ಬೀದರ್‌ | ಡಿ.6ರಂದು ಬುದ್ಧ ಭಾರತ ನಿರ್ಮಾಣ ಹಾಗೂ ಸಂಕಲ್ಪ ಸಮಾವೇಶ

Date:

ಬೀದರ್ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ‌ ಡಿ.6ರಂದು ಶನಿವಾರ ಬೆಳಿಗ್ಗೆ 9ಕ್ಕೆ ವಿಶ್ವಜ್ಞಾನಿ, ಸಂವಿಧಾನ ಶಿಲ್ಪಿ, ಡಾ.ಬಿ.ಆರ್.ಅಂಬೇಡ್ಕರ್ ಅವರ 69ನೇ ಪರಿನಿಬ್ಬಾಣ ದಿನ ಪ್ರಯುಕ್ತ ಬುದ್ಧ ಭಾರತ ನಿರ್ಮಾಣ ಹಾಗೂ ಸಂಕಲ್ಪ ಸಮಾವೇಶ ಆಯೋಜಿಸಲಾಗುತ್ತಿದೆ ಎಂದು ದಲಿತ ಮುಖಂಡರಾದ ಅನಿಲಕುಮಾರ್ ಬೆಲ್ದಾರ್ ತಿಳಿಸಿದರು.‌

ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿರುವ ಅವರು, ʼಅಂದು ಬೆಳಿಗ್ಗೆ 9 ಗಂಟೆಗೆ ಬಾಬಾ ಸಾಹೇಬ್ ಅಂಬೇಡ್ಕರ್‌ ಅವರ ಪುತ್ಥಳಿಗೆ ಗೌರವ ನಮನ, ಬೆಳಿಗ್ಗೆ 11 ರಿಂದ ಸಂಜೆ 4 ಗಂಟೆವರೆಗೆ ಭೀಮಗೀತೆ ಗಾಯನ, ನಂತರ ಸಂಜೆ 5 ಗಂಟೆಗೆ ಬಹಿರಂಗ ಸಭೆ ಜರುಗಲಿದೆʼ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಆಣದೂರ ವೈಶಾಲಿನಗರದ ಭಂತೆ ಜ್ಞಾನಸಾಗರ ಥೇರೊ, ಜಿಲ್ಲಾ ಉಸ್ತುವಾರಿ ಸಚಿರ ಈಶ್ವರ ಖಂಡ್ರೆ, ಪೌರಾಡಳಿತ ಸಚಿವ ರಹೀಂ ಖಾನ್, ಸಂಸದ ಸಾಗರ ಖಂಡ್ರೆ, ಮಾಜಿ ಸಚಿವರಾದ ರಾಜಶೇಖರ ಪಾಟೀಲ, ಬಂಡೆಪ್ಪ ಖಾಶೆಂಪುರ, ಬೀದರ್ ದಕ್ಷಿಣ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿ.ಪಂ ಸಿಇಒ ಡಾ.ಗಿರೀಶ ಬದೋಲೆ ಹಾಗೂ ಎಸ್ಪಿ ಪ್ರದೀಪ ಗುಂಟಿ ಉಪಸ್ಥಿತರಿರುವರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಕಲಬುರಗಿಯ ಪ್ರಗತಿಪರ ಚಿಂತಕಿ ಕೆ.ನೀಲಾ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಅಲ್ಲದೆ ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳು, ಬೌದ್ಧ ಉಪಾಸಕ, ಉಪಾಸಕಿಯರು, ಸಮಾಜದ ಚಿಂತಕರು, ಅಂಬೇಡ್ಕರ್ ಅನುಯಾಯಿಗಳು, ದಲಿತ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆʼ ಎಂದು ವಿವರಿಸಿದರು.    

