ಬೀದರ್ | ಕರ್ತವ್ಯ ಲೋಪ : ಸಿಂಧನಕೇರಾ ಪಿಡಿಒ ಅಮಾನತು

Date:

ಕರ್ತವ್ಯದಲ್ಲಿ ತೀವ್ರ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಹುಮನಾಬಾದ್ ತಾಲ್ಲೂಕಿನ ಸಿಂಧನಕೇರಾ ಗ್ರಾಮ ಪಂಚಾಯತಿ ಪಿಡಿಒ ಸುಗಂಧ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ ಸೋಮವಾರ ಆದೇಶ ಹೊರಡಿಸಿದ್ದಾರೆ.

ಸಿಂಧನಕೇರಾ ಗ್ರಾಮ ಪಂಚಾಯಿತಿಯಲ್ಲಿ ನಿರ್ವಹಿಸುತ್ತಿದ್ದ ಕಂಪ್ಯೂಟರ್ ಆಪರೇಟರ್ ಸುಭಾಷ ಅವರ ಮೇಲೆ ಪಿಡಿಒ ಸುಗಂಧ ಅವರು ಇಲ್ಲಸಲ್ಲದ ಆರೋಪಗಳನ್ನು ಹೊರಿಸಿ ಹೆಚ್ಚಿನ ಒತ್ತಡ ಹಾಕಿದ್ದರಿಂದಾಗಿ ಅವರು ಸುಭಾಷ್ ಅವರು ಮೃತಪಟ್ಟಿದ್ದಾರೆ ಎಂದು ಆರೋಪಿಸಿ ಪಿಡಿಒ ಸುಗಂಧ ಅವರ ವಿರುದ್ಧ ಚಿಟಗುಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ದಾಖಲಾದ ದಿನದಿಂದ ಪಿಡಿಒ ಅವರು ಮೇಲಾಧಿಕಾರಿಗಳ ಅನುಮತಿ ಇಲ್ಲದೇ ಅನಧಿಕೃತವಾಗಿ ಗೈರು ಹಾಜರಾಗಿರುವುದು ಕಂಡು ಬಂದಿದೆ. ಈ ಕುರಿತು ಹುಮನಾಬಾದ್‌ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಸತ್ಯಾಸತ್ಯತೆಯ ಬಗ್ಗೆ ವಿಚಾರಣೆ ನಡೆಸಿ ವರದಿ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೀದರ್‌ | ಪಿಯುಸಿ ಪರೀಕ್ಷೆ ಫಲಿತಾಂಶ : ಜಿಲ್ಲೆಯ 13 ಪಿಯು ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ

ಕರ್ತವ್ಯದಲ್ಲಿ ತೀವ್ರ ನಿರ್ಲಕ್ಷ್ಯತನ ಹಾಗೂ ನಿಷ್ಕಾಳಜಿತನ ತೋರುತ್ತಿರುವುದರಿಂದ ಹಾಗೂ ಮೇಲಾಧಿಕಾರಿಗಳ ಅನುಮತಿ ಇಲ್ಲದೇ ಕಚೇರಿ ಕೆಲಸಗಳಿಗೆ ಅನಧಿಕೃತವಾಗಿ ಗೈರು ಹಾಜರಾಗಿರುವ ಆರೋಪ ಕಂಡು ಬಂದಿದ್ದು, ಇಲಾಖಾ ವಿಚಾರಣೆ ಕಾಯ್ದಿರಿಸಿ ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಸಿಇಒ ಡಾ.ಗಿರೀಶ ಬದೋಲೆ ಆದೇಶದಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...