ಬೀದರ್‌ | ಖಾಸಗಿ ಶಾಲಾ, ಕಾಲೇಜು ಡೊನೇಷನ್ ಹಾವಳಿ ತಡೆಗೆ ನಮ್ಮ ಕರ್ನಾಟಕ ಸೇನೆ ಆಗ್ರಹ

Date:

ಬೀದರ್ ಜಿಲ್ಲೆಯಲ್ಲಿ ಖಾಸಗಿ ಶಾಲಾ, ಕಾಲೇಜುಗಳ ಡೊನೇಷನ್ ಹಾವಳಿ ತಡೆಗಟ್ಟಲು ಕ್ರಮ ಕೈಗೊಳ್ಳಬೇಕು ಎಂದು ನಮ್ಮ ಕರ್ನಾಟಕ ಸೇನೆ ಆಗ್ರಹಿಸಿದೆ.

ಈ ಕುರಿತು ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಬರೆದ ಮನವಿ ಪತ್ರವನ್ನು ಸೇನೆಯ ಜಿಲ್ಲಾ ಘಟಕದ ಪದಾಧಿಕಾರಿಗಳು ಬೀದರ್ ನಗರದಲ್ಲಿ ಬುಧವಾರ ಇಲಾಖೆಯ ಅಧಿಕಾರಿಗೆ ಸಲ್ಲಿಸಿದರು.‌

ʼಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ ಪಾಟೀಲ ಮಾತನಾಡಿ, ʼಶುಲ್ಕದ ವಿಚಾರದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಶಿಕ್ಷಣ ಇಲಾಖೆಯ ನಿಯಮ ಗಾಳಿ ತೂರುತ್ತಿವೆ. ಬಸ್‍ಗಾಗಿ ವಿದ್ಯಾರ್ಥಿಗಳ ಪಾಲಕರಿಂದ ಪ್ರತ್ಯೇಕ ಶುಲ್ಕ ವಸೂಲಿ ಮಾಡುತ್ತಿವೆ. ಅದಾಗಿಯೂ ಬಸ್/ವ್ಯಾನ್‍ಗಳಲ್ಲಿ ಸೀಟು ಸಿಗದೆ ಮಕ್ಕಳು ಜೋತಾಡಿಕೊಂಡು ಹೋಗುವ ಪರಿಸ್ಥಿತಿ ಇದೆʼ ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶುಲ್ಕ ಪಾವತಿಸದ ವಿದ್ಯಾರ್ಥಿಗಳನ್ನು ಪೀಡಿಸುತ್ತಿವೆ. ಶಾಲಾ ಕಾಲೇಜುಗಳ ಶುಲ್ಕದ ಹೊರೆ ತಾಳದೆ ಬಡ ಹಾಗೂ ಮಧ್ಯಮ ವರ್ಗದ ಪಾಲಕರು ಆತ್ಮಹತ್ಯೆ ಮಾಡಿಕೊಂಡ ನಿದರ್ಶನಗಳಿವೆ. ಮಳೆಗಾಲದಲ್ಲಿ ಮಾತ್ರ ಮೇಲೇಳುವ ನಾಯಿ ಕೊಡೆಗಳಂತೆ ಖಾಸಗಿ ಶಾಲಾ, ಕಾಲೇಜುಗಳು ತಲೆ ಎತ್ತುತ್ತಿರುವುದು ಆಘಾತಕಾರಿ. ಖಾಸಗಿ ಶಾಲಾ, ಕಾಲೇಜು ನಡೆಸುವ ಸಂಸ್ಥೆಗಳು ಶಿಕ್ಷಣವನ್ನು ವ್ಯಾಪಾರವಾಗಿಸುತ್ತಿವೆ. ಇದಕ್ಕೆ ಕಡಿವಾಣ ಹಾಕಬೇಕಾಗಿದೆ. ಆದರೆ, ಶಿಕ್ಷಣ ಇಲಾಖೆ ಮೌನವಾಗಿರುವುದನ್ನು ಗಮನಿಸಿದರೆ ಇಲಾಖೆ ಖಾಸಗಿ, ಶಾಲಾ ಕಾಲೇಜುಗಳೊಂದಿಗೆ ಶಾಮೀಲಾದಂತೆ ಮೇಲ್ನೋಟಕ್ಕೆ ಕಂಡು ಬರುತ್ತಿದೆʼ ಎಂದು ಆರೋಪಿಸಿದರು.

ʼಸರ್ಕಾರದ ಮಾನದಂಡಗಳನ್ನು ಅನುಸರಿಸದ ಶಾಲಾ, ಕಾಲೇಜುಗಳನ್ನು ಮುಲಾಜಿಲ್ಲದೆ ಮುಚ್ಚಿಸಬೇಕು. ಇಲ್ಲವಾದಲ್ಲಿ ಶಿಕ್ಷಣ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದುʼ ಎಂದು ಎಚ್ಚರಿಸಿದರು.

ಇದನ್ನೂ ಓದಿ : ಬೀದರ್‌ | ವಕ್ಫ್‌ ತಿದ್ದುಪಡಿ ಕಾಯ್ದೆ ಹಿಂಪಡೆಯಲು ಆಗ್ರಹಿಸಿ ರಾಷ್ಟ್ರಪತಿಗೆ ಮನವಿ

ಸೇನೆಯ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸಂಜು ಯಾದವ್, ಸಂಘಟನಾ ಕಾರ್ಯದರ್ಶಿಗಳಾದ ಜಿತೇಂದ್ರ ರಾಠೋಡ್, ಬೀದರ್ ತಾಲ್ಲೂಕು ಘಟಕದ ಅಧ್ಯಕ್ಷ ಅನಿಲ್ ರಾಜಗೀರಾ, ನಗರ ಘಟಕದ ಅಧ್ಯಕ್ಷ ಸಂತೋಷ್ ಪಾಟೀಲ, ಸಂತೋಷ ಮಳಚಾಪುರೆ, ಮಂಜುನಾಥ ಪಾಟೀಲ, ರಾಮಶೆಟ್ಟಿ ಹುಣಜೆ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...