ಬೀದರ್‌ | ವಿಶ್ವಾಸಾರ್ಹತೆ ಉಳಿಸಿಕೊಂಡ ಮುದ್ರಣ ಮಾಧ್ಯಮ : ದೇವಯ್ಯ ಗುತ್ತೇದಾರ್

Date:

ದೃಶ್ಯ ಮಾಧ್ಯಮಗಳ ಭರಾಟೆಯಲ್ಲಿ ಮುದ್ರಣ ಮಾಧ್ಯಮಕ್ಕೆ ಭವಿಷ್ಯವಿಲ್ಲ ಎಂಬ ಮಾತು ಸುಳ್ಳಾಗಿದೆ. ಸುದ್ದಿಯಲ್ಲಿ ನಿಖರತೆ, ಸ್ಪಷ್ಟತೆ, ವಿಶ್ವಾಸಾರ್ಹತೆ ಉಳಿಸಿಕೊಂಡಿರುವ ಕಾರಣಕ್ಕೆ ಮುದ್ರಣ ಮಾಧ್ಯಮ ತನ್ನ ಅಸ್ತಿತ್ವ ಹಾಗೂ ಮಹತ್ವವನ್ನು ಕಾಪಾಡಿಕೊಂಡಿದೆ ಎಂದು ಕಲಬುರಗಿ ವಿಭಾಗದ ವಿಜಯ ಕರ್ನಾಟಕ ಸ್ಥಾನಿಕ ಸಂಪಾದಕ ದೇವಯ್ಯ ಗುತ್ತೇದಾರ್ ಅಭಿಪ್ರಾಯಪಟ್ಟರು.

ಔರಾದ ತಾಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪಟ್ಟಣದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.

ʼಆಧುನಿಕ ತಂತ್ರಜ್ಞಾನದ ಕಾಲಘಟ್ಟದಲ್ಲೂ ಜನರು ಯಾವುದೇ ಮೂಲದ ಸುದ್ದಿಯ ಖಚಿತತೆಗೆ ಮುದ್ರಣ ಮಾಧ್ಯಮ ಮೇಲೆ ಅವಲಂಬಿತರಾಗಿದ್ದಾರೆ. ಇದು ಪತ್ರಿಕೆಗಳ ವಿಶ್ವಾಸಾರ್ಹತೆಗೆ ಸಾಕ್ಷಿಯಾಗಿದೆ. 2000ರಲ್ಲಿ ಕನ್ನಡದ ಒಟ್ಟು ಪತ್ರಿಕೆಗಳ ಪ್ರಸಾರ 4 ಲಕ್ಷ ಇತ್ತು. ಈಗ ಅದರ ಸಂಖ್ಯೆ 44ಲಕ್ಷಕ್ಕೆ ಏರಿಕೆಯಾಗಿದೆ ಎಂಬುದು ಹೆಮ್ಮೆಯ ಸಂಗತಿʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಪತ್ರಕರ್ತರಿಗೆ ಅಧ್ಯಯನದ ಗುಣ ಇಲ್ಲದಿದ್ದರೆ ಅವರಿಂದ ಉತ್ತಮ ಬರಹ ಹೊರಬರಲು ಸಾಧ್ಯವಿಲ್ಲ. ಪತ್ರಕರ್ತರಲ್ಲಿ ಸಾಮಾಜಿಕ ಕಳಕಳಿ, ಪ್ರಾಮಾಣಿಕತೆ ಎಂಬುದು ಬರಹದ ಭಾಗವಾಗಬೇಕು. ಗ್ರಾಮೀಣ ಭಾಗದ ಜನರ ಸಮಸ್ಯೆಗಳಿಗೆ ಧ್ವನಿಯಾದರೆ ಮಾತ್ರ ಜನಪರ ಪತ್ರಕರ್ತ ಎನಿಸಿಕೊಳ್ಳಲು ಸಾಧ್ಯʼ ಎಂದು ಹೇಳಿದರು.

