ಬೀದರ್‌ | ಬ್ರಿಮ್ಸ್‌ ಆಸ್ಪತ್ರೆಯಲ್ಲಿ ವಿದ್ಯುತ್‌ ವ್ಯತ್ಯಯ ಘಟನೆ : ಆಸ್ಪತ್ರೆಗೆ ಸಚಿವದ್ವಯರ ದಿಡೀರ್ ಭೇಟಿ

Date:

ಬೀದರ‌ ನಗರದ ಬ್ರಿಮ್ಸ್‌ ಆಸ್ಪತ್ರೆಯಲ್ಲಿ ಈಚೆಗೆ ವಿದ್ಯುತ್ ವ್ಯತ್ಯಯದಿಂದ ರೋಗಿಗಳಿಗೆ ತೊಂದರೆ ಉಂಟಾದ ಘಟನೆ ವರದಿಯಾದ ಬೆನ್ನಲ್ಲೇ ಶುಕ್ರವಾರ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹಾಗೂ ಪೌರಾಡಳಿತ ಸಚಿವ ರಹೀಂ ಖಾನ್ ಆಸ್ಪತ್ರೆಗೆ ಧಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆಸ್ಪತ್ರೆಯಲ್ಲಿನ ರೋಗಿಗಳೊಂದಿಗೆ ನೇರವಾಗಿ ಸಂವಾದ ನಡೆಸಿ, ಅವರು ಪಡೆಯುತ್ತಿರುವ ಚಿಕಿತ್ಸೆ ಹಾಗೂ ವೈದ್ಯರು ಹಾಗೂ ಸಿಬ್ಬಂದಿಯಿಂದ ಆಸ್ಪತ್ರೆಯೊಳಗಿನ ಸಮಸ್ಯೆಗಳ ಬಗ್ಗೆ ಸಚಿವರು ಸಂಪೂರ್ಣ ಮಾಹಿತಿ ಸಂಗ್ರಹಿಸಿದರು.‌

WhatsApp Image 2025 07 18 at 1.16.37 PM

ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಮಾತನಾಡಿ, ʼವಿದ್ಯುತ್ ವ್ಯತ್ಯಯದಿಂದ ಉಂಟಾದ ತೊಂದರೆ ನಿರ್ಲಕ್ಷ್ಯದಿಂದಾಗಿದ್ದರೆ, ಅದನ್ನು ಯಾವುದೇ ಕಾರಣಕ್ಕೂ ಕ್ಷಮಿಸಲಾಗದು. ಈ ಕುರಿತು ತಕ್ಷಣ ತನಿಖೆ ನಡೆಸಿ ವರದಿ ಸಲ್ಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ವರದಿ ಬಂದ ತಕ್ಷಣ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದುʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಆಸ್ಪತ್ರೆಯಲ್ಲಿ ಯಾವುದೇ ತೊಂದರೆ ಆಗದಂತೆ ಬೇಕಾದ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಜನರಿಗೆ ಉತ್ತಮ ವೈದ್ಯಕೀಯ ಸೌಲಭ್ಯ ಒದಗಿಸಲು ನಾವು ಬದ್ಧರಾಗಿದ್ದೇವೆʼ ಎಂದು ಹೇಳಿದರು.‌

ಇದನ್ನೂ ಓದಿ : ಬೀದರ್‌ | ಮದ್ಯಪಾನ ಮಾಡಿ ವಾಹನ ಚಾಲನೆ : ಇಬ್ಬರಿಗೆ ದಂಡ ವಿಧಿಸಿದ ನ್ಯಾಯಾಲಯ

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಸಿಇಒ ಡಾ.ಗಿರೀಶ ಬದೋಲೆ, ಬ್ರಿಮ್ಸ್‌ ನಿರ್ದೇಶಕ ಶಿವಕುಮಾರ ಶೆಟಕಾರ್‌ ಸೇರಿದಂತೆ ಬ್ರಿಮ್ಸ್ ಸಿಬ್ಬಂದಿ, ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...