ಬೀದರ್‌ | ಗ್ರಾ.ಪಂ.ಸದಸ್ಯನ ಕೊಲೆ : 7 ಗಂಟೆಯಲ್ಲಿ ಪ್ರಕರಣ ಭೇದಿಸಿದ ಪೊಲೀಸರು; ನಾಲ್ವರ ಬಂಧನ

Date:

ಬೀದರ್ ನಗರ ಹೊರವಲಯದ ಚಿಕ್ಕಪೇಟೆ–ಅಲಿಯಾಬಾದ್‌ ರಿಂಗ್‌ರೋಡ್‌ನಲ್ಲಿ‌ ಶುಕ್ರವಾರ ಮಧ್ಯಾಹ್ನ ನಡೆದ ಗ್ರಾಮ ಪಂಚಾಯಿತಿ ಸದಸ್ಯ, ರಿಯಲ್‌ ಎಸ್ಟೇಟ್‌ ಉದ್ಯಮಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಕೃತ್ಯ ಎಸಗಿದ ಇಬ್ಬರು ಹಾಗೂ ಕೊಲೆಗೆ ಸಹಕರಿಸಿದ ಇಬ್ಬರು ಸೇರಿ ಒಟ್ಟು ನಾಲ್ವರು ಆರೋಪಿಗಳನ್ನು ಘಟನೆ ನಡೆದ ಏಳು ಗಂಟೆಗಳಲ್ಲಿ ನಗರದ ಶಹಾಪುರ ಅರಣ್ಯ ಪ್ರದೇಶದಲ್ಲಿ ಬಂಧಿಸಿದ್ದಾರೆ.

‘ಬೀದರ್ ನಗರದ ನಾವದಗೇರಿ ಹಾಗೂ ಕುಂಬಾರವಾಡ ಬಡಾವಣೆಯ ಜಾನ್ ಮತ್ತು‌ ಉಮೇಶ ಎಂಬುವವರು ಕೊಲೆ ಆರೋಪಿಗಳಾಗಿದ್ದು, ಕೃತ್ಯಕ್ಕೆ ಸಹಕರಿಸಿದ ಇನ್ನುಳಿದ ಇಬ್ಬರು ಆರೋಪಿಗಳು ತಾಲ್ಲೂಕಿನ ಹೊನ್ನಿಕೇರಿ ಗ್ರಾಮದವರು. ಕೊಲೆಗೆ ಸಂಚು ರೂಪಿಸಿದ ಹೊನ್ನಿಕೇರಿ ಗ್ರಾಮದ ಮುಖ್ಯ ಆರೋಪಿ ಪರಾರಿಯಾಗಿದ್ದಾನೆʼ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ್‌ ಗುಂಟಿ ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೊಲೆಗೆ ಕಾರಣವೇನು ?

ಬೀದರ್‌ ತಾಲ್ಲೂಕಿನ ಹೊನ್ನಿಕೇರಿ ಗ್ರಾಮದ ವೈಜಿನಾಥ ದತ್ತಾತ್ರಿ (49) ಎಂಬುವರು ಗ್ರಾಮ ಪಂಚಾಯಿತಿ ಸದಸ್ಯ, ರಿಯಲ್‌ ಎಸ್ಟೇಟ್‌ ಉದ್ಯಮಿ ಆಗಿದ್ದರು. ಜನವಾಡ ಪೊಲೀಸ್‌ ಠಾಣೆಯಲ್ಲಿ ಹಿಂದಿನ ವರ್ಷ ಅವರದೇ ಗ್ರಾಮದಲ್ಲಿ ನಡೆದ ಪೋಕ್ಸೋ ಪ್ರಕರಣ ಹಾಗೂ ಎಸ್ಸಿ,ಎಸ್ಟಿ ದೌರ್ಜನ್ಯ ಪ್ರಕರಣವೊಂದು ದಾಖಲಾಗಿತ್ತು. ವೈಜಿನಾಥ ಅವರು ಈ ಪ್ರಕರಣದಲ್ಲಿ ನೊಂದ ಕುಟುಂಬದ ಪರ ನಿಂತು, ಅವರಿಗೆ ವೈಜಿನಾಥ ಅಗತ್ಯ ಸಹಕಾರ ನೀಡಿದ್ದರು. ಈ ಕಾರಣಕ್ಕೆ ವೈಜಿನಾಥ ಅವರ ದೂರದ ಸಂಬಂಧಿಕರಾದ ವ್ಯಕ್ತಿ ಸೇಡಿನಿಂದ ಕೊಲೆಗೆ ಸಂಚು ರೂಪಿಸಿದ್ದನು. ಕೊಲೆಗೆ ಸಂಚು ರೂಪಿಸಿದ ವ್ಯಕ್ತಿ ಸ್ನೇಹಿತರಾಗಿರುವ ಕಾರಣಕ್ಕೆ ವೈಜಿನಾಥ ಅವರನ್ನು ಕೊಲೆ ಮಾಡಲಾಗಿದೆ ಎಂದು ಕೊಲೆ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ’ ಎಂದು ಹೇಳಿದರು.