ಮಾಜಿ ವಿಧಾನ ಪರಿಷತ್‌ ಸದಸ್ಯ ವಿಜಯ ಸಿಂಗ್‌ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ʼಸಮಾಜವನ್ನು ತಿದ್ದುವ ಜವಾಬ್ದಾರಿ ಸದಾ ಪತ್ರಕರ್ತರ ಮೇಲೆ ಇದೆ ಎಂಬುದನ್ನು ಮರೆಯುವಂತಿಲ್ಲ. ದೃಶ್ಯ ಮಾಧ್ಯಮಗಳಲ್ಲಿ ಒಂದು ಸುದ್ದಿಯನ್ನು ತಕ್ಷಣ ಬಿತ್ತರಿಸಿದರೂ ಅದರ ಕುರಿತು ಆಳವಾದ ಅಧ್ಯಯನ ನಡೆಸಿ ವಿಸ್ತೃತ ವರದಿ ನೀಡುವಷ್ಟು ವ್ಯವಧಾನ ಇರುವುದಿಲ್ಲ. ಆದರೆ, ಮುದ್ರಣ ಮಾಧ್ಯಮದಲ್ಲಿ ಘಟನೆಯ ಹಲವು ಆಯಾಮಗಳನ್ನು, ವಿಶ್ಲೇಷಣೆಯನ್ನು ನೋಡಲು ಸಾಧ್ಯʼ ಎಂದು ಅಭಿಪ್ರಾಯಪಟ್ಟರು.

ʼಔರಾದ್‌ ತಾಲೂಕಿನ ಜನತೆ ಅತ್ಯಂತ ಸಹೋದರತ್ವ ಗುಣದವರು. ನಾನು ಅನಿರೀಕ್ಷಿತವಾಗಿ ರಾಜಕಾರಣ ಪ್ರವೇಶಿದೆ, ನನ್ನ ರಾಜಕೀಯ ಜೀವನ ಆರಂಭವಾಗಿದ್ದು ಇಲ್ಲಿಂದಲೇ. ಈ ಹಿಂದೆ ವಿಧಾನ ಪರಿಷತ್ ಸದಸ್ಯನಾಗಲು ಇಲ್ಲಿಯ ಜನರ ಕೊಡುಗೆ ಅನನ್ಯ. ಈಗ ನಾನು ಬೇರೆ ಕ್ಷೇತ್ರದಲ್ಲಿದ್ದರೂ ಈ ಕ್ಷೇತ್ರದ ಜನತೆಯ ಸಮಸ್ಯೆಗಳಿಗೆ ಸದಾ ಸ್ಪಂದಿಸುವೆʼ ಎಂದು ತಿಳಿಸಿದರು.

ಸಾನಿಧ್ಯ ವಹಿಸಿದ ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಾತನಾಡಿ, ʼಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪತ್ರಿಕೋದ್ಯಮದ ಕಾರ್ಯ ಅತ್ಯಂತ ಮಹತ್ವದ್ದು. ಸಮಾಜದಲ್ಲಿನ ಅಂಕುಡೊಂಕು ತಿದ್ದುವ ಪತ್ರಕರ್ತರು ನ್ಯಾಯ, ನಿಷ್ಠುರತೆ, ಪ್ರಾಮಾಣಿಕತೆ ಹಾಗೂ ಜನರ ದನಿಯಾಗಬೇಕುʼ ಎಂದು ಹೇಳಿದರು.

