ಮಕ್ಕಳ ಹಕ್ಕುಗಳನ್ನು ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ ಅವರು ತಿಳಿಸಿದರು.
ಶುಕ್ರವಾರ ನಗರದ ಬಾಲ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಬಾಲ ಭವನ ಸಮಿತಿ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ʼಮಕ್ಕಳಿಗೆ ಶಿಕ್ಷಣ, ಆರೋಗ್ಯ, ರಕ್ಷಣೆ, ಮೂಲಭೂತ ಸೌಕರ್ಯಗಳು ಒದಗಿಸುವಿಕೆ ಸೇರಿದಂತೆ ಅವರ ಎಲ್ಲಾ ಹಕ್ಕುಗಳನ್ನು ಕಾಪಾಡುವುದು ಹಾಗೂ ಉತ್ತಮ ಭವಿಷ್ಯ ರೂಪಿಸುವುದು ಬಹಳ ಮುಖ್ಯವಾಗಿದೆ. ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಜನ್ಮದಿನವನ್ನು ನಾವು ಮಕ್ಕಳ ದಿನಾಚರಣೆ ಎಂದು ಆಚರಣೆ ಮಾಡುತ್ತೆವೆ. ಅವರಿಗೆ ಮಕ್ಕಳ ಮೇಲೆ ಅಗಾಧವಾದ ಪ್ರೀತಿ ಇತ್ತುʼ ಎಂದರು.
ʼಮಕ್ಕಳು ದೇಶದ ಮುಂದಿನ ಭವಿಷ್ಯ ಅವರಾಗಿದ್ದಾರೆ ಹಾಗೂ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗಾಗಿ ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ. ಇಂದಿನ ಮಕ್ಕಳು ಮುಂದೆ ಐಎಎಸ್, ಐಪಿಎಸ್, ವಿಜ್ಞಾನಿಗಳು, ವೈದ್ಯರು , ಶಿಕ್ಷಕರು , ಕ್ರೀಡಾಪಟುಗಳು, ಉದ್ಯಮಿಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ವಿವಿಧ ಹುದ್ದೆಗಳು, ಸ್ಥಾನಗಳು ಅಲಂಕಾರಿಸುವರು ಆಗಿದ್ದಾರೆ. ಮನೆಯೆ ಮೊದಲ ಪಾಠ ಶಾಲೆ ಆಗಿರುವುದರಿಂದ ಕುಟುಂಬದಿಂದ ಬಾಲ್ಯವನ್ನು ಕಾಪಾಡುವುದು, ಉತ್ತಮ ಸಂಸ್ಕಾರ, ಶಿಕ್ಷಣ, ಮೌಲ್ಯಗಳನ್ನು ನೀಡುವುದರ ಮೂಲಕ ದೇಶದ ಉತ್ತಮ ಪ್ರಜೆಯಾಗುವಂತೆ ಮಾಡುವುದು ಕುಟುಂಬ ಕರ್ತವ್ಯ ಕೂಡ ಆಗಿದೆʼ ಎಂದರು.
ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಇದನ್ನೂ ಓದಿ : ಬೀದರ್ | ನ.29, 30ರಂದು ಅನುಭವ ಮಂಟಪ ಉತ್ಸವ : ಸಾಧಕರಿಗೆ ವಿವಿಧ ಪ್ರಶಸ್ತಿ ಘೋಷಣೆ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಶ್ರೀಧರ ಎಂ.ಎಸ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರೂಪಾ ಕೋಟೆಗೌಡರ್, ಶಿಶು ಅಭಿವೃದ್ಧಿ ಅಧಿಕಾರಿ ಶಾರದಾ ಕಲ್ಮಲಕರ್, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಸುಭಾಷ್ ರತ್ನ, ಜಿಲ್ಲಾ ನಿರುಪಣಾಧಿಕಾರಿ ಶ್ರೀಕಾಂತ ಸೇರಿದಂತೆ ಇತರೆ ಅಧಿಕಾರಿಗಳು ಹಾಗೂ ಮಕ್ಕಳ ಉಪಸ್ಥಿತರಿದ್ದರು.