ʼವೈಜಿನಾಥ ಅವರು ಶುಕ್ರವಾರ ಚಿಕ್ಕಪೇಟೆ–ಅಲಿಯಾಬಾದ್‌ ರಿಂಗ್‌ರೋಡ್‌ ಸಮೀಪದ ಎಸ್‌ಕೆ ಧಾಬಾದಲ್ಲಿ ಊಟ ಮಾಡಲು ಹೋಗಿದ್ದರು. ಈ ವೇಳೆ ವೈಜಿನಾಥ ಅವರನ್ನು ಇಬ್ಬರು ಆರೋಪಿಗಳು ಮಚ್ಚಿನಿಂದ ಹೊಡೆದು, ಕೊಲೆ ಮಾಡಿ ಬೈಕ್‌ ಮೇಲೆ ಪರಾರಿಯಾಗಿದ್ದರು. ಈ ಪ್ರಕರಣದ ಓರ್ವ ಆರೋಪಿಯು ಏಳೆಂಟು ವರ್ಷದ ಹಿಂದೆ ನ್ಯೂಟನ್‌ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದನುʼ ಎಂದು ಹೇಳಿದರು.

ʼಸ್ಥಳೀಯ ಸಿಸಿಟಿವಿ ಸಹಾಯದಿಂದ ಕಮಾಂಡ್‌ ಸೆಂಟರ್‌ ಮೂಲಕ ಇಬ್ಬರು ಆರೋಪಿಗಳ ಗುರುತು ಪತ್ತೆ ಹಚ್ಚಲಾಯಿತು. ಕೃತ್ಯಕ್ಕೆ ಸಹಕರಿಸಿದ ಇನ್ನಿಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಸಂಚು ರೂಪಿಸಿದ ಮುಖ್ಯ ಆರೋಪಿ ಪರಾರಿಯಾಗಿದ್ದು, ಶೀಘ್ರದಲ್ಲೇ ಬಂಧಿಸಲಾಗುವುದುʼ ಎಂದು ತಿಳಿಸಿದ್ದಾರೆ.

ಡಿವೈಎಸ್ಪಿಗಳಾದ ಶಿವನಗೌಡ ಪಾಟೀಲ, ಎಸ್.ಎನ್ ಸನಾದಿ ನೇತೃತ್ವದಲ್ಲಿ ನೂತನ ನಗರ ಠಾಣೆಯ ಪಿಐ ವಿಜಯಕುಮಾರ ಬಾವಗಿ, ಪಿಎಸ್‌ಐಗಳಾದ ಪ್ರಭಾಕರ ಪಾಟೀಲ, ಸೈಯದ್ ಪಟೇಲ, ಅಬ್ದುಲ್ ಸಮದ್‌, ಹುಲ್ಲೆಪ್ಪಾ, ಕಾನ್‌ಸ್ಟೆಬಲ್‌ಗಳಾದ ರಾಹುಲ್, ಪ್ರಕಾಶ, ಸತೀಶ, ನವೀನ್, ಗಂಗಾಧರ ಅವರನ್ನು ಒಳಗೊಂಡ ತಂಡವು ಪ್ರಕರಣವನ್ನು ಶೀಘ್ರದಲ್ಲಿ ಭೇದಿಸಿ ಉತ್ತಮ ಕೆಲಸ ಮಾಡಿದೆ ಎಂದು ಎಸ್ಪಿ ಪ್ರದೀಪ ಗುಂಟಿ ಅವರು ಶ್ಲಾಘಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಚಂದ್ರಕಾಂತ ಪೂಜಾರಿ, ಡಿವೈಎಸ್ಪಿಗಳಾದ ಶಿವನಗೌಡ ಪಾಟೀಲ, ಎಸ್.ಎನ್ ಸನಾದಿ, ನೂತನ ನಗರ ಠಾಣೆಯ ಪಿಐ ವಿಜಯಕುಮಾರ ಬಾವಗಿ ಹಾಜರಿದ್ದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ನಿಂತಿದ್ದ ಲಾರಿಗೆ ಬಸ್‌ ಡಿಕ್ಕಿ; ಬೆಳ್ಳಂಬೆಳಗ್ಗೆಯೇ ಐವರ ದುರ್ಮರಣ

ಈ ಕುರಿತು ನೂತನ ನಗರ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ಕಲಂ 103(1), 61(2)(ಎ), 3(5)ರ ಅಡಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...