ಬೀದರ್‌ | ಪಾಲಿಟೆಕ್ನಿಕ್ ಅತಿಥಿ ಉಪನ್ಯಾಸಕರ ಸೇವೆ ಕಾಯಂಗೆ ಆಗ್ರಹ

Date:

ರಾಜ್ಯದ ಸರ್ಕಾರಿ ಪಾಲಿಟೆಕ್ನಿಕ್‍ಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಸೇವೆ  ಕಾಯಂಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ಪಾಲಿಟೆಕ್ನಿಕ್ ಅರೆಕಾಲಿಕ ಉಪನ್ಯಾಸಕರ ಸಂಘದ ಜಿಲ್ಲಾ ಘಟಕ ಆಗ್ರಹಿಸಿದೆ.

ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಬುಧವಾರ ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ ಅವರ ಹೆಸರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಸಲ್ಲಿಸಿದರು.

ʼರಾಜ್ಯ ಸರ್ಕಾರ ಪಾಲಿಟೆಕ್ನಿಕ್‍ಗಳಿಗೆ 2 ಸಾವಿರ ಪೂರ್ಣಾವಧಿ ಉಪನ್ಯಾಸಕರ ನೇಮಕಕ್ಕೆ ನಿರ್ಧರಿಸಿರುವುದು ಸ್ವಾಗತಾರ್ಹ. ಆದರೆ, ಈ ಪೈಕಿ 1,600 ಹುದ್ದೆಗಳಿಗೆ ಮಾನವೀಯತೆ ಆಧಾರದಲ್ಲಿ ಈಗಾಗಲೇ ರಾಜ್ಯದ 102 ಪಾಲಿಟೆಕ್ನಿಕ್‍ಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ನೇಮಕಗೊಳಿಸಬೇಕು. ಉಳಿದ 400 ಹುದ್ದೆಗಳಿಗೆ ನಿಯಮಾನುಸಾರ ನೇಮಕಾತಿ ಪ್ರಕ್ರಿಯೆ ನಡೆಸಬೇಕುʼ ಎಂದು ಬೇಡಿಕೆ ಮಂಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಅತಿಥಿ ಉಪನ್ಯಾಸಕರ ಪೈಕಿ ಹಲವರ ವಯೋಮಿತಿ ಮೀರಿದೆ. ಇನ್ನೂ ಕೆಲವರ ವಯೋಮಿತಿ ಮೀರುವ ಹಂತದಲ್ಲಿದೆ. ಹೀಗಾಗಿ ಸರ್ಕಾರಿ ಹುದ್ದೆಗೆ ಅರ್ಜಿ ಸಲ್ಲಿಸಿ ಹುದ್ದೆ ಪಡೆಯಲು ಸಾಧ್ಯವಾಗುತ್ತಿಲ್ಲ. ಅತಿಥಿ ಉಪನ್ಯಾಸಕರು 2 ವರ್ಷದಿಂದ 20 ವರ್ಷಗಳ ಅವಧಿಯಿಂದ ಸೇವೆ ಸಲ್ಲಿಸುತ್ತಿದ್ದಾರೆ. ವರ್ಗಾವಣೆಗೊಂಡ ಇಲ್ಲವೇ ಹೊಸದಾಗಿ ನೇಮಕಗೊಂಡ ಪೂರ್ಣಾವಧಿ ಉಪನ್ಯಾಸಕರು ಬಂದರೆ ಹುದ್ದೆಯಿಂದ ಬಿಡುಗಡೆಗೊಳಿಸಲಾಗುತ್ತಿದೆʼ ಎಂದು ತಿಳಿಸಿದರು.

ʼನೆರೆಯ ತೆಲಂಗಾಣ, ಮಹಾರಾಷ್ಟ್ರ, ಹರಿಯಾಣ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಅತಿಥಿ ಉಪನ್ಯಾಸಕರಿಗೆ ಬೇಸಿಕ್ ಸ್ಟೇಟ್ ಸ್ಕೇಲ್ ಹಾಗೂ ಸೇವಾ ಭದ್ರತೆ ಕೊಡಲಾಗಿದೆ. ಆದರೆ, ರಾಜ್ಯದಲ್ಲಿ ಮಾತ್ರ ಒದಗಿಸಲಾಗಿಲ್ಲʼ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಅನ್ನದಾತರ ಸಾವಿಗೆ ಕೊನೆಯಿಲ್ಲ : 5 ವರ್ಷಗಳಲ್ಲಿ 100 ದಾಟಿದ ರೈತರ ಆತ್ಮಹತ್ಯೆ ಸಂಖ್ಯೆ

ಸಂಘದ ರಾಜ್ಯ ಅಧ್ಯಕ್ಷ ಪ್ರವೀಣಕುಮಾರ ಮೀರಾಗಂಜಕರ್, ಜಿಲ್ಲಾ ಘಟಕದ ಸಂಘಟನಾ ಕಾರ್ಯದರ್ಶಿ ಶರಣಬಸಪ್ಪ ವಾಲಿ, ಜಂಟಿ ಕಾರ್ಯದರ್ಶಿ ಸಂತೋಷ್ ಲದ್ದೆ, ಪ್ರಮುಖರಾದ ಎಂ.ಡಿ. ಯುನೂಸ್, ಸಂದೀಪ್ ಕುಲಕರ್ಣಿ, ಸಚಿನ್ ಚಿಟ್ಮೆ, ಹಸ್ನಾ ಜಬೀನ್, ನಜ್ಮಾ ಆಫ್ರೀನ್, ಕೀರ್ತಿ, ಗೋದಾವರಿ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...