ಬೀದರ್‌ | ಶೌಚಾಲಯ ನಿರ್ಮಿಸದೆ ಅನುದಾನ ದುರ್ಬಳಕೆ : ಮುಖ್ಯಾಧಿಕಾರಿ ಅಮಾನತಿಗೆ ಆಗ್ರಹ

Date:

ಔರಾದ್‌ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ 2023-24ನೇ ಸಾಲಿನಲ್ಲಿ ಸ್ವಚ್ಛ ಭಾರತ ಮಿಷನ್‌ (ನಗರ) 2.0 ಯೋಜನೆಡಿಯಲ್ಲಿ ಮಂಜೂರಾದ ವೈಯಕ್ತಿಕ, ಸಾರ್ವಜನಿಕ, ಸಮುದಾಯ, ಅಸಪಿರೇಷ್ನಲ್‌ ಹಾಗೂ ಮೂತ್ರಾಲಯ ನಿರ್ಮಾಣದಲ್ಲಿ ಹಣ ದುರ್ಬಳಕೆಯಾಗಿದೆ ಎಂದು ಔರಾದ್ ಪಟ್ಟಣ ಪಂಚಾಯತ್‌ ಸದಸ್ಯ ಶಿವಾಜಿ ರಾಠೋಡ್‌ ಆರೋಪಿಸಿದ್ದಾರೆ.

ಈ ಸಂಬಂಧ ಗುರುವಾರ ಔರಾದ್‌ ತಹಸೀಲ್ದಾರ್‌ ಮಹೇಶ ಪಾಟೀಲ್‌ ಅವರಿಗೆ ಸಂಬಂಧಪಟ್ಟ ದಾಖಲೆ ಸಮೇತ ಹಕ್ಕೊತ್ತಾಯ ಪತ್ರ ಸಲ್ಲಿಸಿದ ಅವರು, ಅದರ ಪ್ರತಿಗಳನ್ನು ಸಿಎಂ, ರಾಜ್ಯಪಾಲ ಪೌರಾಡಳಿತ ನಿರ್ದೇಶನಾಲಯ ಮುಖ್ಯ ನಿರ್ದೇಶಕರಿಗೆ, ಬೀದರ್‌ ಜಿಲ್ಲಾಧಿಕಾರಿ ಮತ್ತಿತರರಿಗೆ ಸಲ್ಲಿಸಿದ್ದಾರೆ.

ʼಸ್ವಚ್ಛ ಭಾರತ ಮಿಷನ್‌ (ನಗರ) 2.0 ಯೋಜನೆಯಡಿ‌ 2023ರ ನವೆಂಬರ್ 23ರಂದು ಸದರಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ₹1.14 ಕೋಟಿಯ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿತ್ತು. ಈ ಯೋಜನೆಯಡಿ ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಅರ್ಜಿಗಳನ್ನು ಕರೆಯಲಾಗಿತ್ತು. ಆದರೆ ಫಲಾನುಭವಿಗಳಿಂದ ಅರ್ಜಿ ಪಡೆದು ಶೌಚಾಲಯ ನಿರ್ಮಿಸದೆ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಅವರು ಹಣ ದುರ್ಬಳಕೆ ಮಾಡಿಕೊಂಡು ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದಲ್ಲದೆ ಫಲಾನುಭವಿಗಳಿಗೆ ಅನ್ಯಾಯ ಎಸಗಿದ್ದಾರೆʼ ಎಂದು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಿ 170 ಫಲಾನುಭವಿಗಳಿಗೆ ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಲು ಅನುದಾನ ನೀಡಬೇಕು. ವಾರದಲ್ಲಿ ತಪ್ಪಿತಸ್ಥ ಅಧಿಕಾರಿ ವಿರುದ್ಧ ಕ್ರಮ ಜರುಗಿಸಿ ಅಮಾನತುಗೊಳಿಸಬೇಕು. ವಿಳಂಬ ಮಾಡಿದರೆ ಅಧಿಕಾರಿ ಹಾಗೂ ಸರ್ಕಾರದ ವಿರುದ್ಧ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ₹6.46 ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾ ಜಪ್ತಿ

ಈ ಸಂದರ್ಭದಲ್ಲಿ ಭೀಮ ಪವಾರ್‌, ಸುಧಾಕರ ರಾಠೋಡ್‌, ಮಾರುತಿ ಜಾಧವ್‌, ಶಾರುಬಾಯಿ ರಾಜು ರಾಠೋಡ್‌, ರಾಜು ರಾಠೋಡ್‌ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...