ಬೀದರ್ | ಕಲ್ಲು ಗಣಿಗಾರಿಕೆ ನಿಲ್ಲಿಸಲು ಶಾಸಕ ಪ್ರಭು ಚವ್ಹಾಣ ಆಗ್ರಹ

Date:

ಔರಾದ ವಿಧಾನಸಭಾ ಕ್ಷೇತ್ರದ ಚಿಮ್ಮೆಗಾಂವ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆಯಿಂದ ರೈತರು ಮತ್ತು ಸಾರ್ವಜನಿಕರು ಸಾಕಷ್ಟು ತೊಂದರೆಯಾಗುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು, ಕೂಡಲೇ ಗಣಿಗಾರಿಕೆಯನ್ನು ನಿಲ್ಲಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಶಾಸಕಪ್ರಭು ಬಿ.ಚವ್ಹಾಣ ಆಗ್ರಹಿಸಿದ್ದಾರೆ.

ಈ ಕುರಿತು ಗಣಿ ಮತ್ತು ಭೂವಿಜ್ಞಾನಗಳ ಇಲಾಖೆಯ ಹಿರಿಯ ಭೂವಿಜ್ಞಾನಿಗಳಿಗೆ ಪತ್ರ ಬರೆದಿರುವ ಅವರು ‘ಮೇಘನಾ ಕನ್ಸ್‌ಟ್ರಕ್ಷನ್ಸ್ ಎಂಬ ಸಂಸ್ಥೆಯವರು ಕಲ್ಲು ಗಣಿಗಾರಿಕೆ ನಡೆಸುತ್ತಿದ್ದು, ಇಲ್ಲಿಂದ ಹೊರಬರುತ್ತಿರುವ ವಿಪರೀತ ಧೂಳಿನಿಂದಾಗಿ ಸುತ್ತನಲ್ಲಿ ಕೃಷಿ ಮಾಡಿಕೊಂಡು ಬದುಕುತ್ತಿರುವ ರೈತರಿಗೆ ಮಾರಕವಾಗಿ ಪರಿಣಮಿಸಿದೆ’ ಎಂದು ತಿಳಿಸಿದರು.

‘ದೊಡ್ಡ ಪ್ರಮಾಣದ ಯಂತ್ರಗಳನ್ನು ಬಳಸುತ್ತಿರುವುದರಿಂದ ಬೆಳೆಗಳು ಧೂಳಿನಿಂದ ಆವರಿಸಿ ಬೆಳೆನಷ್ಟವಾಗುತ್ತಿದೆ. ಗಣಿಗಾರಿಕೆ ಆರಂಭವಾದಾಗಿನಿಂದ ಆದಾಯ ಸಿಗದೇ ನಮಗೆ ಅನ್ಯಾಯವಾಗುತ್ತಿದೆ ಎಂದು ಬಹಳಷ್ಟು ರೈತರು ನನ್ನ ಬಳಿಗೆ ಬಂದು ಸಮಸ್ಯೆ ತೊಡಿಕೊಳ್ಳುತ್ತಿದ್ದಾರೆ. ಈ ಮಾರ್ಗದಲ್ಲಿ ಸಾಕಷ್ಟು ವಾಹನಗಳು ಓಡಾಡುತ್ತವೆ. ಗಣಿಯಿಂದ ಹೊರಬರುವ ಧೂಳು ರಸ್ತೆಯ ಮೇಲೆ ಆವರಿಸುವುದರಿಂದ ವಾಹನ ಸವಾರರ ಕಣ್ಣುಗಳಲ್ಲಿ ಧೂಳು ಬಿದ್ದು, ಸಂಚರಿಸಲು ಪರದಾಡುವ ಪರಿಸ್ಥಿತಿಯಿದೆ. ಈ ಕುರಿತು ಗ್ರಾಮ ಪಂಚಾಯಿತಿಯಲ್ಲಿ ಠರಾವು ಪಾಸ್ ಮಾಡಲಾಗಿದೆ. ಸಾಕಷ್ಟು ಬಾರಿ ನೋಟಿಸ್ ಕೊಡಲಾಗಿದೆ. ಆದರೂ ಯಾವುದೇ ಪ್ರಯೋಜನವಾಗಿಲ್ಲವೆಂದು ಜನತೆ ಹೇಳುತ್ತಿದ್ದಾರೆ’ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾರ್ವಜನಿಕರ ಹಿತದೃಷ್ಟಿಯಿಂದ ಚಿಮ್ಮೆಗಾಂವ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆಯನ್ನು ತುರ್ತಾಗಿ ನಿಲ್ಲಿಸಿ, ರೈತರು ಮತ್ತು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಶಾಸಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...