ಬೀದರ್ | ಏ.24ರಂದು ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ

Date:

ಕೇಂದ್ರ ಸರ್ಕಾರವು ವಕ್ಫ್‌ ತಿದ್ದುಪಡಿ ಕಾಯ್ದೆ 2025 ಜಾರಿಗೊಳಿಸುತ್ತಿರುವುದನ್ನು ವಿರೋಧಿಸಿ ‘ವಕ್ಫ್‌ ತಿದ್ದುಪಡಿ ಕಾಯ್ದೆ 2025 ವಿರೋಧಿ ಜಂಟಿ ಕ್ರಿಯಾ ಸಮಿತಿ’ಯು ಏ. 24ರಂದು ನಗರದಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.

ಏ.24ರಂದು ಬೆಳಿಗ್ಗೆ 10ಕ್ಕೆ ಬೀದರ್ ನಗರದ ಜಾಮೀಯಾ ಮಸೀದಿಯಿಂದ ಪ್ರತಿಭಟನಾ ರ್‍ಯಾಲಿ ಆರಂಭವಾಗಲಿದೆ. ಮಹಮೂದ್ ಗಾವಾನ್ ಚೌಕ, ಶಹಾಗಂಜ್‌ ಮುಖ್ಯರಸ್ತೆ, ಕ್ರಾಂತಿ ಗಣೇಶ ಮೂಲಕ ಡಾ.ಬಿ.ಆರ್‌. ಅಂಬೇಡ್ಕರ್‌ ತಲುಪಲಿದೆ. ಅಲ್ಲಿ ಸಾರ್ವಜನಿಕ ಸಭೆ ನಡೆಸಿ, ಆನಂತರ ರಾಷ್ಟ್ರಪತಿ ಅವರ ಹೆಸರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿಗೆ ಸಲ್ಲಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದೇಶದ ಸಂವಿಧಾನ, ಜಾತ್ಯತೀತ ಸಿದ್ಧಾಂತ ಹಾಗೂ ಬಹುತ್ವ ಸಂಸ್ಕೃತಿಯಲ್ಲಿ ನಂಬಿಕೆ ಹೊಂದಿರುವ ಪ್ರಜ್ಞಾವಂತ ನಾಗರಿಕರು ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಸಮಿತಿ ಸಂಚಾಲಕ ಹಾಗೂ ಅಖಿಲ ಭಾರತ ಮುಸ್ಲಿಮ್ ವೈಯಕ್ತಿಕ ಕಾನೂನು ಮಂಡಳಿ ಸದಸ್ಯ ಅಬ್ದುಲ್ ಖದೀರ್ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...