ಬೀದರ್ |‌ ಹಾಸ್ಟೆಲ್‌ ನೌಕರರಿಗೆ ಮಾಸಿಕ ₹35 ಸಾವಿರ ವೇತನಕ್ಕೆ ಆಗ್ರಹಿಸಿ ಪ್ರತಿಭಟನೆ

Date:

ಹಾಸ್ಟೆಲ್‌ಗಳಲ್ಲಿ ಕೆಲಸ ಮಾಡುತ್ತಿರುವ ಹೊರಗುತ್ತಿಗೆ ನೌಕರರಿಗೆ ಮಾಸಿಕ ₹35 ಸಾವಿರ ವೇತನ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಈ ಸಂಬಂಧ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ ಹೊರಗುತ್ತಿಗೆ ನೌಕರರು ಹಲವು ವರ್ಷಗಳಿಂದ ಕಡಿಮೆ ಸಂಬಳಕ್ಕೆ ದುಡಿಯುತ್ತಿದ್ದಾರೆ. ಕೆಲ ವಸತಿ ನಿಲಯಗಳಲ್ಲಿ ವಾರ್ಡನ್‌, ಪ್ರಾಂಶುಪಾಲ ಕಿರುಕುಳಕ್ಕೆ ಒಳಗಾಗಿ ಅನಾರೋಗ್ಯದಿಂದ ಬಳಲುತ್ತಿದ್ದರೂ ರಜೆ ಪಡೆಯದೆ ಭಯದ ವಾತಾವರಣದಲ್ಲಿ ಕೆಲಸ ಮಾಡುತ್ತಿದ್ದಾರೆʼ ಎಂದು ಪ್ರತಿಭಟನಕಾರರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೊರಗುತ್ತಿಗೆ ನೌಕರರಿಗೆ ಕನಿಷ್ಠ ವೇತನ ₹35 ಸಾವಿರಕ್ಕೆ ಹೆಚ್ಚಿಸಬೇಕು. ನೌಕರರಿಗೆ ಸೇವಾ ಭದ್ರತೆ ಕೊಡಬೇಕು. ಖಾಯಂ ನೌಕರರ ಸ್ಥಳದಲ್ಲಿ ಮಾತ್ರ ಖಾಯಂ ನೌಕರರ ವರ್ಗಾವಣೆ ಮಾಡಬೇಕು. ಸಿಬ್ಬಂದಿ ಆದೇಶ ಹಿಂಪಡೆದು 100 ವಿದ್ಯಾರ್ಥಿಗಳಿಗೆ 5 ಜನ ಸಿಬ್ಬಂದಿಯನ್ನು ನೇಮಿಸಬೇಕು. ಈ ಹಿಂದೆ ಕೆಲಸ ಕಳೆದುಕೊಂಡ ನೌಕರರನ್ನು ಮರು ನೇಮಕ ಮಾಡಿಕೊಳ್ಳಬೇಕು. ಕಾರ್ಮಿಕ ಕಾನೂನು ಪ್ರಕಾರ ಕಡ್ಡಾಯವಾಗಿ ವಾರಕ್ಕೆ ಒಂದು ರಜೆ ನೀಡಬೇಕು. ಕೆಲಸದ ಸಮಯವನ್ನು ನಿಗದಿ ಮಾಡಬೇಕುʼ ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಸಮಿತಿಯ ಅಧ್ಯಕ್ಷ ಸೈಯದ್ ಇಸಾಮೋದ್ದೀನ್‌, ಕಾರ್ಯದರ್ಶಿ ವಸಂತ ರಾಠೋಡ್‌ ಸೇರಿದಂತೆ ಪ್ರಮುಖರಾದ ಅಂಬುಬಾಯಿ ಮಾಳಗೆ, ಲಖನ್‌ ಮಹಾಜನ್‌, ಚಂದ್ರಮ್ಮ, ಸವಿತಾ, ಮಹೇಶ ಕಾಟೆ, ಸುಶೀಲಾ, ಮಹಿಮುದಾ ಬೇಗಂ ಸೇರಿದಂತೆ ಹೊರಗುತ್ತಿಗೆ ನೌಕರರು, ಸಮಿತಿಯ ಪದಾಧಿಕಾರಿಗಳು ಭಾಗವಹಿಸಿದ್ದರು.

ಇದನ್ನೂ ಓದಿ : ಬೀದರ್‌ | ಪ್ರವಾಹ ಹಾನಿ : ಜನತಾ ಬ್ಯಾಂಕ್‌ನಿಂದ ಜಿಲ್ಲಾಡಳಿತಕ್ಕೆ ₹5 ಲಕ್ಷ ದೇಣಿಗೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...