ಔರಾದ್ ತಹಸೀಲ್ದಾರ್‌ ಮಹೇಶ ಪಾಟೀಲ್‌ ಮಾತನಾಡಿ, ʼಸಾಮಾಜಿಕ ಮಾಧ್ಯಮಗಳಲ್ಲಿ ಬಂದ ಸುದ್ದಿಗಳನ್ನು ಸಂಶಯದಿಂದ ಕಾಣುವ ಇಂದಿನ ಕಾಲದಲ್ಲಿ ಪತ್ರಿಕೆಗಳಲ್ಲಿ ಮುದ್ರಣವಾದರೆ ಮಾತ್ರ ಜನರು ಹೆಚ್ಚು ನಂಬುತ್ತಾರೆ.‌ ಹಾಗಾಗಿ ಜನಪರ, ಜೀವಪರ ಸುದ್ದಿಗಳ ಮುಖಾಂತರ ಸಮಾಜ ಬದಲಾವಣೆಯ ಹೊಣೆಗಾರಿಕೆ ಪತ್ರಕರ್ತರ ಮೇಲಿದೆʼ ಎಂದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಡಿ.ಕೆ.ಗಣಪತಿ, ಜಿಲ್ಲಾ ಉಪಾಧ್ಯಕ್ಷ ನಾಗಶೆಟ್ಟಿ ಧರಂಪೂರೆ ಮಾತನಾಡಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕಾಧ್ಯಕ್ಷ ಶಿವಾನಂದ ಮೊಕ್ತೆದಾರ್ ಪ್ರಾಸ್ತವಿಕವಾಗಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ (75ನೇ ಜನ್ಮದಿನ) ಅಂಗವಾಗಿ ವಿಜಯ ಕರ್ನಾಟಕ ಕಲಬುರಗಿ ಆವೃತಿಯ ಸ್ಥಾನಿಕ ಸಂಪಾದಕ ದೇವಯ್ಯ ಗುತ್ತೇದಾರ್ ಅವರಿಗೆ ‘ಕನ್ನಡ ಜಂಗಮ’ ಪ್ರಶಸ್ತಿ ಪ್ರದಾನ ನೀಡಿ ಗೌರವಿಸಲಾಯಿತು.

ಇದನ್ನೂ ಓದಿ : ದೇವರಾಜ ಅರಸು ಪ್ರಶಸ್ತಿ | ಅರ್ಹರ ಆಯ್ಕೆಗೆ ಸಮಿತಿ ರಚನೆ, ದ್ವಾರಕನಾಥ್‌ & ಮೇಗಲಕೇರಿ ನೇಮಕ

ಸಮಾರಂಭದಲ್ಲಿ ಪಟ್ಟಣ ಪಂಚಾಯತ್‌ ಅಧ್ಯಕ್ಷೆ ಸರುಬಾಯಿ ಘೂಳೆ, ತಾಲೂಕು ಪಂಚಾಯತ್ ಇಒ ಶಿವಕುಮಾರ ಘಾಟೆ,‌ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯದರ್ಶಿ ಪೃಥ್ವಿರಾಜ್ ಎಸ್, ಹಿರಿಯ ಪತ್ರಕರ್ತ ವಿಜಯಕುಮಾರ ಬೆಲ್ದೆ, ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಸುನಿಲ ಜಿರೋಬೆ ಸೇರಿದಂತೆ ಪತ್ರಕರ್ತರಾದ ಚನ್ನಬಸವ ಮೊಕ್ತೆದಾರ್, ಅನಿಲ ದೇಶಮುಖ, ಅಮರೇಶ್ವರ ಚಿದ್ರೆ, ಬಾಲಾಜಿ ಕುಂಬಾರ, ಸುಧೀರ್ ಪಾಂಡ್ರೆ, ಅಹ್ಮದ್ ಜಂಬಗಿ, ರವಿಕುಮಾರ ಮಠಪತಿ, ರಾಚಯ್ಯ ಸ್ವಾಮಿ, ಸೂರ್ಯಕಾಂತ ಎಕಲಾರ, ಶಿವಕುಮಾರ ಸಾದುರೆ, ರವಿಕುಮಾರ ಶಿಂಧೆ, ವಿನೋದ ಚಿದ್ರೆ, ಪ್ರಭುಲಿಂಗ ಸ್ವಾಮಿ, ರಾಜಕುಮಾರ ಚಾಂಬೊಳೆ ಸೇರಿದಂತೆ‌ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಪತ್ರಕರ್ತ ಮನ್ಮಥಪ್ಪ ಸ್ವಾಮಿ ಸ್ವಾಗತಿಸಿದರು. ರಿಯಾಜ್‌ ಪಾಶ ಕೊಳ್ಳೂರ್‌, ಅಮರ ಸ್ವಾಮಿ ನಿರೂಪಿಸಿದರು. ಮಲ್ಲಪ್ಪ ಗೌಡಾ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...