ಡ್ರೋನ್‌ ಕ್ಯಾಮೆರಾ ಬಳಸಿ ₹8.12 ಲಕ್ಷ ಮೌಲ್ಯದ ಗಾಂಜಾ ಪತ್ತೆ ಹಚ್ಚಿದ ಬೀದರ್ ಪೊಲೀಸರು

Date:

ಔರಾದ್‌ ತಾಲ್ಲೂಕಿನ ಚಿಂತಾಕಿ ಪೊಲೀಸ್ ಠಾಣೆ ವ್ಯಾಪ್ತಿಯ ಕರಂಜಿ(ಬಿ) ಗ್ರಾಮದ ರೈತರೊಬ್ಬರು ಹೊಲದಲ್ಲಿ ಹತ್ತಿ ಬೆಳೆ ಮಧ್ಯೆ ಬೆಳೆದಿದ್ದ ₹8‌.12 ಲಕ್ಷ ಗಾಂಜಾವನ್ನು ಜಿಲ್ಲಾ ಪೊಲೀಸರು ಡ್ರೋನ್‌ ಕ್ಯಾಮೆರಾ ಮೂಲಕ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಹೊಲದಲ್ಲಿ ಬೆಳೆಗಳ ನಡುವೆ ಗಾಂಜಾ‌ ಸಸಿ ನಾಟಿ‌ ಮಾಡಿ ಬೆಳೆದರೆ ಯಾರಿಗೂ ಗೊತ್ತಾಗುವುದಿಲ್ಲ. ಕದ್ದು ಮುಚ್ಚಿ ಮಾರಾಟ ಮಾಡಬಹುದು ಎಂಬ ಉದ್ದೇಶದಿಂದ ರೈತರೊಬ್ಬರು ಅಕ್ರಮವಾಗಿ 46 ಗಾಂಜಾ ಗಿಡಗಳನ್ನು ಬೆಳೆದಿದ್ದರು.

ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ ಗುಂಟಿ, ಡಿಸಿಆರ್‌ಬಿ ಘಟಕ ಪಿಎಸ್‌ಐ ಅಂಬ್ರೀಶ್‌ ವಾಘಮೋರೆ, ಚಿಂತಾಕಿ ಠಾಣೆ ಪಿಎಸ್‌ಐ ಚಂದ್ರಶೇಖರ ನಿರ್ಣೆ ಅವರ ನೇತ್ರತ್ವದಲ್ಲಿ ಮಂಗಳವಾರ ಬೆಳಿಗ್ಗೆ ದಾಳಿ ನಡೆಸಿ, ಡ್ರೋನ್ ಕ್ಯಾಮರಾ ಬಳಸಿ ಗಾಂಜಾ ಗಿಡಗಳನ್ನು ಪತ್ತೆ ಹಚ್ಚಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಹತ್ತಿ ಬೆಳೆಯ ಮಧ್ಯೆ ಅಕ್ರಮವಾಗಿ ಬೆಳೆದಿದ್ದ ₹8.12 ಲಕ್ಷ ಮೌಲ್ಯದ 8.120 ಕೆಜಿ ಗಾಂಜಾದ 46 ಗಿಡಗಳನ್ನು ಪತ್ತೆಯಾಗಿವೆ. ಗಾಂಜಾ ಬೆಳೆದ ಆರೋಪಿತನ ವಿರುದ್ಧ ಚಿಂತಾಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆʼ ಎಂದು ಎಸ್ಪಿ ಪ್ರದೀಪ ಗುಂಟಿ ತಿಳಿಸಿದ್ದಾರೆ.

ʼಕೆಲವರು ಪೊಲೀಸರ ಕಣ್ಣು ತಪ್ಪಿಸಿ ಕಾನೂನು ಬಾಹಿರ ಕೆಲಸಕ್ಕೆ‌ ಕೈ ಹಾಕುತ್ತಾರೆ. ನಮ್ಮ ಇಲಾಖೆಗೆ ಎಲ್ಲಿ ಅಕ್ರಮ ನಡೆಯುತ್ತದೆ ಎನ್ನುವ ಬಗ್ಗೆ ಮಾಹಿತಿ ಇರುತ್ತದೆ. ಕೃಷಿ ಜಮೀನುಗಳಲ್ಲಿ ನಿಷೇಧಿತ ಬೆಳೆಗಳನ್ನು ಬೆಳೆಯಬಾರದು. ಮಾದಕ ವಸ್ತು ಚಟುವಟಿಕೆಗಳು ಕಂಡು ಬಂದಲ್ಲಿ ಸಾರ್ವಜನಿಕರು ಮಾಹಿತಿ ನೀಡಿ, ಬೀದರ್ ವ್ಯಸನ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಪ್ರಯತ್ನಿಸಲಾಗುತ್ತಿದೆ. ಕಾನೂನು ಬಾಹಿರವಾಗಿ ಅಕ್ರಮ ಚಟುವಟಿಕೆಗಳಲ್ಲಿ ನಡೆಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುತ್ತದೆʼ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ : ಬೀದರ್‌ | ಮಧ್ಯಪ್ರದೇಶದಿಂದ ಗಾಂಜಾ ಖರೀದಿ : 43 ಕೆಜಿ ಗಾಂಜಾದೊಂದಿಗೆ ಸಿಕ್ಕಿಬಿದ್ದ ಮಹಿಳೆ ಪೊಲೀಸರ ವಶಕ್ಕೆ

ಕಾರ್ಯಾಚರಣೆಯಲ್ಲಿ ಡಿಎಸ್‌ಬಿ ಘಟಕದ ಎಎಸ್‌ಐ ಗುಂಡಪ್ಪಾ ರೆಡ್ಡಿ, ಸಿಬ್ಬಂದಿ ಸಂತೋಷ, ರಾಜಕುಮಾರ್‌, ಸಂತೋಷ ಹಾಘೂ ಚಿಂತಾಕಿ ಪೊಲೀಸ್‌ ಠಾಣೆಯ ಸಿಬ್ಬಂದಿಗಳಾದ ಸಿದ್ದೇಶ್ವರ, ಶ್ರೀಪತಿ, ಗೋರಖ, ಸದೋಜಾತ, ಸಂತೋಷ, ಮಾಣಿಕ ಮತ್ತಿತರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...