ಬೀದರ್‌ | ಒಗ್ಗರಣೆ ಅನ್ನ ಸೇವನೆ : 50 ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ

Date:

ಬೀದರ್ ಜಿಲ್ಲೆಯ‌ ಹುಮನಾಬಾದ್‌ ತಾಲೂಕಿನ ಕಲ್ಲೂರ್‌ ರಸ್ತೆಯಲ್ಲಿರುವ ಬಸವತೀರ್ಥ ವಿದ್ಯಾಪೀಠ ಗುರುಕುಲ ವಸತಿ ಶಾಲೆಯಲ್ಲಿ ವಿಷಪೂರಿತ ಆಹಾರ ಸೇವನೆಯಿಂದಾಗಿ 50 ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಬುಧವಾರ ಬೆಳಗ್ಗೆ ಘಟನೆ ಸಂಭವಿಸಿದ್ದು, ರಾತ್ರಿ ಉಳಿದ ಅನ್ನಕ್ಕೆ ಒಗ್ಗರಣೆ ಹಾಕಿ ಮುಂಜಾನೆ ಮಕ್ಕಳಿಗೆ ಉಣಬಡಿಸಿದ ಹಿನ್ನಲೆ ಘಟನೆ ಸಂಭವಿಸಿದೆ ಎನ್ನಲಾಗುತ್ತಿದೆ. ವಿದ್ಯಾರ್ಥಿಗಳು ವಾಂತಿ, ಸುಸ್ತು, ತಲೆ ಸುತ್ತಿನಿಂದ ಬಳಲಿದ್ದರು. ಕೂಡಲೇ ಮಕ್ಕಳನ್ನು ವಸತಿ ನಿಲಯದ ಸಿಬ್ಬಂದಿ, ಸ್ಥಳೀಯರು ಹುಮನಾಬಾದ್‌ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸ್ಥಳಕ್ಕೆ ವಿಧಾನ ಪರಿಷತ್‌ ಸದಸ್ಯರಾದ ಚಂದ್ರಶೇಖರ್‌ ಪಾಟೀಲ್‌, ಭೀಮರಾವ್‌ ಪಾಟೀಲ್‌ ಭೇಟಿ ನೀಡಿ ಮಕ್ಕಳ ಅರೋಗ್ಯ ವಿಚಾರಿಸಿದ್ದಾರೆ. ಮಕ್ಕಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದ್ದಾರೆ. ಈ ಸಂದರ್ಭದಲ್ಲಿ ಆಸ್ಪತ್ರೆ ಮುಖ್ಯ ಆರೋಗ್ಯ ಅಧಿಕಾರಿ ಡಾ.ನಾಗನಾಥ ಹುಲಸೂರೆ ಹಾಗೂ ಸಿಬ್ಬಂದಿ ಇದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ವಯನಾಡ್ ಉಪಚುನಾವಣೆ | ಪ್ರಿಯಾಂಕಾ ಗಾಂಧಿ ರಾಜಕೀಯ ಭವಿಷ್ಯ ಇಂದು ನಿರ್ಧಾರ!

ಸುದ್ದಿ ತಿಳಿದು ಆಸ್ಪತ್ರೆಗೆ ಧಾವಿಸಿದ ಮಕ್ಕಳ ಪೋಷಕರು ಶಾಲಾ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವಿರುದ್ಧ ಆಕ್ರೋಶ ಹೊರ ಹಾಕಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...