ಬೀದರ್‌ | ಬಿಸಿಯೂಟ ವಿತರಣೆಯಲ್ಲಿ ಲೋಪ : ಪ್ರಭಾರಿ ಮುಖ್ಯಶಿಕ್ಷಕಿ ಅಮಾನತು

Date:

ಶಾಲಾ ಮಕ್ಕಳಿಗೆ ಬಿಸಿಯೂಟ, ಮೊಟ್ಟೆಯನ್ನು ಸಮರ್ಪಕವಾಗಿ ವಿತರಿಸುವಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಕಮಲನಗರ ತಾಲ್ಲೂಕಿನ ದಾಬಕಾ(ಸಿ) ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಸುನಂದಾ ಕೊಂಗೆ ಅವರನ್ನು ಅಮಾನತುಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ (ಆಡಳಿತ) ಎಸ್.ಜಿ ಸುರೇಶ ಆದೇಶಿಸಿದ್ದಾರೆ.

ಔರಾದ್‌ (ಬಿ) ತಾಲ್ಲೂಕು ಹಿರಿಯ ಸಿವಿಲ್‌ ನ್ಯಾಯಾಧೀಶರು ದಾಬಕಾ ಗ್ರಾಮದ ಸರ್ಕಾರಿ ಶಾಲೆಗೆ ಭೇಟಿ ನೀಡಿದಾಗ ʼಶಾಲೆಯಲ್ಲಿ ಕುಡಿಯುವ ನೀರು, ಶೌಚಾಲಯ ಅವ್ಯವಸ್ಥೆ ಸೇರಿದಂತೆ ಬಿಸಿಯೂಟ ಸರಿಯಾಗಿ ವಿತರಣೆಯಾಗುತ್ತಿಲ್ಲ ಎಂದು ವಿದ್ಯಾರ್ಥಿಗಳು ನ್ಯಾಯಾಧೀಶರಿಗೆ ತಿಳಿಸಿದರು. ಶಾಲೆಯ ಅವ್ಯವಸ್ಥೆ ಕಂಡು ನ್ಯಾಯಾಧೀಶರು ಶಾಲೆಯ ಮುಖ್ಯಗುರು ಹಾಗೂ ಅಡುಗೆ ಸಿಬ್ಬಂದಿಗೆ ತೀವ್ರ ತರಾಟೆ ತೆಗೆದುಕೊಂಡಿದ್ದರು.

ಈ ಕುರಿತು ಮಾಧ್ಯಮಗಳಲ್ಲಿ ವರದಿಯಾಗಿರುವುದನ್ನು ಆಧರಿಸಿ ಔರಾದ್ ಕ್ಷೇತ್ರ ಶಿಕ್ಷಣಾಧಿಕಾರಿಗಳ ನೇತ್ರತ್ವದ ತಂಡ ಸೆ.17 ರಂದು ಶಾಲೆಗೆ ಭೇಟಿ ನೀಡಿತು, ʼ200 ಮಕ್ಕಳಿಗೆ ಅರ್ಧ ಕೆ.ಜಿ. ಟಮಾಟೋ ಬಳಕೆ ಮಾಡಿರುವುದು ಮತ್ತು ವಿದ್ಯಾರ್ಥಿಗಳು ಊಟ ಮಾಡಲು ಮನೆಯಿಂದಲೇ ತಟ್ಟೆ ಮತ್ತು ಲೋಟ ತರುವುದು, ಶಾಲೆಯಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೇ ಇರುವುದು, ಬಿಸಿ ಊಟದಲ್ಲಿ ಹುಳುಗಳು ಬಂದರೆ ಅದನ್ನು ತೆಗೆದು ಊಟ ಮಾಡಲು ಮುಖ್ಯ ಶಿಕ್ಷಕರು ಮಕ್ಕಳಿಗೆ ತಿಳಿಸಿರುವುದುʼ ಕಂಡು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಒಂದೂವರೆ ತಿಂಗಳಿನಿಂದ ಮಕ್ಕಳಿಗೆ ಸರಿಯಾಗಿ ಮೊಟ್ಟೆ ನೀಡಿರುವುದಿಲ್ಲ. ಆಹಾರ ಧಾನ್ಯಗಳು ಹಾಗೂ ಹಾಲಿನ ಪುಡಿಯನ್ನು ಮುಖ್ಯ ಶಿಕ್ಷಕರು ಹಾಗೂ ಅಡುಗೆ ಸಿಬ್ಬಂದಿಯವರು ಮನೆಗೆ ತೆಗೆದುಕೊಂಡು ಹೋಗುವುದು, ಶಾಲೆಯಲ್ಲಿ ಶೌಚಾಲಯದ ಕಟ್ಟಡವಿದ್ದರೂ ನೀರಿನ ಸೌಲಭ್ಯವಿಲ್ಲದೇ ಗಂಡು ಮಕ್ಕಳು ಬಯಲಿಗೆ ಹಾಗೂ ಹೆಣ್ಣು ಮಕ್ಕಳು ಮನೆ ಅಥವಾ ಪ್ರೌಢ ಶಾಲೆಯ ಶೌಚಾಲಯ ಬಳಸುತ್ತಿರುವ ಆರೋಪಗಳನ್ನು ಪ್ರಭಾರಿ ಮುಖ್ಯಶಿಕ್ಷಕಿ ಒಪ್ಪಿಕೊಂಡಿದ್ದಾರೆʼ ಎಂದು ಆದೇಶ ಪ್ರತಿಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ : ಬೀದರ್‌ | ಧಾರಾಕಾರ ಮಳೆ : ಮನೆಗೆ ನುಗ್ಗಿದ ನೀರು, ಸ್ಥಳಕ್ಕೆ ಧಾವಿಸಿದ ತಹಸೀಲ್ದಾರ್

ಪ್ರಭಾರಿ ಮುಖ್ಯಶಿಕ್ಷಕಿ ಸುನಂದಾ ಕೊಂಗೆ ಅವರು ವಿದ್ಯಾರ್ಥಿಗಳಿಗೆ ಹೊಡೆಯುವುದು, ಮಹತ್ವಕಾಂಕ್ಷಿ ಯೋಜನೆಯಾದ ಮಧ್ಯಾಹ್ನ ಬಿಸಿಯೂಟ ಮಕ್ಕಳಿಗೆ ಒದಗಿಸುವಲ್ಲಿ ವಿಫಲರಾಗಿ ಕರ್ತವ್ಯದಲ್ಲಿ ಲೋಪ, ಬೇಜವಾಬ್ದಾರಿ‌ ಹಾಗೂ ದುರ್ನಡತೆ ಮೇಲ್ನೋಟಕ್ಕೆ ಕಂಡು ಬಂದ ಹಿನ್ನೆಲೆ ಔರಾದ್ ಬಿಇಒ ಅವರು ನೀಡಿದ ಜಂಟಿ ಸಮೀಕ್ಷೆ ವರದಿ ಆಧರಿಸಿ ಅಮಾನತುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...