ಬೀದರ್‌ | ಬಾಲ್ಯವಿವಾಹ ತಡೆದ ಅಧಿಕಾರಿಗಳು

Date:

ಹುಲಸೂರ ತಾಲ್ಲೂಕಿನ ಗಡಿಗೌಡಗಾಂವ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಯ ಬಾಲ್ಯವಿವಾಹ ನಡೆಯುವುದನ್ನು ತಾಲ್ಲೂಕು ಮಟ್ಟದ ಅಧಿಕಾರಿಗಳು ತಡೆದಿದ್ದಾರೆ.

ಎಸ್ಎಸ್‌ಎಲ್‌ಸಿ ಓದುತ್ತಿರುವ ಬಾಲಕಿಯ ವಿವಾಹ ಭಾಲ್ಕಿ ತಾಲ್ಲೂಕಿನ ಗ್ರಾಮವೊಂದರ ಯುವಕನೊಂದಿಗೆ ಮಾರ್ಚ್‌ 7ರಂದು ನಿಗದಿಯಾಗಿತ್ತು. ಈ ಕುರಿತು ಸಹಾಯವಾಣಿ ಕೇಂದ್ರಕ್ಕೆ ಮಾಹಿತಿ ಬಂದ ನಂತರ ತಹಸೀಲ್ದಾರ್‌ ಶಿವಾನಂದ ಮೇತ್ರೆ ನೇತ್ರತ್ವದಲ್ಲಿ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪೋಷಕರಿಗೆ ಬಾಲ್ಯ ವಿವಾಹದಿಂದಾಗುವ ದುಷ್ಪರಿಣಾಮ ಬಗ್ಗೆ ಮನವರಿಕೆ ಮಾಡಿದ್ದಾರೆ.

ʼಬಾಲ್ಯ ವಿವಾಹದ ದುಷ್ಪರಿಣಾಮಗಳು ಹಾಗೂ ಕಾನೂನಿನ ಬಗ್ಗೆ ಅರಿವು ಮೂಡಿಸಿ 18 ವರ್ಷ ತುಂಬುವುವರೆಗೆ ಮದುವೆ ಮಾಡಬಾರದೆಂದು ಎಚ್ಚರಿಕೆ ನೀಡಲಾಯಿತು. ಪಾಲಕರುಗಳಿಂದ ಮುಚ್ಚಳಿಕೆ ಪತ್ರ ಪಡೆದುಕೊಳ್ಳಲಾಗಿದೆ. ಒಂದು ವೇಳೆ 18 ವರ್ಷದ ಒಳಗೆ ಮದುವೆ ಮಾಡಿದರೆ ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ಕಾನೂನು ಕ್ರಮ ಜರುಗಿಸುವುದಾಗಿ ಸೂಚನೆ ನೀಡಲಾಗಿದೆ’ ಎಂದು ತಹಶೀಲ್ದಾರ್ ಶಿವಾನಂದ ಮೇತ್ರೆ ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಕ್ಕಳ ರಕ್ಷಣಾ ತಂಡದಿಂದ ವಿನೋದ ಕುರೆ, ತಾಲ್ಲೂಕು ಪಂಚಾಯಿತಿ ಇಒ ವೈಜಣ್ಣ ಫುಲೆ, ಅಂಗನವಾಡಿ ಮೇಲ್ವಿಚಾರಕಿ ಕೌಸರ ಬಾನು, ಶ್ರೀದೇವಿ, ಜ್ಯೋತಿ ಹಿರೇಮಠ, ಕಂದಾಯ ನಿರೀಕ್ಷಕ ಶರಣು ಪಾವಡಶೆಟ್ಟಿ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮಹಾರುದ್ರಪ್ಪಾ, ಹುಲಸೂರ ಠಾಣೆಯ ಬಿಟ್ ಪೋಲಿಸ್ ಶರ್ಫೋದ್ಧೀನ್ ನೇತೃತ್ವದಲ್ಲಿ ಭೇಟಿ ನೀಡಿ ಮನವೊಲಿಸಿದರು.

ಮಾಸಿಕ ₹4000 ನೀಡಲು ಸೂಚನೆ :

ಹುಲಸೂರ ತಾಲ್ಲೂಕಿನ ಗಡಿಗೌಡಗಾಂವ ಗ್ರಾಮದಲ್ಲಿ ನಡೆಯಬೇಕಿದ್ದ ಬಾಲಕಿಯ ವಿವಾಹವನ್ನು ತಾಲ್ಲೂಕ ಮಟ್ಟದ ಅಧಿಕಾರಿಗಳಿಂದ ಮಂಗಳವಾರ ತಡೆ ಹಿಡಿದಿದ್ದು, ಅಧಿಕಾರಿಗಳ ಕಾರ್ಯಕ್ಕೆ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಶಶಿಧರ್ ಕೋಸಂಬೆ ಶ್ಲಾಘಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಆನ್‌ಲೈನ್ ಗೇಮ್ಸ್ | ತಂದೆ-ತಾಯಿ, ಸಹೋದರಿಯನ್ನು ಕೊಂದ 21 ವರ್ಷದ ಯುವಕ

ಜಿಲ್ಲಾ ಮಕ್ಕಳ ಹಕ್ಕುಗಳ ರಕ್ಷಣಾ ಅಧಿಕಾರಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಸದರಿ ಮಗುವಿಗೆ ಮುಂದಿನ ಶೈಕ್ಷಣಿಕ ಸಹಾಯಕ್ಕಾಗಿ ಮಾಸಿಕ ₹4 ಸಾವಿರ ಮೂರು ವರ್ಷಗಳ ಕಾಲ ನೀಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...