ಬೀದರ್‌ | ಸಿಸಿ ರಸ್ತೆ ಕಾಮಗಾರಿ ಕಳಪೆ : ಪ್ರಾದೇಶಿಕ ಆಯುಕ್ತರಿಗೆ ನಮ್ಮ ಕರ್ನಾಟಕ ಸೇನೆ ದೂರು

Date:

ಬೀದರ್ ಜಿಲ್ಲೆಯ ಹುಲಸೂರು ತಾಲ್ಲೂಕಿನ ಗಡಿಗೌಡಗಾಂವ್‍ನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ₹ 90 ಲಕ್ಷ ವೆಚ್ಚದಲ್ಲಿ ನಿರ್ಮಿಸುತ್ತಿರುವ ಸಿಸಿ ರಸ್ತೆ ಕಾಮಗಾರಿ ಕಳಪೆಯಾಗಿದೆ ಎಂದು ನಮ್ಮ ಕರ್ನಾಟಕ ಸೇನೆ ದೂರಿದೆ.

ಸೇನೆಯ ಜಿಲ್ಲಾ ಘಟಕದ ಪದಾಧಿಕಾರಿಗಳು ಕಲಬುರಗಿಯಲ್ಲಿ ಪ್ರಾದೇಶಿಕ ಆಯುಕ್ತರಿಗೆ ಈ ಕುರಿತು ಮನವಿ ಪತ್ರ ಸಲ್ಲಿಸಿದ್ದಾರೆ.

ʼನಿರ್ಮಿತಿ ಕೇಂದ್ರದಿಂದ ಮಣ್ಣು ಅಗೆಯದೆ ಸಿಸಿ ರಸ್ತೆ ನಿರ್ಮಾಣ ಕಾಮಗಾರಿ ಆರಂಭಿಸಲಾಗಿದೆ. ಕಳಪೆ ಕಾಮಗಾರಿಗೆ ಸಂಬಂಧಿಸಿದಂತೆ ದೂರು ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಕಳಪೆ ಕಾಮಗಾರಿಯಲ್ಲಿ ನಿರ್ಮಿತಿ ಕೇಂದ್ರದ ಎಂಜಿನಿಯರ್ ಶೇಖ ಅಮೀರ್ ಅವರು ಶಾಮೀಲಾಗಿದ್ದಾರೆ. ಕಾಮಗಾರಿಯಲ್ಲಿ ಕೇವಲ ವ್ಯವಸ್ಥಾಪಕರನ್ನು ಬಲಿ ಪಶು ಮಾಡಲಾಗಿದೆʼ ಎಂದು ಆಪಾದಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಜಿಲ್ಲೆಯಲ್ಲಿ ನಿರ್ಮಿತಿ ಕೇಂದ್ರದಿಂದ ನಡೆಯುವ ಎಲ್ಲ ಕಾಮಗಾರಿಗಳು ಕಳಪೆಯಾಗಿವೆ. ಕೇಂದ್ರದವರು ನಕಲಿ ಕಾಮಗಾರಿಗಳ ಜನಕರಾಗಿದ್ದಾರೆ. ಔರಾದ್ (ಬಿ) ಪಟ್ಟಣದ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ, ಬೀದರ್‍ನ ಚಿಕ್ಕಪೇಟೆಯ ಇವಿಎಂ ವೇರ್ ಹೌಸ್, ಬಸವಕಲ್ಯಾಣದ ರೈತ ಭವನಗಳು ಕಳಪೆ ಕಾಮಗಾರಿಗೆ ನಿದರ್ಶನವಾಗಿವೆ. ಕೇಂದ್ರದಲ್ಲಿ ಹಗರಣ ನಡೆಯುತ್ತಿದ್ದರೂ ಮೇಲಧಿಕಾರಿಗಳು ಕ್ರಮ ಜರುಗಿಸುತ್ತಿಲ್ಲʼ ಎಂದು ದೂರಿದರು.

ಕೂಡಲೇ ತಂಡ ರಚಿಸಿ ನಿರ್ಮಿತಿ ಕೇಂದ್ರ ಕಾಮಗಾರಿಗಳ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಬ್ಯಾಸಕಿ ಬಂತಂದ್ರೆ ಈ ತಾಲೂಕಿನ್ಯಾಗ ಹಿಂಗ್ಯಾಕ್ ನೀರಿಗೆ ಬರ?

ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ ಪಾಟೀಲ, ಪ್ರಧಾನ ಕಾರ್ಯದರ್ಶಿ ಸಂಜು ಯಾದವ್, ಬೀದರ್ ತಾಲ್ಲೂಕು ಅಧ್ಯಕ್ಷ ಅನಿಲ್ ರಾಜಗೀರಾ, ಬೀದರ್ ನಗರ ಘಟಕದ ಅಧ್ಯಕ್ಷ ಸಂತೋಷ ಪಾಟೀಲ, ಕೃಷ್ಣ ತೆಲಂಗ್ ಇದ್ದರು.

6378a520579666f153c2fe302416fd40eb44392fa3ff3c717bc425bc472039bf?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...