ಬೀದರ್‌ | ಅಧಿಕಾರಿಗಳ ನಿರ್ಲಕ್ಷ್ಯ : ಸ್ವಂತ ಹಣದಲ್ಲಿ ರಸ್ತೆ ಗುಂಡಿ ಮುಚ್ಚಿದ ಯುವಕರು!

Date:

ಗುಂಡಿ ಬಿದ್ದ ರಸ್ತೆಗಳ ದುರಸ್ತಿ ಮಾಡುವಂತೆ ಅಧಿಕಾರಿಗಳಿಗೆ ಹಲವು ಸಲ ಮನವಿ ಮಾಡಿದರೂ ಕ್ಯಾರೆ ಎನ್ನಲಿಲ್ಲ. ಇದರಿಂದ ಬೇಸತ್ತ ಗ್ರಾಮಸ್ಥರು, ಕೊನೆಗೆ ಸ್ವಂತ ಹಣದಲ್ಲಿ ರಸ್ತೆ ಗುಂಡಿಗೆ ಮಣ್ಣು ಹಾಕಿ ದುರಸ್ತಿ ಮಾಡಿ ಸಾಮಾಜಿಕ ಕಳಕಳಿ ಮೆರೆದಿದ್ದಾರೆ.

ಬೀದರ್‌ದಿಂದ ಔರಾದ್‌ ತಾಲ್ಲೂಕಿನ ಕಂದಗೂಳ-ಖಾನಾಪುರ ಮಾರ್ಗವಾಗಿ ವಡಗಾಂವ್‌ ಮುಖಾಂತರ ತೆಲಂಗಾಣ ರಾಜ್ಯದ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯಲ್ಲಿ ಬಿದ್ದಿರುವ ಆಳವಾದ ಗುಂಡಿಗಳನ್ನು ಕಂದಗೂಳ-ಖಾನಾಪುರ ಗ್ರಾಮಗಳ ಗ್ರಾಮಸ್ಥರು ಗುಂಡಿಗಳಿಗೆ ಮಣ್ಣು ಹಾಕಿ, ತಾತ್ಕಾಲಿಕವಾಗಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಈ ರಸ್ತೆ ಡಾಂಬಾರು ಕಂಡು ಹಲವು ವರ್ಷಗಳಾಗಿವೆ. ಹೆಚ್ಚಿನ ಸಂಚಾರದಿಂದ ರಸ್ತೆಯುದ್ದಕ್ಕೂ ಗುಂಡಿಗಳು ಬಿದ್ದು ವಾಹನ ಸವಾರರು ಪರದಾಡಬೇಕಾದ ಸ್ಥಿತಿ ನಿರ್ಮಾಣವಾಗಿತ್ತು. ರಸ್ತೆ ದುರಸ್ತಿಗೆ ಈ ಬಾಗದ ಹಳ್ಳಿಗಳ ಮುಖಂಡರು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರೂ ಗುಂಡಿ ಮುಚ್ಚದೆ ನಿರ್ಲಕ್ಷ ವಹಿಸಿದ್ದಾರೆ. ನಿತ್ಯ ಸಂಚಾರ ಮಾಡುವ ಬಸ್‌ಗಳು, ವಾಹನಗಳಿಗೆ ಸಮಸ್ಯೆ ಉಂಟಾಗಿತ್ತು ಎಂದು ಸ್ಥಳೀಯರು ಹೇಳುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 07 16 at 8.25.13 PM
ಬೀದರ್-ವಡಗಾಂವ(ದೇ) ಹೆದ್ದಾರಿಯಲ್ಲಿ ಕಂದಗೂಳ ಸೇತುವೆ ಮೇಲಿನ ಗುಂಡಿಗಳಿಗೆ ಮರುಮ ಹಾಕಿ ತಾತ್ಕಾಲಿಕವಾಗಿ ಮುಚ್ಚಿದರು.

ಮುಂಗಾರು ಪೂರ್ವ ಹಾಗೂ ಜೂನ್‌ ತಿಂಗಳ ಮೊದಲ ಮಳೆಯಿಂದ ಈ ರಸ್ತೆಯಲ್ಲಿ ಮತ್ತೆ ಗುಂಡಿಗಳು ರಾರಾಜಿಸುತ್ತಿದ್ದವು. ಹೀಗಾಗಿ ಖಾನಾಪುರ, ಕಂದಗೂಳ ಸೇರಿದಂತೆ ಅನೇಕ ಸಾಮಾಜಿಕ ಕಾರ್ಯಕರ್ತರು 6-7 ಸಾವಿರ ಹಣ ಸಂಗ್ರಹಿಸಿ ಸಿಮೆಂಟ್‌ ಕಾಂಕ್ರಿಟ್‌ನಿಂದ ಗುಂಡಿ ಮುಚ್ಚಿದ್ದೇವೆ. ಇನ್ನಾದರೂ ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆಯವರು, ಜನಪ್ರತಿನಿಧಿಗಳು ಇತ್ತ ಗಮನ ಹರಿಸಬೇಕು. ಬಾಕಿ ಉಳಿದಿರುವ ರಸ್ತೆಗೆ ಕಾಂಕ್ರೀಟ್ ಹಾಕಿಸುವ ಮೂಲಕ ಗ್ರಾಮಸ್ಥರಿಗೆ ಅನುಕೂಲ ಮಾಡಿಕೊಡಬೇಕು ಎಂದು ಖಾನಾಪುರ ಗ್ರಾಮಸ್ಥ ಕಾಶಿನಾಥ ಬೆಲ್ಲೆ ಆಗ್ರಹಿಸಿದ್ದಾರೆ.

ʼಪ್ರತಿನಿತ್ಯ ಈ ರಸ್ತೆಯಲ್ಲಿ ಸಾವಿರಾರು ವಾಹನಗಳು ಓಡಾಡುತ್ತಿವೆ. ರಸ್ತೆ ಗುಂಡಿ ಸಮಸ್ಯೆಯಿಂದ ಕೆಲ ಸವಾರರು ಬಿದ್ದು ಅಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಜನಪ್ರತಿನಿಧಿಗಳು, ಅಧಿಕಾರಿಗಳ ಗಮನಕ್ಕೆ ತಂದರೂ ಸ್ಪಂದಿಸುತ್ತಿಲ್ಲ. ಪಂಚ ಗ್ಯಾರಂಟಿ ಯೋಜನೆಯಿಂದ ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲವೇʼ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ : ಕಲಬುರಗಿ | ಈಶಾನ್ಯ ವಲಯಕ್ಕೆ ಚಂದ್ರಗುಪ್ತ ನೂತನ ಐಜಿಪಿ

ಸಾಮಾಜಿಕ ಕಳಕಳಿಯ ಯುವಕರಾದ ದತ್ತಾತ್ರಿ, ರಾಜಕುಮಾರ್, ಸಂಜುಕುಮಾರ್ ಜ್ಯೋತಿ, ನಾಗೇಶ್, ಜಫರ್ ಹುಸೇನ್ ಸಾಬ್, ದಯಾನಂದ ಸೇರಿದಂತೆ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...