ʼ69ನೇ ಪರಿನಿಬ್ಬಾಣ ಕಾರ್ಯಕ್ರಮ ಸಮಿತಿಯ ಅಧ್ಯಕ್ಷ ರಮೇಶ ಡಾಕುಳಗಿ ಮಾತನಾಡಿ, ʼಡಾ.ಬಿ.ಆರ್.ಅಂಬೇಡ್ಕರ್ ಅವರು ಶೋಷಿತ ಜನ ಸಮುದಾಯಗಳ ವಿಮೋಚನೆಗಾಗಿ, ತಮ್ಮ ಬದುಕಿನ ಕೊನೆ ಕ್ಷಣದವರೆಗೂ ಹೋರಾಡಿ, ತಮ್ಮ ಜೀವನವನ್ನೇ ಸಮರ್ಪಿಸಿದರು. ಅಸ್ಪ್ರಶ್ಯತೆ, ಅಪಮಾನ, ಕೀಳರಿಮೆ, ಜಾತಿ ಪದ್ಧತಿ, ಲಿಂಗಬೇಧ, ಧಾರ್ಮಿಕ ಮೌಢ್ಯ, ಭ್ರಷ್ಟಚಾರ, ಅಸಮಾನತೆಯಿಂದ ನೊಂದು ಬೆಂದ ಬಂಧುಗಳು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬುದ್ಧ ಭಾರತ ನಿರ್ಮಾಣ ಮಾಡುವುದಕ್ಕಾಗಿ 14ನೇ ಅಕ್ಟೋಬರ್ 1956ರಂದು ನಾಗಪುರದಲ್ಲಿ 5 ಲಕ್ಷ ಅನುಯಾಯಿಗಳೊಂದಿಗೆ ಬೌದ್ಧ ಧಮ್ಮ ಸ್ವೀಕರಿಸಿದರುʼ ಎಂದರು.

ʼಡಾ.ಅಂಂಬೇಡ್ಕರ್‌ ಅವರು ಕಂಡ ಸಮಾನತೆಯ ಕನಸನ್ನು ನನಸು ಮಾಡಲು ನಾವೆಲ್ಲರೂ ಸೇರಿ ಸಂಕಲ್ಪ ಮಾಡೋಣ. ಈ ಕಾರ್ಯಕ್ರಮದಲ್ಲಿ ಪೂಜ್ಯ ಭಿಕ್ಕು ಸಂಘದವರು, ಸಚಿವರು, ಶಾಸಕರು ಹಾಗೂ ಎಲ್ಲಾ ಹಂತದ ಜನಪ್ರತಿನಿಧಿಗಳು, ಅಧಿಕಾರಿಗಳು ಮತ್ತು ವಿಚಾರವಾದಿಗಳು ಭಾಗವಹಿಸಲಿದ್ದಾರೆ. ಅಂಬೇಡ್ಕರವರ ಅನುಯಾಯಿಗಳು, ದಲಿತ, ಶೋಷಿತ, ಹಿಂದುಳಿದ ವರ್ಗದವರು, ಧಾರ್ಮಿಕ ಅಲ್ಪಸಂಖ್ಯಾತರು, ಜನಪರ ಸಂಘಟನೆಗಳ ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕುʼ ಎಂದು ಕೋರಿದರು.

ಇದನ್ನೂ ಓದಿ : ಬೀದರ್‌ | 2026ರ ಜನವರಿ ಒಳಗೆ ಕಾರಂಜಾ ಸಂತ್ರಸ್ತರಿಗೆ ಪರಿಹಾರ ಹಣ ಬಿಡುಗಡೆಗೊಳಿಸಿ : ಲಕ್ಷ್ಮಣ ದಸ್ತಿ

ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಕಾರ್ಯಾಧ್ಯಕ್ಷ ಮಹೇಶ ಗೋರನಾಳಕರ್ ಹಾಗೂ ಪದಾಧಿಕಾರಿಗಳಾದ ಬಾಬುರಾವ ಪಾಸ್ವಾನ್, ಡಾ.ಕಾಶಿನಾಥ ಚಲವಾ, ಶ್ರೀಪತರಾವ ದೀನೆ, ರಮೇಶ ಮಂದಕನಳ್ಳಿ, ಶಿವಕುಮಾರ ನೀಲಿಕಟ್ಟಿ, ಪ್ರಕಾಶ ಮಾಳಗೆ, ಸಂದೀಪ ಕಾಂಟೆ, ಪ್ರದೀಪ ನಾಟೇಕರ್ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...