ಬೀದರ್‌ | ಪಿಡಿಒಗಳು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಿ : ಸಿಇಒ ಗಿರೀಶ ಬದೋಲೆ

Date:

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಗ್ರಾಮೀಣ ಭಾಗದ ಜನರೊಂದಿಗೆ ನಿತ್ಯ ವ್ಯವಹರಿಸುವ ಇಲಾಖೆಯಾಗಿದ್ದು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ಜನರ ಸಮಸ್ಯೆಗಳಿಗೆ ಸ್ಪಂದಿಸಿ ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯತಿ ಸಿಇಒ ಡಾ.ಗಿರೀಶ ಬದೋಲೆ ಹೇಳಿದರು.

ಔರಾದ್ ತಾಲೂಕಾ ಪಂಚಾಯತಿಯ ಸಭಾಂಗಣದಲ್ಲಿ ಗುರುವಾರ ಔರಾದ ಮತ್ತು ಕಮಲನಗರ ತಾಲೂಕುಗಳ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಅನುಷ್ಠಾನ ಇಲಾಖೆಯ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ʼಗ್ರಾಮ ಪಂಚಾಯತಿಗಳು ಜನರ ಪಾಲ್ಗೊಳ್ಳುವಿಕೆಯ ಜನಾಡಳಿತದ ಕೇಂದ್ರಗಳಾಗಬೇಕು. ಗ್ರಾಮೀಣ ಪ್ರದೇಶದ ಪ್ರತಿಯೊಬ್ಬರೂ ಗ್ರಾಮ ಪಂಚಾಯತಿ ಬಗ್ಗೆ ʼನಮ್ಮ ಪಂಚಾಯತಿ-ನಮ್ಮ ಹೆಮ್ಮೆʼ ಎಂದು ಭಾವಿಸುವಂತೆ ಕರ್ತವ್ಯ ನಿರ್ವಹಿಸಬೇಕು. ತೆರಿಗೆ ವಸೂಲಾತಿಯ ಸಂದರ್ಭದಲ್ಲಿ ಜನರ ಸಂಕಷ್ಟಗಳು ಅರ್ಥಮಾಡಿಕೊಂಡು ತೆರಿಗೆ ವಸೂಲಿ ಮಾಡಬೇಕುʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 09 11 at 5.36.24 PM
ಸಭೆಯಲ್ಲಿ ವಿವಿಧ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಪಾಲ್ಗೊಂಡಿದ್ದರು.

ʼಭಾರಿ ಮಳೆಯಿಂದ ಕೆಲಸ ಕಳೆದುಕೊಂಡ ಬಡ ಕುಟುಂಬಸ್ಥರು ತೆರಿಗೆ ಪಾವತಿಸಲು ಕಾಲಾವಕಾಶ ಕೇಳಿದರೆ ಸ್ಪಂದಿಸಬೇಕು. ಕಾರ್ಖಾನೆ, ಸಣ್ಣ ಉದ್ಯಮ, ಅಂಗಡಿ, ಹೊಟೆಲ್‌, ಮದ್ಯ ಅಂಗಡಿಗಳಂತಹ ವಾಣಿಜ್ಯ ಸಂಸ್ಥೆಗಳಿಂದ ತೆರಿಗೆ ವಸೂಲು ಮಾಡಬೇಕು. ವಸೂಲಾದ ತೆರಿಗೆಯಲ್ಲಿ ಗ್ರಂಥಾಲಯ ಸೆಸ್ ತುಂಬಬೇಕು. ಮನರೇಗಾ ಯೋಜನೆಯಡಿ ಕೂಲಿಕಾರರಿಗೆ ಕೆಲಸ ಕೊಡಬೇಕು. ಎನ್‌ಎಂಎಂಎಸ್ ಭಾವಚಿತ್ರಗಳು ದುರ್ಬಳಕೆ ಆಗದಂತೆ ಎಚ್ಚರವಹಿಸಿ, ಪೂರ್ಣಗೊಂಡ ಕಾಮಗಾರಿಗಳ ಸರ್ಟಿಫಿಕೇಟ್ ಹಾಕಬೇಕುʼ ಎಂದು ನಿರ್ದೇಶಿಸಿದರು.

ʼಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಬಾಕಿ ಫಲಾನುಭವಿಗಳ ಆಯ್ಕೆ ಮತ್ತು ಜಿಪಿಎಸ್ ಪ್ರಕ್ರಿಯೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಸ್ವಚ್ಛ ಭಾರತ ಯೋಜನೆಯಡಿ ಪ್ರಗತಿಯಲ್ಲಿರುವ ವೈಯಕ್ತಿಕ ಶೌಚಾಲಯಗಳು ಶೀಘ್ರವಾಗಿ ಮುಕ್ತಾಯಗೊಳಿಸಬೇಕು. ಬೂದು ನೀರು ನಿರ್ವಹಣಾ ಘಟಕಗಳ ಕಾಮಗಾರಿಗಳನ್ನು ಶೀಘ್ರ ಪ್ರಾರಂಭಿಸಬೇಕು. ಪ್ಲಾಸ್ಟಿಕ್, ಮಲತ್ಯಾಜ್ಯ ವಿಲೆವಾರಿ ಘಟಕಗಳ ನಿರ್ಮಾಣ ಕಾರ್ಯ ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಕ್ರಮಕೈಗೊಳ್ಳಬೇಕು’ ಎಂದು ಸೂಚಿಸಿದರು.

ಇದನ್ನೂ ಓದಿ : ಬೀದರ್‌ | ವರದಕ್ಷಿಣೆ ಕಿರುಕುಳ ಆರೋಪ : ಗಂಡ, ಮಾವ, ಅತ್ತೆ ಸೇರಿ 6 ಮಂದಿ ವಿರುದ್ಧ ಎಫ್‌ಐಆರ್

ಸಭೆಯಲ್ಲಿ ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಮುಕ್ಕಣ್ಣ ಕರಿಗಾರ, ಯೋಜನಾ ನಿರ್ದೇಶಕ ಸೂರ್ಯಕಾಂತ ಬಿರಾದರ, ಸಹಾಯಕ ಕಾರ್ಯದರ್ಶಿ ಬೀರೇಂದ್ರಸಿಂಗ್ ಠಾಕೂರ್, ಆಡಳಿತ ವಿಭಾಗದ ಸಹಾಯಕ ನಿರ್ದೇಶಕ ಜಯಪ್ರಕಾಶ ಚೌಹಾಣ್, ಔರಾದ ತಾಲೂಕಾ ಪಂಚಾಯತಿ ಇಒ ಕಿರಣ ಪಾಟೀಲ್, ಕಮಲನಗರ ತಾಲೂಕಾ ಪಂಚಾಯತಿ ಇಒ ಹನುಮಂತರಾಯ ಕೌಟಗೆ, ಸಹಾಯಕ ನಿರ್ದೇಶಕ ಶಿವಕುಮಾರ್ ಘಾಟೆ, ನರೇಗಾ ಎಡಿಪಿಸಿ ದೀಪಕ್ ಕಡಿಮನಿ ಸೇರಿದಂತೆ ಅವಳಿ ತಾಲೂಕುಗಳ ಪಂಚಾಯತ್ ರಾಜ್ ಇಂಜನಿಯರಿಂಗ್ ಮತ್ತು ಗ್ರಾಮೀಣ ಕುಡಿಯುವ ನೀರು ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರು, ವಿವಿಧ ಇಲಾಖೆಗಳ ತಾಲೂಕಾ ಮಟ್ಟದ ಅಧಿಕಾರಿಗಳು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...