕಲುಷಿತವಾಗಲು ನಿಖರ ಕಾರಣವೇನೆಂದು ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಭರವಸೆ ನೀಡಿದ್ದಾರೆ.

ಗುರುವಾರ ಕರಕ್ಯಾಳ ಗ್ರಾಮಕ್ಕೆ ಭೇಟಿ ನೀಡಿದ ಸಚಿವರು ಅಸ್ವಸ್ಥಗೊಂಡಿದ್ದವರ ಆರೋಗ್ಯ ವಿಚಾರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. “ಕಲುಷಿತ ನೀರು ಕುಡಿದು ಅಸ್ವಸ್ಥಗೊಂಡಿರುವ ಎಲ್ಲರೂ ಚೇತರಿಸಿಕೊಂಡಿದ್ದಾರೆ. ಮೇಲ್ನೋಟಕ್ಕೆ ಕೊಳವೆ ಬಾವಿಗೆ ತ್ಯಾಜ್ಯ ನೀರು ಬೆರೆತು ಕಲುಷಿತವಾಗಿರುವುದಾಗಿ ಹೇಳಲಾಗುತ್ತಿದೆ. ಈ ಬಗ್ಗೆ ಪ್ರಯೋಗಾಲಯ ಪರೀಕ್ಷೆಯ ಬಳಿಕ ನಿಖರ ಕಾರಣ ತಿಳಿಯಲಿದೆ” ಎಂದರು.

“ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಇಂತಹ ಘಟನೆ ಮರುಕಳಿಸದಂತೆ ಕಟ್ಟೆಚ್ಚರ ವಹಿಸಬೇಕು. ಪಿಡಿಓಗಳು, ಜಿಲ್ಲಾ ಪಂಚಾಯಿತಿ ಸಿಬ್ಬಂದಿ ಕುಡಿಯುವ ನೀರಿನ ಕೊಳವೆಗಳಿಗೆ ತ್ಯಾಜ್ಯ ಜಲ ಸೇರದಂತೆ ಎಚ್ಚರ ವಹಿಸಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ್ ಅರಳಿ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ, ಪೊಲೀಸ್ ಅಧೀಕ್ಷಕ ಚನ್ನಬಸವಣ್ಣ ಲಂಗೋಟಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...