ಬೀದರ್‌ | ನಮ್ಮ ಕರ್ನಾಟಕ ಸೇನೆ ವಾರ್ಷಿಕೋತ್ಸವ: ಭಿತ್ತಿ ಪತ್ರ ಬಿಡುಗಡೆ

Date:

ಬೆಂಗಳೂರಿನಲ್ಲಿ 2026ರ ಜ.18 ರಂದು ನಡೆಯಲಿರುವ ನಮ್ಮ ಕರ್ನಾಟಕ ಸೇನೆಯ ಮೂರನೇ ವಾರ್ಷಿಕೋತ್ಸವದ ಭಿತ್ತಿ ಪತ್ರವನ್ನು ಬೀದರ್ ನಗರದ ಸೇನೆಯ ಜಿಲ್ಲಾ ಘಟಕದ ಕಚೇರಿಯಲ್ಲಿ ಬುಧವಾರ ಬಿಡುಗಡೆ ಮಾಡಲಾಯಿತು.

‌ʼಬೆಂಗಳೂರಿನಲ್ಲಿ ಸೇನೆಯ ವಾರ್ಷಿಕೋತ್ಸವ ಅದ್ಧೂರಿಯಾಗಿ ಜರುಗಲಿದೆʼ ಎಂದು ಭಿತ್ತಿ ಪತ್ರ ಬಿಡುಗಡೆ ಮಾಡಿದ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ ಪಾಟೀಲ ಜ್ಯಾಂತಿ ತಿಳಿಸಿದರು.

ವಾರ್ಷಿಕೋತ್ಸವ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಕಾಯಕಯೋಗಿ ಬಸವಣ್ಣ, ದಕ್ಷಿಣ ಪಥೇಶ್ವರ ಇಮ್ಮಡಿ ಪುಲಕೇಶಿ, ನಾಡಪ್ರಭು ಕೆಂಪೇಗೌಡ, ಕಿತ್ತೂರು ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ಸರ್.ಎಂ.ವಿಶ್ವೇಶ್ವರಯ್ಯ, ದ.ರಾ.ಬೇಂದ್ರೆ, ಪ್ರೊ. ಎಂ.ಡಿ.ನಂಜುಂಡಸ್ವಾಮಿ, ಬಿ.ಆರ್ ರಾಮಣ್ಣ, ವೀರೇಂದ್ರ ಪಾಟೀಲ, ಡಾ.ರಾಜಕುಮಾರ, ಸಿ.ಅಶ್ವಥ್ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇಂದ್ರ ಸಚಿವರು, ಮುಖ್ಯಮಂತ್ರಿ, ರಾಜ್ಯದ ಸಚಿವರು, ಸಾಹಿತಿಗಳು, ಗಣ್ಯರು, ಸಂಘ-ಸಂಸ್ಥೆಗಳ ಪ್ರಮುಖರು ಪಾಲ್ಗೊಳ್ಳಲಿದ್ದಾರೆ. ಜಿಲ್ಲೆಯ ಸೇನೆಯ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಡಾ. ಪಟ್ಟದ್ದೇವರಿಗೆ ಕಾಯಕ ಯೋಗಿ ಬಸವಣ್ಣ ಪ್ರಶಸ್ತಿ :

ಬಸವಕಲ್ಯಾಣದ ಅನುಭವ ಮಂಟಪದ ಅಧ್ಯಕ್ಷ ಡಾ. ಬಸವಲಿಂಗ ಪಟ್ಟದ್ದೇವರಿಗೆ ನಮ್ಮ ಕರ್ನಾಟಕ ಸೇನೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಕಾಯಕ ಯೋಗಿ ಬಸವಣ್ಣ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಪ್ರಶಸ್ತಿಯು 25 ಸಾವಿರ ರೂ. ನಗದು, ಪ್ರಶಸ್ತಿ ಪತ್ರ ಹಾಗೂ ಫಲಕ ಒಳಗೊಂಡಿದೆ ಎಂದು ಎಂದು ಸೇನೆಯ ಜಿಲ್ಲಾಧ್ಯಕ್ಷ ಗಣೇಶ ಪಾಟೀಲ ತಿಳಿಸಿದರು.

ಪದಾಧಿಕಾರಿಗಳ ಆಯ್ಕೆ:

ನಮ್ಮ ಕರ್ನಾಟಕ ಸೇನೆ ಜಿಲ್ಲಾ ಘಟಕ: ಉದಯಕುಮಾರ ಅಷ್ಟೂರೆ, ರಾಜಕುಮಾರ ಜಮಾದಾರ್ (ಉಪಾಧ್ಯಕ್ಷರು), ರಾಕೇಶ್ ಕುರುಬಖೇಖಗಿ (ಸಂಘಟನಾ ಕಾರ್ಯದರ್ಶಿ). ಕಮಲನಗರ ತಾಲ್ಲೂಕು ಘಟಕ: ಸಂತೋಷ್ ಬಿರಾದಾರ (ಅಧ್ಯಕ್ಷ). ಸೇನೆಯ ಜಿಲ್ಲಾ ಘಟಕದ ಉಪಾಧ್ಯಕ್ಷರಾದ ರಾಜಕುಮಾರ ಪಾಟೀಲ, ಪ್ರದೀಪ್ ಪಾಟೀಲ, ರವಿ ಪಾಟೀಲ, ಭಾಲ್ಕಿ ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜ ಕಾರಬಾರಿ, ಔರಾದ್ ತಾಲ್ಲೂಕು ಘಟಕದ ಅಧ್ಯಕ್ಷ ಬಾಲಾಜಿ ದಾಮ, ಬೀದರ್ ನಗರ ಘಟಕದ ಅಧ್ಯಕ್ಷ ಸಂತೋಷ್ ಪಾಟೀಲ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...