ಬೀದರ್‌ | ಸಂಘಟಿತರಾಗಿ ಅಸಮಾನತೆ ವಿರುದ್ಧ ಹೋರಾಡಿ : ಸಚಿವ ಈಶ್ವರ ಖಂಡ್ರೆ

Date:

ದೇಶದಲ್ಲಿ ಶೋಷಣೆ, ಅಸಮಾನತೆ, ಧರ್ಮಾಂಧತೆ ಮಿತಿಮೀರುತ್ತಿದ್ದು, ಸಂಘಟಿತರಾಗಿ ಮನುವಾದಿಗಳ ವಿರುದ್ಧ ಹೋರಾಡುವ ಅಗತ್ಯವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ಬೀದರ್ ನಗರದ ಡಾ.ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಬೀದರ್‌ ಜಿಲ್ಲಾ ಶಾಖೆಯಿಂದ ಶನಿವಾರ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 892ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ʼಕೋಮುವಾದಿ, ಬಂಡವಾಳಶಾಹಿ‌ ಶಕ್ತಿಗಳ ಆರ್ಭಟ ಹೆಚ್ಚುತ್ತಿದೆ. ನಮ್ಮೊಳಗಿನ ಭಿನ್ನತೆಗಳು ಬಿಟ್ಟು ವಿಶಾಲ ದೃಷ್ಟಿಕೋನದಿಂದ ಒಂದೇ ವೇದಿಕೆಗೆ ಬಂದು ಸಂಘಟಿತರಾಗಿ ಹೋರಾಡಬೇಕಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಅನುಭವ ಮಂಟಪ ಆಗಬೇಕೆನ್ನುವುದು ಚನ್ನಬಸವ ಪಟ್ಟದ್ದೇವರು, ನಮ್ಮ ತಂದೆ ಮಾಜಿ ಸಚಿವ ಭೀಮಣ್ಣ ಖಂಡ್ರೆ ಸೇರಿದಂತೆ ‌‌ಹಲವರ ಆಸೆಯಾಗಿತ್ತು. ಹಿರಿಯರ ಕನಸ್ಸಿನಂತೆ ನಮ್ಮ ಸರ್ಕಾರ ಆ ಕೆಲಸ ಮಾಡುತ್ತಿದೆ. ಈಗಾಗಲೇ ₹350 ಕೋಟಿ ಖರ್ಚಾಗಿದೆ. 750 ಕಂಬಗಳ ಮೇಲೆ ವಿವಿಧ ವೃತ್ತಿಗಳ ಶರಣರ ವಚನಗಳನ್ನು ಕೆತ್ತನೆ ಮಾಡಲಾಗುವುದು. ಎಲ್ಲ ಶರಣರ ಪರಿಚಯಿಸಲು ಶರಣ ಗ್ರಾಮ ಕೂಡ ಅಲ್ಲಿ ನಿರ್ಮಾಣವಾಗಲಿದೆʼ ಎಂದು ಹೇಳಿದರು.

ʼಯುವಕರಿಗೆ ಉತ್ತಮ ಸಂಸ್ಕಾರ ಕೊಟ್ಟು ದಾರ್ಶನಿಕರ ವಿಚಾರಗಳನ್ನು ಬಿತ್ತಬೇಕು. ಈ ದೃಷ್ಟಿಯಿಂದ ಅನುಭವ ಮಂಟಪದಲ್ಲಿ ಐಐಎಸ್‌ಸಿ ಸಂಶೋಧಕರ ನೆರವಿನೊಂದಿಗೆ ವೈಜ್ಞಾನಿಕವಾಗಿ ಇಷ್ಟಲಿಂಗ ಪೂಜೆಗೆ ತರಬೇತಿ ಕೊಡುವ ಕೇಂದ್ರ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ. ಯುವಕರಲ್ಲಿ ಏಕಾಗ್ರತೆ ಮೂಡಿಸಲು ಯೋಜನೆ ರೂಪಿಸಲಾಗಿದೆ. ಯುವಕರಿಗೆ ಸಂಸ್ಕಾರ ಕೊಟ್ಟು, ಪ್ರೀತಿ, ಸಹೋದರತೆ ಬಿತ್ತುವ ಕೆಲಸ ಮಾಡಲಾಗುವುದುʼ ಎಂದು ತಿಳಿಸಿದರು.

ಉಪನ್ಯಾಸ ನೀಡಿದ ಸಾಹಿತಿ ಕಾವ್ಯಶ್ರೀ ಮಹಾಗಾಂವಕರ ವಿಶೇಷ ಉಪನ್ಯಾಸ ನೀಡಿದರು. ಬಸವ ಸೇವಾ ಪ್ರತಿಷ್ಠಾನದ ಅಧ್ಯಕ್ಷೆ ಗಂಗಾಂಬಿಕಾ ಅಕ್ಕ ಮಾತನಾಡಿದರು.

ಹರಳಯ್ಯ ಸಮಾಜದ ಪ್ರಧಾನ ಕಾರ್ಯದರ್ಶಿ ರಾಜಕುಮಾರ ಟಿಳೇಕರ ಹಲಬರ್ಗಾ ಅಧ್ಯಕ್ಷತೆ ವಹಿಸಿದ್ದರು. ಗ್ಯಾರಂಟಿ ಯೋಜನೆಯಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಅಮೃತರಾವ್‌ ಚಿಮಕೋಡೆ, ಬುಡಾ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಗುರುನಾನಕ ಶಿಕ್ಷಣ ಸಂಸ್ಥೆ ಅಧ್ಯಕ್ಷ ಬಲಬೀರ್‌ ಸಿಂಗ್‌, ಬಸವ ಕೇಂದ್ರದ ಅಧ್ಯಕ್ಷ ಶರಣಪ್ಪ ಮಿಠಾರೆ, ಮರಾಠ ಸಮಾಜದ ಅಶೋಕ ಸೋನಜಿ, ಲಿಂಗಾಯತ ಸಮಾಜ ಯುವ ಒಕ್ಕೂಟದ ಅಧ್ಯಕ್ಷ ಆನಂದ ದೇವಪ್ಪ, ಮುಖಂಡರಾದ ಬಸವಕುಮಾರ ಪಾಟೀಲ, ಅನಿಲಕುಮಾರ ಬೆಲ್ದಾರ, ರಮೇಶ ಡಾಕುಳಗಿ, ದೇವಿದಾಸ ತುಮಕುಂಟೆ, ದಿಗಂಬರ ಮಡಿವಾಳ, ಜಗನ್ನಾಥ ತಡಪಳ್ಳಿ, ತುಕಾರಾಮ ಚಿಮಕೋಡೆ, ಡಾ.ರಾಜಶೇಖರ ಸೇಡಂಕರ, ಶಾಮರಾವ್‌ ಮೋರ್ಗಿಕರ್‌, ತಾನಾಜಿ ಸಗರ, ಸಂಗಯ್ಯ ಸುಲ್ತಾನಪೂರೆ, ಓಂರೆಡ್ಡಿ ಸೇರಿದಂತೆ ವಿವಿಧ ಸಮುದಾಯಗಳ ಅಧ್ಯಕ್ಷರು, ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಇದನ್ನೂ ಓದಿ : ಬೀದರ್‌ | ಪತ್ರಿಕೋದ್ಯಮ ಅಧ್ಯಯನದಿಂದ ಸಾಮಾಜಿಕ ಹೊಣೆಗಾರಿಕೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...